Kannada Flag: ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ವಿದ್ಯಾರ್ಥಿಗೆ ಥಳಿತ: ನಮ್ಮ ನಾಡಲ್ಲಿ ಇದೆಂಥಾ ದೌರ್ಜನ್ಯ..?

| Updated By: ವಿವೇಕ ಬಿರಾದಾರ

Updated on: Dec 01, 2022 | 12:16 AM

ಕಾಲೇಜವೊಂದರಲ್ಲಿ ಕನ್ನಡ ಬಾವುಟ ಹಾರಿಸಿದಕ್ಕೆ, ಸಹಪಾಠಿಗಳು ವಿದ್ಯಾರ್ಥಿಗೆ ಥಳಿಸಿರುವ ಘಟನೆ ಬೆಳಗಾವಿಯ ಟೀಳಕವಾಡಿಯಲ್ಲಿನ ಗೋಗಟೆ ಕಾಲೇಜಿನಲ್ಲಿ ನಡೆದಿದೆ.

Kannada Flag: ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ವಿದ್ಯಾರ್ಥಿಗೆ ಥಳಿತ: ನಮ್ಮ ನಾಡಲ್ಲಿ ಇದೆಂಥಾ ದೌರ್ಜನ್ಯ..?
ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳಿಂದ ವಿದ್ಯಾರ್ಥಿಗಳಿಗೆ ಥಳಿತ
Follow us on

ಬೆಳಗಾವಿ: ಕರ್ನಾಟಕದಲ್ಲಿಯೇ ಹುಟ್ಟಿ ಬೆಳೆದು ಕನ್ನಡಕ್ಕೆ ಅಪಮಾನ ಮಾಡುವ ನಾಡ ದ್ರೋಹಿಗಳು ಸಾಕಷ್ಟು ಜನರಿದ್ದಾರೆ. ಹೀಗೆಯೇ ನಮ್ಮ ರಾಜ್ಯದ ಗಡಿನಾಡು ಬೆಳಗಾವಿಯ (Belagavi)ಕಾಲೇಜವೊಂದರಲ್ಲಿ ಕನ್ನಡ ಬಾವುಟ (Kannada Flag) ಹಾರಿಸಿದಕ್ಕೆ, ಸಹಪಾಠಿಗಳು ವಿದ್ಯಾರ್ಥಿಗೆ ಥಳಿಸಿರುವ ನಗರದ ಘಟನೆ ಟೀಳಕವಾಡಿಯಲ್ಲಿನ ಗೋಗಟೆ ಕಾಲೇಜಿನಲ್ಲಿ ನಡೆದಿದೆ.

ಟೀಳಕವಾಡಿಯಲ್ಲಿನ ಗೋಗಟೆ ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ವಿದ್ಯಾರ್ಥಿ ಡ್ಯಾನ್ಸ್​ ಮಾಡಿದ್ದಾನೆ. ಇದನ್ನು ಕಂಡ ಸಹಪಾಠಿಗಳು ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಥಳಿಸಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂವರು ವಿದ್ಯಾರ್ಥಿಗಳಿಂದ ಹಲ್ಲೆ

ಸಂಜೆ 7.30ರ ಸುಮಾರಿಗೆ ಗೋಗಟೆ ಕಾಲೇಜಿನಲ್ಲಿ ಇಂಟರ್ ಕಾಲೇಜು ಫೆಸ್ಟ್ ನಡೆಯುತ್ತಿತ್ತು. ಈ ವೇಳೆ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಮೂರು ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿಯಿಂದ ಮಾಹಿತಿ ಪಡೆದುಕೊಂಡಿದ್ದೇವೆ. ಯಾರು ಹಲ್ಲೆ ಮಾಡಿದ್ದಾರೆ ಅವರ ಗುರುತು ಪತ್ತೆ ಹಚ್ಚಿ ವಿಚಾರಣೆ ಮಾಡುತ್ತೇವೆ. ಈ ವರೆಗೂ ಪ್ರಕರಣದ ಕುರಿತು ದೂರು ದಾಖಲಾಗಿಲ್ಲ. ಎಲ್ಲರೂ ಅಪ್ರಾಪ್ತರಾಗಿದ್ದು ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಗಲಾಟೆಯಾಗಿದೆ. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು  ಡಿಸಿಪಿ ರವೀಂದ್ರ ಗಡಾದಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:32 pm, Wed, 30 November 22