ಲಿಂಗಾಯತರು ಹಿಂದೂಗಳಲ್ಲ ಎಂಬ ನಿರ್ಣಯಕ್ಕೆ ಬಿಎಸ್ವೈ, ಪಂಚಾಚಾರ್ಯರ ನಿಲುವೇನು? ಜಾಮದಾರ್
ಎಲ್ಲ ಲಿಂಗಾಯತರು ಧರ್ಮದ ಕಾಲಂನಲ್ಲಿ ವೀರಶೈವ ಎಂದು ಬರೆಸಬೇಕು ಎನ್ನುವ ವಿರೇಶೈವ ಸಮ್ಮೇಳನದ ನಿರ್ಣಯದ ಬಗ್ಗೆಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್ ಪ್ರತಿಕ್ರಿಯಿಸಿದ್ದು, ಈಗ ಲಿಂಗಾಯತರು ಹಿಂದೂಗಳಲ್ಲ ಎಂಬ ನಿರ್ಣಯದ ಬಗ್ಗೆ ಯಡಿಯೂರಪ್ಪ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೆಳಗಾವಿ, (ಡಿಸೆಂಬರ್ 26): 24ನೇ ಸಮ್ಮೇಳನದಲ್ಲಿ ಕೈಗೊಂಡ ಏಳು ನಿರ್ಣಯ ಸ್ವಾಗತ. ವಿರೇಶೈವ ಸಮ್ಮೇಳನದಲ್ಲಿ ಮೂವರು ಪಂಚಾಚಾರ್ಯರು ಭಾಗಿಯಾಗಿದ್ದರು. ಅವರ ಸಮ್ಮುಖದಲ್ಲಿ ಲಿಂಗಾಯತರು ಹಿಂದುಗಳಲ್ಲ ಎಂದು ನಿರ್ಣಯ ಮಂಡನೆ ಮಾಡಲಾಗಿದೆ. 2017ರಲ್ಲಿ ಲಿಂಗಾಯತ ಧರ್ಮದ ಹೋರಾಟಕ್ಕೆ ವಿರೋಧ ಮಾಡಿದ್ರು. ಈಗ ವೀರಶೈವ ಮಹಾಸಭೆ ಲಿಂಗಾಯತರು ಹಿಂದುಗಳಲ್ಲ ಎಂದು ಘೋಷಿಸಿದೆ. ಪಂಚಾಚಾರ್ಯರು ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್ (sm jamadar)ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು (ಡಿಸೆಂಬರ್ 26) ಸುದ್ದಿಗಾರರೊಂದಿಗೆ ಮಾತನಾಡಿದ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್, 2017ರಲ್ಲಿ ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟ ಮಾಡಿತ್ತು. ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರೋಧಿಸಿದ್ದರು. ಈಗ ಇಬ್ಬರು ಅಧಿವೇಶನದಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದಾರೆ. ಇನ್ನೂ ಯಡಿಯೂರಪ್ಪರ ಓರ್ವ ಮಗಳು ಮಹಾಸಭೆ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸಹ ಆಗಿದ್ದಾರೆ. ಈಗ ಲಿಂಗಾಯತರು ಹಿಂದೂಗಳಲ್ಲ ಎಂಬ ನಿರ್ಣಯ ತೆಗೆದುಕೊಂಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಈಗ ಅವರ ನಿಲುವು ಸ್ಪಷ್ಟ ಪಡಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಎಲ್ಲ ಲಿಂಗಾಯತರು ಧರ್ಮದ ಕಾಲಂನಲ್ಲಿ ವೀರಶೈವ ಎಂದು ಬರೆಸಬೇಕು ಸೇರಿದಂತೆ 8 ನಿರ್ಣಯ ಮಂಡನೆ
ಜಾತಿ ಗಣತಿ ವರದಿ ಸರ್ಕಾರ ಸ್ವೀಕಾರ ಮಾಡಬೇಕು. ವರದಿ ಬಿಡುಗಡೆ ಮೊದಲೇ ವಿರೋಧ ಮಾಡುವುದು ಸರಿಯಲ್ಲ. ವರದಿ ಬಗ್ಗೆ ವಿಧಾನಸಭೆ, ಪರಿಷತ್ ನಲ್ಲಿ ವಿಸ್ತೃತ ಚರ್ಚೆ ಆಗಬೇಕು. ಆಮೇಲೆ ಒಪ್ಪಿವುದು ಬಿಡುಗಡೆ ಸರ್ಕಾರಕ್ಕೆ ಬಿಟ್ಟಿದ್ದು. ಈಗಲೇ ವರದಿಗೆ ವಿರೋಧ ಮಾಡೊದು ತಪ್ಪು ಎಂದರು.
ನಿರ್ಣಯವೇನು?
ಅಖಿಲ ಭಾರತ ವೀರಶೈವ ಮಹಾಸಭಾದ 24ನೇ ಮಹಾಅಧಿವೇಶನದಲ್ಲಿ(lingayat 24th Maha Adhiveshan) 8 ನಿರ್ಣಯಗಳನ್ನು ಮಂಡನೆ ಮಾಡಲಾಗಿದೆ. ಮೊನ್ನೆ ದಾವಣಗೆರೆಯ(Davanagere) ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ನಡೆದ 24ನೇ ಮಹಾಅಧಿವೇಶನದಲ್ಲಿ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಎಂಟು ನಿರ್ಣಯ ಮಂಡನೆ ಮಾಡಿದ್ದರು. ಎಲ್ಲ ಲಿಂಗಾಯತರು ಧರ್ಮದ ಕಾಲಂನಲ್ಲಿ ವೀರಶೈವ ಎಂದು ಬರೆಸಬೇಕು ಎನ್ನುವ ನಿರ್ಣಯ ಮಂಡಿಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:55 pm, Tue, 26 December 23