AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಧಿವೇಶನದಲ್ಲೂ ಮೊಳಗಲಿದೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗು: ರಾಜು ಕಾಗೆ ಸೇರಿ 26 ಶಾಸಕರು ಸಿದ್ಧ!

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ತೀವ್ರಗೊಂಡಿದೆ. ಬೆಳಗಾವಿ ಅಧಿವೇಶನದಲ್ಲಿ ರಾಜು ಕಾಗೆ ಸೇರಿ 26 ಶಾಸಕರು ಪ್ರತ್ಯೇಕ ರಾಜ್ಯದ ಬೇಡಿಕೆ ಇಡಲಿದ್ದಾರೆ. 15 ಜಿಲ್ಲೆಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ತಿಳಿಸಿದ್ದಾರೆ. ತೆಲಂಗಾಣ ಮಾದರಿ ಹೋರಾಟಕ್ಕೆ ಸಿದ್ಧತೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಬೆಳಗಾವಿ ಅಧಿವೇಶನದಲ್ಲೂ ಮೊಳಗಲಿದೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗು: ರಾಜು ಕಾಗೆ ಸೇರಿ 26 ಶಾಸಕರು ಸಿದ್ಧ!
ಬೆಳಗಾವಿ ಅಧಿವೇಶನದಲ್ಲೂ ಮೊಳಗಲಿದೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗು (ಸಾಂದರ್ಭಿಕ ಚಿತ್ರ)
Sahadev Mane
| Edited By: |

Updated on: Nov 22, 2025 | 12:53 PM

Share

ಬೆಳಗಾವಿ, ನವೆಂಬರ್ 22: ರಾಜ್ಯ ರಾಜಕೀಯದಲ್ಲಿ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗು (Separate North Karnataka State) ತೀವ್ರಗೊಳ್ಳುವ ಸುಳಿವು ದೊರೆತಿದೆ. ಬೆಳಗಾವಿ (Belagavi) ಅಧಿವೇಶನದಲ್ಲಿ ಶಾಸಕ ರಾಜು ಕಾಗೆ (Raju Kage) ಸೇರಿ 26 ಶಾಸಕರು ಪ್ರತ್ಯೇಕ ರಾಜ್ಯದ ಬೇಡಿಕೆ ಇಡಲಿದ್ದಾರೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ಶನಿವಾರ ಮಾಹಿತಿ ನೀಡಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದು ದೀರ್ಘಕಾಲದಿಂದ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಹಾಗೂ ಅಭಿವೃದ್ಧಿ ನಿರ್ಲಕ್ಷ್ಯದ ಬಗ್ಗೆ ಗಂಭೀರವಾಗಿ ಧ್ವನಿ ಎತ್ತಿದ್ದಾರೆ. ಈ ಪತ್ರ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ನಾಗೇಶ್ ಗೋಲಶೆಟ್ಟಿ ಮಾಹಿತಿ ಪ್ರಕಾರ, ಈಗಾಗಲೇ 1,48,91,346 ಜನ ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಡಿಸೆಂಬರ್ 8 ರಂದು ಬೆಳಗಾವಿಯಲ್ಲಿ 26 ಜನ ಶಾಸಕರ ಸಭೆ ಕರೆಯಲಾಗಿದೆ. ಡಿಸೆಂಬರ್ 11 ರಂದು ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಪ್ರತ್ಯೇಕ ರಾಜ್ಯದ ಕುರಿತು ಅಧಿಕೃತವಾಗಿ ಧ್ವನಿ ಎತ್ತಲಾಗುತ್ತದೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗಿಗೆ ಯಾರೆಲ್ಲ ಬೆಂಬಲ?

ರಾಜು ಕಾಗೆ ನೇತೃತ್ವದ ಈ ಹೋರಾಟಕ್ಕೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಉತ್ತರ ಕನ್ನಡ ಸೇರಿದಂತೆ 15 ಜಿಲ್ಲೆಗಳ ಶಾಸಕರಿಂದ ಪಕ್ಷಾತೀತ ಬೆಂಬಲ ದೊರೆತಿದೆ. ಇವರಲ್ಲಿ ಸಿದ್ದು ಸವದಿ, ವಿಜಯಾನಂದ ಕಾಶಪ್ಪನವರ, ಬಸನಗೌಡ ಪಾಟೀಲ್ ಯತ್ನಾಳ್, ಶರಣು ಸಲಗರ, ಶರಣಪ್ರಕಾಶ ಪಾಟೀಲ್, ವಿನಯ ಕುಲಕರ್ಣಿ, ಅರವಿಂದ ಬೆಲ್ಲದ, ಜನಾರ್ದನ ರೆಡ್ಡಿ, ನಾರಾ ಭರತ ರೆಡ್ಡಿ ಮತ್ತು ನಿಖಿಲ್ ಕತ್ತಿ ಸೇರಿದಂತೆ ಹಲವರು ಇದ್ದಾರೆ ಎಂದು ನಾಗೇಶ್ ಗೋಲಶೆಟ್ಟಿ ತಿಳಿಸಿದ್ದಾರೆ.

ತೆಲಂಗಾಣ ಮಾದರಿ ಹೋರಾಟಕ್ಕೆ ಸಿದ್ಧ: ನಾಗೇಶ್ ಗೋಲಶೆಟ್ಟಿ

ಬೆಂಗಳೂರಿನ ಅಭಿವೃದ್ಧಿಗೆ ಉತ್ತರ ಕರ್ನಾಟಕದ ಜನರ ಹೋರಾಟ ಹಾಗೂ ಹೂಡಿಕೆ ಕಾರಣವಾಗಿದೆ. ಆದರೆ, ಕೃಷ್ಣಾ ಮೇಲ್ದಂಡೆ ಯೋಜನೆಗೆ ವರ್ಷಗಳಿಂದ ಸರಕಾರ ಅನುದಾನ ಕೊಡದಿರುವುದು ವಿಷಾದನೀಯ. ನಮ್ಮ ಬೇಡಿಕೆಗಳನ್ನು ಸಾಧಿಸಲು ತೆಲಂಗಾಣ ಮಾದರಿಯ ಹೋರಾಟ ನಡೆಸಲು ಸಿದ್ಧರಾಗಿದ್ದೇವೆ ಎಂದು ನಾಗೇಶ್ ಗೋಲಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ: ಕಾಂಗ್ರೆಸ್​ ಶಾಸಕನಿಂದಲೇ ಸರ್ಕಾರಕ್ಕೆ ಪತ್ರ

ಈಗ ನಾವು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಉಗ್ರ ಹೋರಾಟ ಮಾಡುತ್ತೇವೆ. ಆದರೆ, ಸರ್ಕಾರ ಎಚ್ಚೆತ್ತುಕೊಳ್ಳುವ ಸಾಧ್ಯತೆ ಕಾಣಿಸುತ್ತಿಲ್ಲ. ಬೆಂಗಳೂರಿನ ವಿಧಾನಸೌಧದ ಧ್ವಂಸ ಮಾಡಿದ ಮೇಲೆಯೇ ಸರ್ಕಾರ ಎಚ್ಚೆತ್ತುಕೊಳ್ಳವ ಸಾಧ್ಯತೆಯಿದೆ. ಅಲ್ಲಿಯವರೆಗೂ ನಮ್ಮ ಹೋರಾಟಕ್ಕೆ ಸರ್ಕಾರ ಕಿವಿಕೊಡುವುದಿಲ್ಲ. ಪ್ರತ್ಯೇಕ ರಾಜ್ಯಕ್ಕಾಗಿ ನಾವು ಉಗ್ರ, ಕ್ರೂರ ಮತ್ತು ತೆಲಂಗಾಣ ಮಾದರಿ ಹೋರಾಟ ಮಾಡುತ್ತೇವೆ. ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಸಹ ಬೆಂಬಲಿಸಿದ್ದಾರೆ ಎಂದು ನಾಗೇಶ್ ಗೋಲಶೆಟ್ಟಿ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು