ಸುವರ್ಣಸೌಧದ ಆವರಣದಲ್ಲಿ ಚೆನ್ನಮ್ಮ, ರಾಯಣ್ಣನ ಮೂರ್ತಿ ಸ್ಥಾಪನೆ: ಬಸವರಾಜ ಬೊಮ್ಮಾಯಿ ಘೋಷಣೆ
Basavaraj Bommai: ಎಂಇಎಸ್ ನಿಷೇಧದ ಬಗ್ಗೆ ಕಾನೂನು ಪ್ರಕಾರ ಕ್ರಮಕ್ಕೆ ನಿರ್ಧರಿಸಿದ್ದೇವೆ. ಕೇಂದ್ರ ಸರ್ಕಾರಕ್ಕೆ ಮನವಿಮಾಡಿ ನಿಷೇಧಕ್ಕೆ ಮನವಿ ಸಲ್ಲಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇಂತಹ ಕೃತ್ಯ ಜರುಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಬೆಳಗಾವಿ: ಸುವರ್ಣಸೌಧದ ಆವರಣದಲ್ಲಿ ಚೆನ್ನಮ್ಮ, ರಾಯಣ್ಣನ ಮೂರ್ತಿ ಸ್ಥಾಪನೆ ಮಾಡುತ್ತೇವೆ. ಸುವರ್ಣಸೌಧ ಆವರಣದ ಪ್ರಮುಖ ಸ್ಥಳದಲ್ಲಿ ಮೂರ್ತಿ ಸ್ಥಾಪಿಸುತ್ತೇವೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ದೇಶದ್ರೋಹ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಎಂಇಎಸ್ ನಿಷೇಧದ ಬಗ್ಗೆ ಕಾನೂನು ಪ್ರಕಾರ ಕ್ರಮಕ್ಕೆ ನಿರ್ಧರಿಸಿದ್ದೇವೆ. ಕೇಂದ್ರ ಸರ್ಕಾರಕ್ಕೆ ಮನವಿಮಾಡಿ ನಿಷೇಧಕ್ಕೆ ಮನವಿ ಸಲ್ಲಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇಂತಹ ಕೃತ್ಯ ಜರುಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಉ-ಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಅವಕಾಶ ನೀಡಿ: ವಿಧಾನಸಭೆಯಲ್ಲಿ ಶಾಸಕರ ಆಗ್ರಹ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಅವಕಾಶ ನೀಡಿ ಎಂದು ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರು ಆಗ್ರಹ ವ್ಯಕ್ತಪಡಿಸಿದ್ದಾರೆ. ಆಡಳಿತ ಪಕ್ಷ ಹಾಗೂ ವಿಪಕ್ಷದ ಶಾಸಕರಿಂದಲೂ ಒತ್ತಾಯ ಕೇಳಿಬಂದಿದೆ. ನಾವು ಹತ್ತು ನಿಮಿಷ ಮಾತನಾಡಿ ಚಟ ತೀರಿಸಲು ಬಂದಿಲ್ಲ. ಜನರಿಗೆ ಆದ ಅನ್ಯಾಯದ ಬಗ್ಗೆ ಮಾತನಾಡಲು ಕಳಿಸಿದ್ದಾರೆ. ಉ-ಕ ಭಾಗದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ಆಗಬೇಕು. ಆಡಳಿತ ಪಕ್ಷದ ಸದಸ್ಯರಿಗೂ ಮಾತಾಡಲು ಅವಕಾಶ ಕೊಡಿ. ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಬೇಕಿದೆ ಎಂದು ಸದನದಲ್ಲಿ ಬಿಜೆಪಿ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಹೇಳಿದ್ದಾರೆ.
ನಂಜುಂಡಪ್ಪ ವರದಿಯಲ್ಲೂ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುತ್ತಿಲ್ಲ ನಂಜುಂಡಪ್ಪ ವರದಿಯಲ್ಲೂ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುತ್ತಿಲ್ಲ. ರಾಯಭಾಗ ಕ್ಷೇತ್ರದಲ್ಲಿ 1 ಲಕ್ಷ ಜನರಿಗೆ ಒಂದು ಪಿಹೆಚ್ಸಿ ಇದೆ. ಜನಸಂಖ್ಯೆ ಆಧಾರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕೊಡಿ. ಹಳೆ ಮೈಸೂರು ಭಾಗ ರಾಜರ ಕಾಲದಿಂದಲೂ ಅಭಿವೃದ್ಧಿಯಾಗಿದೆ. ಉತ್ತರ ಕರ್ನಾಟಕ, ಹೈದರಾಬಾದ್- ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ವಿಧಾನಸಭೆಯಲ್ಲಿ ಕುಡಚಿ ಕ್ಷೇತ್ರದ ಶಾಸಕ ಪಿ. ರಾಜೀವ್ ಹೇಳಿದ್ದಾರೆ.
ರಾಮನಗರದ ಜನಸಂಖ್ಯೆ ಎಷ್ಟು? ಬೆಳಗಾವಿ ಜಿಲ್ಲೆಯ ವಿಸ್ತರಣೆ ಎಷ್ಟಿದೆ? ಅಥಣಿಯಿಂದ ಬೆಳಗಾವಿಗೆ ಬರಬೇಕು ಅಂದ್ರೆ 400 ಕಿ.ಮೀ. ಪ್ರಯಾಣ ಮಾಡಬೇಕು. ಅಥಣಿ, ಚಿಕ್ಕೋಡಿಯನ್ನು ಜಿಲ್ಲಾ ಕೇಂದ್ರಗಳಾಗಿ ಘೋಷಣೆ ಮಾಡಿ. ಸಮಾನ ಅನುದಾನ ಹಂಚಿಕೆ ಅನ್ನುವುದೇ ಮಾಡುತ್ತಿರುವ ಮೋಸ. ಉತ್ತರ ಕರ್ನಾಟಕ ಭಾಗಕ್ಕೆ ಮಾಡ್ತಿರುವ ಮಹಾ ಮೋಸ. ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಕೊಟ್ಟಷ್ಟು ಅನುದಾನ ನೀಡಿಲ್ಲ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಕೊಡದಿರುವುದು ಮಹಾಮೋಸ. 70 ವರ್ಷಗಳಿಂದ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸಬೇಕೆಂದು ವಿಧಾನಸಭೆಯಲ್ಲಿ ಸರ್ಕಾರಕ್ಕೆ ಬಿಜೆಪಿ ಶಾಸಕ ಪಿ.ರಾಜೀವ್ ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ, ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟ ಶಿವಸೇನೆ ಪುಂಡರು
ಇದನ್ನೂ ಓದಿ: ಕರ್ನಾಟಕ ಬಂದ್‌ಗೆ ವೈಯಕ್ತಿಕ ಬೆಂಬಲ ಇದೆ ಎಂದ ಕೆಎಸ್ ಈಶ್ವರಪ್ಪ; ಪ್ರತಿಕ್ರಿಯೆ ನೀಡದ ಬಸವರಾಜ ಬೊಮ್ಮಾಯಿ