ಬೆಳಗಾವಿಯಲ್ಲಿ ಪುಂಡಾಟಿಕೆ ಪ್ರಕರಣ: ನಿಷೇಧಾಜ್ಞೆ ಮುಂದುವರಿಕೆ; ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಪ್ರಕರಣ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ತಾಲೂಕಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ. ಡಿಸೆಂಬರ್ 20ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ.

ಬೆಳಗಾವಿಯಲ್ಲಿ ಪುಂಡಾಟಿಕೆ ಪ್ರಕರಣ: ನಿಷೇಧಾಜ್ಞೆ ಮುಂದುವರಿಕೆ; ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಎಂಇಎಸ್​ ಪುಂಟಾಟಿಕೆ ಖಂಡಿಸಿ ಪ್ರತಿಭಟನೆ
Follow us
TV9 Web
| Updated By: ganapathi bhat

Updated on: Dec 18, 2021 | 7:24 PM

ಬೆಂಗಳೂರು: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಭಾಗ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಹೋಟೆಲ್​ಗಳ ಸಂಘದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಭಾಷೆಯ ಹೆಸರನ್ನು ಮುಂದಿಟ್ಟುಕೊಂಡು ಅನಗತ್ಯ ಪುಂಡಾಟಿಕೆ ಮಾಡಲಾಗಿದೆ. ಮಹಾರಾಷ್ಟ್ರ ಗಡಿಪ್ರದೇಶದಲ್ಲಿ ಹೋಟೆಲ್​ಗಳ ಮೇಲೆ ಪುಂಡಾಟ ನಡೆಸಲಾಗಿದೆ. ಹೋಟೆಲ್​ಗಳ ಮೇಲೆ ಪುಂಡಾಟಿಕೆ ಮಾಡಿದ್ದು ಖಂಡನಿಯ. ಆತಿಥ್ಯ ಕ್ಷೇತ್ರದಲ್ಲಿ ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ. ನಾವು ಎಲ್ಲ ಭಾಷೆ, ಜಾತಿ, ಮತದವರನ್ನ ಸಮಾನವಾಗಿ ನೋಡ್ತೇವೆ. ನಮ್ಮ ಉದ್ಯಮಕ್ಕೆ ತೊಂದರೆ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲಿನ ಸರ್ಕಾರಗಳು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಿ. ಕರ್ನಾಟಕ ಸರ್ಕಾರವೂ ಕನ್ನಡಿಗರಿಗೆ ನಮ್ಮ ನಾಡಿನಲ್ಲಿ, ಹೊರ ರಾಜ್ಯಗಳಲ್ಲಿ ತೊಂದರೆಯಾಗುವುದನ್ನ ತಡೆಗಟ್ಟಬೇಕು ಎಂದು ಮಾಧ್ಯಮ ಪ್ರಕಟಣೆ ಮೂಲಕ ಸರ್ಕಾರಕ್ಕೆ ಬೃಹತ್ ಬೆಂಗಳೂರು ಹೋಟೆಲ್​​ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಪ್ರಕರಣ ಖಂಡಿಸಿ ಬೃಹತ್ ಬೆಂಗಳೂರು ಹೋಟೆಲ್​ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಭಾಷೆಯ ಹೆಸರನ್ನು ಮುಂದಿಟ್ಟುಕೊಂಡು ಮಹಾರಾಷ್ಟ್ರ ಗಡಿಪ್ರದೇಶದಲ್ಲಿ ಹೋಟೆಲ್​ಗಳ ಮೇಲೆ ಪುಂಡಾಟ ಮಾಡಿರುವ ಆರೋಪಿಗಳ ವಿರುದ್ಧ ಸರ್ಕಾರಗಳು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.

ಬೆಳಗಾವಿ: ಬೆಳಗಾವಿ ನಗರ, ತಾಲೂಕಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಪ್ರಕರಣ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ತಾಲೂಕಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ. ಡಿಸೆಂಬರ್ 20ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ತ್ಯಾಗರಾಜನ್ ಈ ಬಗ್ಗೆ ಆದೇಶ‌ ಹೊರಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಪುಂಡಾಟಿಕೆ ಪ್ರಕರಣ: ಘಟನೆಗೆ ಪೊಲೀಸರ ವೈಫಲ್ಯವೇ ನೇರ ಕಾರಣ- ಶಾಸಕ ಅಭಯ್ ಪಾಟೀಲ್ ಆರೋಪ

ಇದನ್ನೂ ಓದಿ: ಕನ್ನಡಿಗರು ಮರಾಠಿಗರ ಗುದ್ದಾಟ, ಗಡಿ ವಿವಾದ; ಡಿಸೆಂಬರ್ 13 ರಿಂದ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ