ಪ್ರತ್ಯೇಕ ಘಟನೆ: ಮಳೆಯಿಂದ ಮನೆಗೋಡೆ ಕುಸಿದು ಅಥಣಿಯಲ್ಲಿ ಯುವಕ, ವಿಜಯನಗರದಲ್ಲಿ ವೃದ್ಧೆ ಸಾವು

ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಈ ಹಿನ್ನಲೆ ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿದೆ. ಅದರಂತೆ ಅನೇಕ ಜಿಲ್ಲೆಗಳ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದೀಗ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಗಸಿಯಲ್ಲಿ ಮನೆಗೋಡೆ ಕುಸಿದು 23 ವರ್ಷದ ಯುವಕ ಸಾವನ್ನಪ್ಪಿದ್ದರೆ, ಇತ್ತ ವಿಜಯನಗರದಲ್ಲೂ ವೃದ್ಧೆ ಕೊನೆಯುಸಿರೆಳೆದ ಧಾರುಣ ಘಟನೆ ನಡೆದಿದೆ.

ಪ್ರತ್ಯೇಕ ಘಟನೆ: ಮಳೆಯಿಂದ ಮನೆಗೋಡೆ ಕುಸಿದು ಅಥಣಿಯಲ್ಲಿ ಯುವಕ, ವಿಜಯನಗರದಲ್ಲಿ ವೃದ್ಧೆ ಸಾವು
ಮೃತ ವೃದ್ಧೆ, ಯುವಕ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 27, 2023 | 9:42 AM

ಬೆಳಗಾವಿ, ಜು.27: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಈ ಹಿನ್ನಲೆ ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿದೆ. ಅದರಂತೆ ಅನೇಕ ಜಿಲ್ಲೆಗಳ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದೀಗ ಬೆಳಗಾವಿ(Belagavi) ಜಿಲ್ಲೆಯ ಅಥಣಿ ಪಟ್ಟಣದ ಅಗಸಿಯಲ್ಲಿ ಮಳೆಯಿಂದ ಮನೆಗೋಡೆ ಕುಸಿದು 23 ವರ್ಷದ ಯುವಕ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಕಾಶಿನಾಥ್ ಸುತಾರ್(23) ಮೃತ ರ್ದುದೈವಿ. ನಿರಂತರ ಮಳೆಗೆ ಮನೆ ಗೋಡೆ ನೆನೆದು ಈ ಅವಘಡ ಸಂಭವಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಗಳಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ವೃದ್ಧೆ ಸಾವು

ವಿಜಯನಗರ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭರ್ಜರಿ ಮಳೆಯಾಗುತ್ತಿದ್ದು, ಕೊಟ್ಟೂರು ತಾಲೂಕಿನ‌ ಕೋಗಳಿ ಗ್ರಾಮದಲ್ಲಿ ನಿನ್ನೆ(ಜು.26) ರಾತ್ರಿ ಮನೆಗೋಡೆ ಕುಸಿದು ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ 60 ವರ್ಷದ ಹಿರಿಯಮ್ಮ ಕೊನೆಯುಸಿರೆಳೆದಿದ್ದಾಳೆ. ಈ ಘಟನೆ ಹೂವಿನಹಡಗಲಿ ತಾಲೂಕಿನ ಇಟಗಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ಧಾರಾಕಾರ ಮಳೆ, ರೆಡ್ ಅಲರ್ಟ್​ ಘೋಷಣೆ

ನಿನ್ನೆ ಅಡಿಕೆ ತೋಟ ನೋಡಲು ಹೋಗಿದ್ದ ವೃದ್ಧೆ ಸಾವು

ರಾಜ್ಯದಲ್ಲಿ ಮಳೆಗೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಅನೇಕರು ಸಾವನ್ನಪ್ಪಿದ್ದಾರೆ. ಅದರಂತೆ ನಿನ್ನೆ(ಜು.26) ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಹೊಸಸಿದ್ರಳ್ಳಿ ಗ್ರಾಮದಲ್ಲಿ ಅಧಿಕ ಮಳೆಯಿಂದ ಮುಳುಗಡೆಯಾದ ಅಡಿಕೆ ತೋಟ ನೋಡಲು ಹೋಗಿದ್ದ ವೃದ್ಧೆ ಸಾವನ್ನಪ್ಪಿರುವ ಘಟನೆ ನಡೆದಿತ್ತು. ರಾಮಮ್ಮ (65) ಮೃತ ವೃದ್ಧೆ. ಹೀಗೆ ತೋಟಕ್ಕೆ ಹೋದ ರಾಮಮ್ಮ ಮರಳಿ ಬಾರದ ಹಿನ್ನೆಲೆ ಕುಟುಂಬಸ್ಥರು ಅವರನ್ನು ಹುಡುಕಿದ್ದಾರೆ. ಈ ವೇಳೆ ತಾಯಿಹಳ್ಳದ ಬಳಿ ರಾಮಮ್ಮ ಅವರ ಚಪ್ಪಲಿ ಉರುಗೋಲು ಪತ್ತೆಯಾಗಿತ್ತ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿಯವರು ಮೃತ ದೇಹವನ್ನ ಹೊರಗಡೆ ತಗೆದಿದ್ದರು.

ಮನೆಗೋಡೆ ಕುಸಿದು ಬಾಲಕಿ ಗಾಯ

ಬಾಗಲಕೋಟೆ:  ತೇರದಾಳ ಪಟ್ಟಣದ ಹಿರೇಮಠ ಗಲ್ಲಿಯಲ್ಲಿ ಮನೆಗೋಡೆ ಕುಸಿದು ಬಾಲಕಿ ಗಾಯಗೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಗಾಯಾಳು ಅಶ್ವಿನಿ ಪಾರಾಗಿದ್ದು, ತೇರದಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:25 am, Thu, 27 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ