AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ್ದಕ್ಕೆ SDPI ಆಕ್ಷೇಪ, ಫೋಟೋ ತೆರವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ - ಯಡೂರ ಮಾರ್ಗಮಧ್ಯ ಸಂಚರಿಸುವ ಸರ್ಕಾರಿ ಬಸ್​​ ಮೇಲೆ ಅಂಟಿಸಿರುವ ವೀರ ಸಾವರ್ಕರ್ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ, ಇದನ್ನು ಎಸ್​​ಡಿಪಿಐ ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ಪರಿಶೀಲನೆಗೆ NWKRTCಗೆ ವರ್ಗಾಯಿಸುತ್ತೇವೆ ಎಂದು KSRTC ಟ್ವೀಟ್ ಮಾಡಿದೆ.

ಸರ್ಕಾರಿ ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ್ದಕ್ಕೆ SDPI ಆಕ್ಷೇಪ, ಫೋಟೋ ತೆರವು
ಸರ್ಕಾರಿ ಬಸ್​​ನಲ್ಲಿ ವೀರ ಸಾವರ್ಕರ್ ಫೋಟೋ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Aug 17, 2023 | 9:29 PM

Share

ಚಿಕ್ಕೋಡಿ, ಆಗಸ್ಟ್ 17: ಬೆಳಗಾವಿ (Belagavi) ಜಿಲ್ಲೆಯಲ್ಲಿ ಸರ್ಕಾರಿ ಬಸ್ ಮೇಲೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಚಿತ್ರ ಅಂಟಿಸಿರುವುದ ಇದೀಗ ವಿವಾದಕ್ಕೆ ಕಾರಣವಾಗಿದೆ. ಚಿಕ್ಕೋಡಿ ಮತ್ತು ಯಡೂರ ಮಾರ್ಗದ ಮಧ್ಯೆ ಸಂಚರಿಸುವ ಸರ್ಕಾರಿ ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ್ದಕ್ಕೆ ನಿಷೇಧಿತ ಪಿಎಫ್​​ಐ ಸಂಘಟನೆಯ ರಾಜಕೀಯ ಪಕ್ಷ ಎಸ್​ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

KA 23 F 904 ಸಂಖ್ಯೆಯ ಚಿಕ್ಕೋಡಿ – ಯಡೂರ ಮಾರ್ಗಮಧ್ಯ ಸಂಚರಿಸುವ ಬಸ್ ಮೇಲೆ ಸಾವರ್ಕರ್ ಚಿತ್ರ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಡಿಪೋಗೆ ಸೇರಿದ NWKRTC ಬಸ್ ಇದಾಗಿದೆ.

ಇದನ್ನೂ ಓದಿ: ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ದನಿಗೂಡಿಸಿದ ಬಿಜೆಪಿ ಸಂಸದ ಜೊಲ್ಲೆ, ಬೆಳಗಾವಿ ವಿಭಜಿಸುತ್ತಾ ಕಾಂಗ್ರೆಸ್ ಸರ್ಕಾರ?

ಫೋಟೋ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿ ಆಗಸ್ಟ್ 15 ರಂದು ಟ್ವೀಟ್ ಮಾಡಿದ ಎಸ್‌ಡಿಪಿಐ ಮುಖಂಡ ಅಫ್ಸರ್ ಕೊಡ್ಲಿಪೇಟೆ, ಸರ್ಕಾರಿ ಬಸ್ಸುಗಳ ಮೇಲೆ ವಿವಾದಾತ್ಮಕ ವ್ಯಕ್ತಿಗಳ ಫೋಟೋ ಹಾಕುವುದು ಎಷ್ಟು ಸರಿ? ಬ್ರಿಟೀಷರಿಗೆ ಕ್ಷಮಾಪಣೆ ಪತ್ರ ಬರೆದುಕೊಟ್ಟ, ಬ್ರಿಟೀಷರೊಂದಿಗೆ ರಾಜಿ ಮಾಡಿಕೊಂಡ ಸ್ವಯಂ ಘೋಷಿತ ವೀರ ಸಾವರ್ಕರ್ ಈ ಚಿತ್ರ ಚಿಕ್ಕೋಡಿ ಬಸ್ಸುಗಳಲ್ಲಿ ಬಳಸುವುದು ಸ್ವಾತಂತ್ರ್ಯ ಸೇನಾನಿಗಳಿಗೆ ಮಾಡುವ ಅವಮಾನವಲ್ಲವೇ? ಎಂದು ಬರೆದುಕೊಂಡಿದ್ದಾರೆ.

ಅಫ್ಸರ್ ಕೊಡ್ಲಿಪೇಟೆಗೆ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಕೆಎಸ್‌ಆರ್‌ಟಿಸಿ, ಮುಂದಿನ ಪರಿಶೀಲನೆಗೆ NWKRTCಗೆ ವರ್ಗಾಯಿಸುತ್ತೇವೆ ಎಂದು ಹೇಳಿದೆ. ಅಫ್ಸರ್ ಕೊಡ್ಲಿಪೇಟೆ ಟ್ವೀಟ್ ಮಾಡಿದ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ ಬಗ್ಗೆ ಮಾಹಿತಿ ಇಲ್ಲ ಎಂದು NWKRTC ಚಿಕ್ಕೋಡಿ ವಿಭಾಗದ ಅಧಿಕಾರಿಗಳು ಹೇಳುತ್ತಿದ್ದಾರೆ. ಸದ್ಯ ಆ ಬಸ್​ನಲ್ಲಿ ಫೋಟೋ ತೆರವು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು