ಬೆಳಗಾವಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ: 7ಕ್ಕೂ ಹೆಚ್ಚು ಜನರಿಗೆ ಗಾಯ
ಬೆಳಗಾವಿ ತಾಲೂಕಿನ ವಂಟಮೂರಿ ಘಾಟ್ (ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4)ರಲ್ಲಿ ಸರಣಿ ಅಪಘಾತ ಸಂಭವಿಸಿದೆ.
ಬೆಳಗಾವಿ: ಬೆಳಗಾವಿ (Belagavi) ತಾಲೂಕಿನ ವಂಟಮೂರಿ ಘಾಟ್ (ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4) (Pune-Bengaluru National Highway) ರಲ್ಲಿ ಸರಣಿ ಅಪಘಾತ (Accident) ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದ್ದ ಲಾರಿಗೆ 3 ಕಾರುಗಳು ಡಿಕ್ಕಿ ಹೊಡೆದ ಪರಿಣಾಮ 7ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಅಪಘಾತ ಸ್ಥಳಕ್ಕೆ ಬೆಳಗಾವಿ ಡಿಸಿಪಿ ಸ್ನೇಹಾ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ