ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಜಟಾಪಟಿ ಮಧ್ಯೆ ಪ್ರವೇಶಿಸಿದ ಶ್ರೀಶೈಲ ಪೀಠದ ಜಗದ್ಗುರು
ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರು ಕಂಗಾಲಾಗಿದ್ದಾರೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಕಿಚ್ಚು ಕಡಿಮೆಯಾಗ್ತಿಲ್ಲ. ಬಿಕ್ಕಟ್ಟು ಬಗೆಹರಿಯುತ್ತಿಲ್ಲ..ಲಿಂಗಾಯಿತರಿಗೆ ಅನ್ಯಾಯವಾಗುತ್ತಿದೆ ಎನ್ನುವ ಶಾಮನೂರು ಶಿವಶಂಕರಪ್ಪ ಹೇಳಿಕೆ ಈಗ ಕಾಂಗ್ರೆಸ್ ನಾಯಕರಿಗೆ ತಲೆನೋವು ತಂದಿಟ್ಟಿದೆ. ಶಿವಶಂಕರಪ್ಪ ಹೇಳಿಕೆ ಬಗ್ಗೆ ಕ್ಯಾಬಿನೆಟ್ನಲ್ಲೂ ಬಿಸಿ ಬಿಸಿ ಚರ್ಚೆಯಾಗಿದೆ. ಇದನ್ನೇ ಅಸ್ತ್ರವನ್ನಾಗಿ ಬಳಸಿಕೊಳ್ಳು ಬಿಜೆಪಿ ಮುಂದಾಗಿದೆ. ಇನ್ನು ಇದೆಲ್ಲದರ ಮಧ್ಯೆ ಇದೀಗ ಇದರಲ್ಲಿ ಶ್ರೀಶೈಲ ಪೀಠದ ಜಗದ್ಗುರುಗಳು ಎಂಟ್ರಿ ಕೊಟ್ಟಿದ್ದಾರೆ.
ಬೆಳಗಾವಿ, (ಅಕ್ಟೋಬರ್ 08): ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರು (Lingayat officials) ಕಂಗಾಲಾಗಿದ್ದಾರೆ ಎಂಬ ಶಾಮನೂರು ಶಿವಶಂಕರಪ್ಪ (Shamanur Shivashankarappa)ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಆದ್ರೆ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿರುವ ಕೈ ನಾಯಕರು ಹೇಗಾದ್ರೂ ಮಾಡಿ ಈ ಇಕ್ಕಟ್ಟಿನಿಂದ ಪಾರಾಗಬೇಕೆಂದು ಪ್ಲ್ಯಾನ್ ಮಾಡಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲೂ ಇದೇ ಬಗ್ಗೆ ಚರ್ಚೆ ನಡೆಸಲಾಗಿದೆ. ಇದರ ಮಧ್ಯೆ ಇದೀಗ ಶ್ರೀಶೈಲಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿರಾತಾರಾಧ್ಯ ಶಿವಾಚಾರ್ಯ ಎಂಟ್ರಿ ಕೊಟ್ಟಿದ್ದು, ಶಾಮನೂರು ಶಿವಶಂಕರಪ್ಪನವರ ಪರ ಬ್ಯಾಟಿಂಗ್ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಚನ್ನಸಿದ್ದರಾಮ ಪಂಡಿರಾತಾರಾಧ್ಯ ಶಿವಾಚಾರ್ಯ ಶ್ರೀ, ಶಾಸಕ ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಸತ್ಯಕ್ಕೆ ದೂರವಾಗಿಲ್ಲ. ವೀರಶೈವ ಲಿಂಗಾಯತ ಸಮಾಜದ ಅಧಿಕಾರಿಗಳಿಗೆ ಉನ್ನತ ಸ್ಥಾನಮಾನ ಸಿಗುತ್ತಿಲ್ಲ. ಹೆಚ್ಚಿನ ಪ್ರಮಾಣದಲ್ಲಿ ವೀರಶೈವ ಲಿಂಗಾಯತ ಅಧಿಕಾರಿಗಳನ್ನು ಪರಿಗಣಿಸಬೇಕು. ವೀರಶೈವ ಲಿಂಗಯತ ಅಧಿಕಾರಿಗಳಿಗೆ ಸ್ಥಾನಮಾನ ಗೌರವ ನೀಡಬೇಕು. ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರ ಇದನ್ನೆಲ್ಲಾ ತಿಳದುಕೊಳ್ಳಬೇಕು ಎಂದರು. ಇದರೊಂದಿಗೆ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ವೀರಶೈವ ಧರ್ಮದ ಎಲ್ಲ ಒಳಪಂಗಡಳನ್ನು ಒಬಿಸಿ ಪಟ್ಟಿಗೆ ಸೇರಿಸಬೇಕು. ನಾವು ಸಹ ಇವತ್ತು 2 ಹಕ್ಕೋತ್ತಾಯಗಳನ್ನು ಸರ್ಕಾರಕ್ಕೆ ಮಾಡಲಿದ್ದೇವೆ. ಒಳಪಂಗಡಗಳನ್ನು ಕೇಂದ್ರದ ಒಬಿಸಿಗೆ ಸೇರಿಸಲು ಶಿಫಾರಸು ಮಾಡಬೇಕು. ಶೀಘ್ರದಲ್ಲೇ ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇವೆ ಎಂದು ಹೇಳಿದರು.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:41 pm, Sun, 8 October 23