Belagavi News: ಮಾರಕಾಸ್ತ್ರದಿಂದ ಕೊಚ್ಚಿ SSLC ವಿದ್ಯಾರ್ಥಿಯ ಬರ್ಬರ ಹತ್ಯೆ: ದುಷ್ಕರ್ಮಿಗಳು ಪರಾರಿ

ಬೆಳಗಾವಿಯ ಖಾಸಗಿ ಶಾಲೆಯೊಂದರಲ್ಲಿ ಪ್ರಜ್ವಲ್ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ.

Belagavi News: ಮಾರಕಾಸ್ತ್ರದಿಂದ ಕೊಚ್ಚಿ SSLC ವಿದ್ಯಾರ್ಥಿಯ ಬರ್ಬರ ಹತ್ಯೆ: ದುಷ್ಕರ್ಮಿಗಳು ಪರಾರಿ
ಪ್ರಜ್ವಲ್ ಶಿವಾನಂದ ಕರಿಗಾರ(16) ಕೊಲೆಯಾದ ವಿದ್ಯಾರ್ಥಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 20, 2022 | 3:01 PM

ಬೆಳಗಾವಿ: ಮಾರಕಾಸ್ತ್ರದಿಂದ ಇರಿದು SSLC ವಿದ್ಯಾರ್ಥಿಯ ಬರ್ಬರ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಬಳಿ ನಡೆದಿದೆ. ಪ್ರಜ್ವಲ್ ಶಿವಾನಂದ ಕರಿಗಾರ(16) ಕೊಲೆಯಾದ ವಿದ್ಯಾರ್ಥಿ. ಬೆಳಗಾವಿಯ ಖಾಸಗಿ ಶಾಲೆಯೊಂದರಲ್ಲಿ ಪ್ರಜ್ವಲ್ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ. ಅರೆ ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಸಿಕ್ಕಿದ್ದು, ಶಾಲಾ ಸಮವಸ್ತ್ರದಿಂದ ವಿದ್ಯಾರ್ಥಿಯ ಪತ್ತೆ‌ ಹಚ್ಚಲಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕ್ಯಾಂಪ್ ಠಾಣೆಯಲ್ಲಿ ವಿದ್ಯಾರ್ಥಿ ನಾಪತ್ತೆ ಕೇಸ್ ದಾಖಲಾಗಿತ್ತು. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ್ ಭೇಟಿ ಪರಿಶೀಲನೆ‌ ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಗಂಧದ ಮರ ಕದಿಯಲು ಬಂದಿದ್ದ ಇಬ್ಬರ ಬಂಧನ: ಓರ್ವ ಸಾವು

ಚಿಕ್ಕಮಗಳೂರು: ಅರಣ್ಯ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲಾಖೆಯ ಕಲ್ಲುಹೊಳ ಕೋಟೆಯ ಆನೆ ಶಿಬಿರದ ಶೌಚಾಲಯದಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ರಾತ್ರಿ ಗಂಧದ ಮರ ಕದಿಯಲು ಬಂದಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಅರಣ್ಯ ಇಲಾಖೆ ಕ್ವಾರ್ಟರ್ಸ್​ನಲ್ಲಿ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ನಂತರ ಆನೆ ಶಿಬಿರಕ್ಕೆ ವ್ಯಕ್ತಿಯ ಶವ ತಂದಿದ್ದಾರೆಂದು ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆರೋಪಿಸುತ್ತಿದ್ದಾರೆ. ಸ್ಥಳಕ್ಕೆ ಸಖರಾಯಪಟ್ಟಣ ಪೊಲೀಸರು ಭೇಟಿ, ಪರಿಶೀಲನೆ ಮಾಡಿದರು.

ಬೈಕ್​ಗೆ ಗೂಡ್ಸ್​ ವಾಹನ ಡಿಕ್ಕಿ: ಇಬ್ಬರು ಸಾವು

ತುಮಕೂರು: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆ ತಿಪಟೂರು ತಾಲೂಕಿನ ಕೊನೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ. ಶಮಂತಾಚಾರ್ (55), ಶಿವಣ್ಣ (50) ಮೃತ ದುರ್ದೈವಿಗಳು. ಅರಸೀಕೆರೆ ಕಡೆಯಿಂದ ತಿಪಟೂರು ಶಮಂತಾಚಾರ್ ಹಾಗೂ ಶಿವಣ್ಣ ಕಡೆಗೆ ಬೈಕ್ ಮೇಲೆ ಬರುತ್ತಿದ್ದರು. ಈ ವೇಳೆ ಗೂಡ್ಸ್ ವಾಹನ ಚಾಲಕನ ಅಜಾಗರೂಕತೆಯಿಂದ ಬೈಕ್​ಗೆ ಡಿಕ್ಕಿಯಾಗಿದ್ದು, ಬೈಕ್​ ಸವಾರರಿಬ್ಬರೂ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸರು ಭೇಟಿ, ಪರಿಶೀಲನೆ ಮಾಡಿದ್ದು, ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹಾಸನ ಜಿಲ್ಲೆಯಲ್ಲಿ ಮಹಾ ಮಳೆಗೆ ಮತ್ತೊಂದು ಬಲಿ

ಹಾಸನ: ಶಾಲೆಗೆ ತೆರಳುತ್ತಿದ್ದಾಗ ವಿದ್ಯಾರ್ಥಿನಿ ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಜಿಲ್ಲೆಯಲ್ಲಿ ಮಹಾ ಮಳೆಗೆ ಮತ್ತೊಂದು ಬಲಿಯಾಗಿದೆ. ರಂಜಿತಾ(11) ಮೃತ ವಿದ್ಯಾರ್ಥಿ. ಸಹೋದರನ ಜೊತೆ ಬೈಕ್​ನಲ್ಲಿ ಶಾಲೆಗೆ ತೆರಳುತ್ತಿದ್ದ ರಂಜಿತಾ, ಈ ವೇಳೆ ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿದ್ದಾಳೆ. ಕೆರೆ ಕೋಡಿ ಬಿದ್ದು ಹರಿಯುತ್ತಿದ್ದ ನೀರಲ್ಲಿ ಬಾಲಕಿ ಕೊಚ್ಚಿ ಹೋಗಿದ್ದಾಳೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:40 pm, Thu, 20 October 22

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!