
ಬೆಳಗಾವಿ: ಕೊರೊನಾ ಸೋಂಕು ಜನರನ್ನು ಕಾಡುತ್ತಿದೆ. ಬಹಳಷ್ಟು ಚರ್ಚೆಗಳ ನಡುವೆ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸಿ ರಾಜ್ಯದಲ್ಲಿ ಇಂದು SSLC ಪರೀಕ್ಷೆ ನಡೆಸಲಾಗುತ್ತಿದೆ. ಆದರೆ ಹುಕ್ಕೇರಿ ಪಟ್ಟಣದ ಸರಕಾರಿ ಉರ್ದು ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಸಾಮಾಜಿಕ ಅಂತರ ಮರೆಯಾಗಿದೆ. ಅಧಿಕಾರಿಗಳು ವಿದ್ಯಾರ್ಥಿಗಳ ಆರೋಗ್ಯದ ಕಾಳಜಿ ಮರೆತಿದ್ದಾರೆ.
ಸರ್ಕಾರದ ಆದೇಶ ಗಾಳಿಗೆ ತೂರಿ ಇಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಕೊರೊನಾ ಮಹಾಮಾರಿ ಅಟ್ಟಹಾಸದ ನಡುವೆ ಮಕ್ಕಳ ಜೀವದ ಜತೆ ಶಿಕ್ಷಣ ಇಲಾಖೆ ಆಟವಾಡುತ್ತಿದೆಯಾ ಎಂಬಂತಿದೆ. ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published On - 11:56 am, Thu, 25 June 20