ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಮಾಡುತ್ತಿದ್ದವರಿಗೆ ಯಮನಂತೆ ಎದುರಾದ ವಾಹನ, ಭೀಕರ ರಸ್ತೆ ಅಪಘಾತದಲ್ಲಿ 6 ಸಾವು

Road Accident: ಯಾತ್ರಾರ್ಥಿಗಳು ನಡೆದುಕೊಂಡು ಯಲ್ಲಮ್ಮ ದೇವಸ್ಥಾನಕ್ಕೆ ಹೊರಟ್ಟಿದ್ದರು. ಈ ವೇಳೆ ಪಾದಯಾತ್ರೆ ಹೊರಟವರನ್ನ ನಿಲ್ಲಿಸಿ ಬೊಲೆರೊ ವಾಹನದ ಚಾಲಕ ಡ್ರಾಪ್ ಕೊಡುವುದಾಗಿ ಹೇಳಿ ವಾಹನ ಹತ್ತಿಸಿಕೊಂಡಿದ್ದಾನೆ.

ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಮಾಡುತ್ತಿದ್ದವರಿಗೆ ಯಮನಂತೆ ಎದುರಾದ ವಾಹನ, ಭೀಕರ ರಸ್ತೆ ಅಪಘಾತದಲ್ಲಿ 6 ಸಾವು
ಘಟನಾ ಸ್ಥಳ
Follow us
| Updated By: ಆಯೇಷಾ ಬಾನು

Updated on:Jan 05, 2023 | 8:52 AM

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ(Road Accident) ಸಂಭವಿಸಿದ್ದು ಘಟನೆಯಲ್ಲಿ 6 ಜನ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ಕರ್ವ್ ಇರುವ ಕಾರಣ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿದೆ. ಈ ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಹನುಮವ್ವ(25), ದೀಪಾ(31), ಸವಿತಾ(17), ಸುಪ್ರಿತಾ(11), ಮಾರುತಿ(42), ಇಂದಿರವ್ವಾ(24) ಮೃತ ದುರ್ದೈವಿಗಳು.

ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಘಟನೆ ನಡೆದಿದೆ. ಅಪಘಾತಕ್ಕೀಡಾದ ಪಿಕ್ ಅಪ್ ಬೊಲೆರೊ ವಾಹನದಲ್ಲಿ 23 ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಇನ್ನು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಬಸವರಾಜ ಬೊಮ್ಮಾಯಿ‌ ಸೂಚಿಸಿದ್ದಾರೆ. ಹಾಗೂ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಡಿಸಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಸಿನಿಮಾ ಶೈಲಿಯಲ್ಲಿ ನಡೆಯಿತು ಬಾಲಕನ ಅಪಹರಣ, ಸಿಂಗಂ ಸ್ಟೈಲ್​ನಲ್ಲಿ ಪೊಲೀಸರ ಕಾರ್ಯಾಚರಣೆ

ನಡೆದುಕೊಂಡು ಹೋಗುತ್ತಿದ್ದವರಿಗೆ ಯಮನಂತೆ ಎದುರಾದ ವಾಹನ

ಮೃತ ಯಾತ್ರಾರ್ಥಿಗಳು ನಡೆದುಕೊಂಡು ಯಲ್ಲಮ್ಮ ದೇವಸ್ಥಾನಕ್ಕೆ ಹೊರಟ್ಟಿದ್ದರು. ಈ ವೇಳೆ ಪಾದಯಾತ್ರೆ ಹೊರಟವರನ್ನ ನಿಲ್ಲಿಸಿ ಬೊಲೆರೊ ವಾಹನದ ಚಾಲಕ ಡ್ರಾಪ್ ಕೊಡುವುದಾಗಿ ಹೇಳಿ ವಾಹನ ಹತ್ತಿಸಿಕೊಂಡಿದ್ದಾನೆ. ವಾಹನ ಹತ್ತಿದ ಕೆಲವೇ ನಿಮಿಷಗಳಲ್ಲಿ ರಸ್ತೆ ಅಪಘಾತವಾಗಿ ಆರು ಜನ ಮೃತಪಟ್ಟಿದ್ದಾರೆ.

ಬಟ್ಟೆ ಅಂಗಡಿ ಮಾಲೀಕನಿಗೆ ಚಾಕು ತೋರಿಸಿ ದರೋಡೆ

ಪುಂಡರ ಗ್ಯಾಂಗೊಂದು ಬಟ್ಟೆ ಅಂಗಡಿಗೆ ನುಗ್ಗಿ ದರೋಡೆ ಮಾಡಿದ ಘಟನೆ ಬೆಂಗಳೂರಿನ ಕೆ.ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಪುರ ಸಾಯಿಬಾಬ ಟೆಂಪಲ್ ಬಳಿ ನಡೆದಿದೆ. ಆಟೋದಲ್ಲಿ ಬಂದಿದ್ದ ಏಳು ಜನರ ಗ್ಯಾಂಗ್‌ ಬಟ್ಟೆ ಅಂಗಡಿ ಮಾಲೀಕನಿಗೆ ಚಾಕು ತೋರಿಸಿ ಬೆದರಿಸಿ ದರೋಡೆ ಮಾಡಿದ್ದಾರೆ. ಖದೀಮರು ಗಾಂಜಾ ನಶೆಯಲ್ಲಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಯುವಕರ ಕೃತ್ಯವನ್ನ ವಿರೋಧಿಸಿದಕ್ಕೆ ಅಂಗಡಿ ಮಾಲೀಕ ಹಾಗು ಸ್ಥಳೀಯರಿಗೆ ಮಾರಾಕಾಸ್ತ್ರ ತೋರಿಸಿ ಬೆದರಿಕೆವೊಡ್ಡಿ ಕೃತ್ಯ ಎಸಗಿ ಎಸ್ಕೇಪ್ ಆಗಿದ್ದಾರೆ. ಈ ಘಟನೆ ಜನವರಿ 4 ರಂದು ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:33 am, Thu, 5 January 23