ಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ, ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟ ಶಿವಸೇನೆ ಪುಂಡರು

| Updated By: Digi Tech Desk

Updated on: Jan 08, 2022 | 5:11 PM

ಬೆಳಗಾವಿ-ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದಾರೆ. ಸಿಎಂ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ, ಬಳಿಕ ಪ್ರತಿಕೃತಿ ದಹನ ಮಾಡಿದ್ದಾರೆ. ಶಿವಸೇನೆಯ ಪ್ರಮುಖರಾದ ಚಂದ್ರಕಾಂತ ಮೈಗುರೆ ನೇತೃತ್ವದಲ್ಲಿ ಈ ರೀತಿ ಪುಂಡಾಟ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ, ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟ ಶಿವಸೇನೆ ಪುಂಡರು
ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುತ್ತಿದ್ದಾರೆ
Follow us on

ಬೆಳಗಾವಿ: ರಾಜ್ಯದಲ್ಲಿ ಎಂಇಎಸ್ ಮತ್ತು ಶಿವಸೇನೆ ಪುಂಡರ ಪುಂಡಾಟಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕನ್ನಡ ಧ್ವಜ ಸುಟ್ಟಿ, ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಧ್ವಂಸಗೊಳಿಸಿ ಕನ್ನಡಿಗರನ್ನ ಕೆರಳಿಸಿದ್ದಾರೆ. ಎಂಇಎಸ್ ಮತ್ತು ಶಿವಸೇನೆ ನಿಷೇಧಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಬೃಹತ್ ಹೋರಾಟ ನಡೆಸಿದ್ದಾರೆ. ಹೀಗಿದ್ದು, ಬೆಳಗಾವಿ ಗಡಿಯಲ್ಲಿ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ, ಪುಂಡಾಟಿಕೆ ಮೆರೆದಿದ್ದಾರೆ.

ಬೆಳಗಾವಿ-ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದಾರೆ. ಸಿಎಂ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ, ಬಳಿಕ ಪ್ರತಿಕೃತಿ ದಹನ ಮಾಡಿದ್ದಾರೆ. ಶಿವಸೇನೆಯ ಪ್ರಮುಖರಾದ ಚಂದ್ರಕಾಂತ ಮೈಗುರೆ ನೇತೃತ್ವದಲ್ಲಿ ಈ ರೀತಿ ಪುಂಡಾಟ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಪ್ರತಿಕೃತಿ ಜತೆಗೆ ಕನ್ನಡ ಬಾವುಟಕ್ಕೂ ಬೆಂಕಿ ಹಚ್ಚಿದ್ದಾರೆ.

ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಆರೋಪಿಗಳು ಅರೆಸ್ಟ್
ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಸಂಜು ಗುರವ್, ಸಚಿನ್ ಗುರವ್, ಗಣೇಶ ಪೆಡ್ನೇಕರ್ ಎಂಬುವವರು ಅರೆಸ್ಟ್ ಆಗಿದ್ದಾರೆ. ಬಂಧಿತ ಆರೋಪಿಗಳು ಮೊನ್ನೆ ರಾತ್ರಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ, ನಂತರ ಧ್ವಜ ಕಟ್ಟೆಗೆ ಮಸಿ ಬಳಿದು ವಿಕೃತಿ ಮೆರೆದಿದ್ದರು. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120Bರಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ

ವಿಚ್ಛೇದನದಿಂದ ಸಮಂತಾ 50 ಕೋಟಿ ರೂ. ದರೋಡೆ ಮಾಡಿದ್ದಾರೆ ಎಂದ ನೆಟ್ಟಿಗ: ನಟಿಯ ಖಡಕ್​ ಉತ್ತರವೇನು?

ಭಾರತದಲ್ಲಿ ಏರುತ್ತಿರುವ ಒಮಿಕ್ರಾನ್​ ಪ್ರಕರಣ, 3ನೇ ಅಲೆ ಆತಂಕ; ನಾಳೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

Published On - 2:21 pm, Wed, 22 December 21