ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್, 5 ಖಾಸಗಿ ವಿವಿಗಳ ಸ್ಥಾಪನೆಗೆ ಅನುಮೋದನೆ ಬಗ್ಗೆ ಚರ್ಚೆ

ಯಾವ ವಿಚಾರದ ಚರ್ಚೆಗೂ ನಾವು ಸಿದ್ಧ, ಮಧ್ಯಾಹ್ನ ದೆಹಲಿಗೆ ಹೋಗುತ್ತಿದ್ದೇನೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಜೆ.ಪಿ.ನಡ್ಡಾ, ಅಮಿತ್ ಶಾ ಭಾಗಿಯಾಗುತ್ತಾರೆ. ಚುನಾವಣೆ ತಯಾರಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್, 5 ಖಾಸಗಿ ವಿವಿಗಳ ಸ್ಥಾಪನೆಗೆ ಅನುಮೋದನೆ ಬಗ್ಗೆ ಚರ್ಚೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Edited By: Rakesh Nayak Manchi

Updated on: Dec 26, 2022 | 12:28 PM

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಸುವರ್ಣ ವಿಧಾನ ಸೌಧ (Belagavi suvarna vidhana soudha)ದಲ್ಲಿ ನಡೆದ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಹಾಗೂ ಐದು ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡುವ ಬಗ್ಗೆಯೂ ಚರ್ಚೆ ನಡೆಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಯಾವ ವಿಚಾರದ ಚರ್ಚೆಗೂ ನಾವು ಸಿದ್ಧ, ಮಧ್ಯಾಹ್ನ ದೆಹಲಿಗೆ ಹೋಗುತ್ತಿದ್ದೇನೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda), ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಭಾಗಿಯಾಗುತ್ತಾರೆ. ಚುನಾವಣೆ ತಯಾರಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗುತ್ತದೆ ಎಂದರು.

ಬೆಳಗಾವಿ ಅಧಿವೇಶನ ಫಲಪ್ರದ ಆಗಬೇಕು. ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ಆಗಬೇಕು. ಯಾವುದೇ ವಿಚಾರಗಳ ಮೇಲೆ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ. ಮಧ್ಯಾಹ್ನ ದೆಹಲಿಗೆ ತೆರಳಿ ಎಲ್ಲದರ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಈ ಬಾರಿ ಚುನಾವಣೆ ತಯಾರಿ, ಸಂಪುಟ ವಿಸ್ತರಣೆ ಇತ್ಯಾದಿಗಳ ಬಗ್ಗೆ ಚರ್ಚೆ ನಡೆಯಲಿದೆ. ಸಾಧ್ಯವಾದರೆ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.

ಇದನ್ನೂ ಓದಿ: Bengaluru Covid Case: ಚೀನಾದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಕೊರೋನಾ ಪಾಸಿಟಿವ್; ಬೆಂಗಳೂರಿಗೂ ಕಾಲಿಟ್ಟಿದ್ದ ವ್ಯಕ್ತಿ!

ಮಧ್ಯಾಹ್ನ ಉನ್ನತ ಮಟ್ಟದ ತಜ್ಞರ ಸಭೆ

ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ನಿಯಂತ್ರಣದ ಬಗ್ಗೆ ಚರ್ಚೆ ಆಗಿದೆ. ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಕಡ್ಡಾಯ ಬಗ್ಗೆಯೂ ಚರ್ಚೆ ನಡೆದಿದೆ. ಮಧ್ಯಾಹ್ನ ಉನ್ನತ ಮಟ್ಟದ ತಜ್ಞರ ಸಭೆ ಇದೆ. ಜನಜೀವನಕ್ಕೆ ಯಾವುದೇ ತೊಂದರೆ ಆಗದಂತೆ ಹೊಸ ವರ್ಷಕ್ಕೆ ಮಾರ್ಗಸೂಚಿ ಪ್ರಕಟಿಸಲಾಗುವುದು. ಕೆಲವು ನಿಯಮಗಳನ್ನ ಸೇರಿಸಲಾಗುತ್ತದೆ. ಆರ್ಥಿಕತೆ ಮೇಲೆ ಪರಿಣಾಮ ಬೀರದ ರೀತಿ ಪ್ರಕಟಿಸಲಾಗುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:23 pm, Mon, 26 December 22

Web contact

TV9 Kannada

Read More
Follow Us