AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಗೆ ಎಂಎಸ್​ಪಿ, ದರ ನಿಗದಿಗೆ ಆಗ್ರಹಿಸಿ ತೀವ್ರಗೊಂಡ ರೈತರ ಹೋರಾಟ: ಹಲವೆಡೆ ರಸ್ತೆ ತಡೆ, ಸಂಚಾರ ಅಸ್ತವ್ಯಸ್ತ

ಕಬ್ಬಿಗೆ ಬೆಂಬಲ ಬೆಲೆ (MSP) ಹಾಗೂ ಸೂಕ್ತ ದರ ನಿಗದಿಗೆ ಆಗ್ರಹಿಸಿ ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ ರೈತರ ಹೋರಾಟ ತೀವ್ರಗೊಂಡಿದ್ದು, ಹಲವೆಡೆ ರಸ್ತೆ ತಡೆಯಿಂದಾಗಿ ಸಾರಿಗೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬಾಗಲಕೋಟೆ, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಮುಂಹಾಗೃತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಅವೆಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಕಬ್ಬಿಗೆ ಎಂಎಸ್​ಪಿ, ದರ ನಿಗದಿಗೆ ಆಗ್ರಹಿಸಿ ತೀವ್ರಗೊಂಡ ರೈತರ ಹೋರಾಟ: ಹಲವೆಡೆ ರಸ್ತೆ ತಡೆ, ಸಂಚಾರ ಅಸ್ತವ್ಯಸ್ತ
ಕಬ್ಬಿಗೆ ಎಂಎಸ್​ಪಿ, ದರ ನಿಗದಿಗೆ ಆಗ್ರಹಿಸಿ ತೀವ್ರಗೊಂಡ ರೈತರ ಹೋರಾಟ
ಸಹದೇವ್​ ಮಾನೆ
| Edited By: |

Updated on:Oct 31, 2026 | 11:14 AM

Share

ಬೆಳಗಾವಿ, ಅಕ್ಟೋಬರ್​​ 31: ಕಬ್ಬಿಗೆ ಎಂಎಸ್​ಪಿ ಮತ್ತು ದರ ನಿಗದಿಗೆ ಆಗ್ರಹಿಸಿ ರೈತರ ಹೋರಾಟ ತೀವ್ರಗೊಂಡಿದ್ದು ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಗೋಕಾಕ್​​, ಹುಕ್ಕೇರಿ, ಧಾರವಾಡ, ಹಾವೇರಿ ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆದಿವೆ. ರಸ್ತೆ ತಡೆದು, ದಾರಿಗೆ ಅಡ್ಡಲಾಗಿ ಮಲಗಿ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ಹಲವು ಜಿಲ್ಲಾಡಳಿತಗಳು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿರುವ ನಡುವೆಯೂ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಬಸ್​​ಗಳನ್ನು ಪ್ರತಿಭಟನಾಕಾರರು ತಡೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆಗಳೂ ವರದಿಯಾಗಿವೆ.

ಬೆಳಗಾವಿಯಲ್ಲಿ ಬಿರುಸು ಪಡೆದ ಹೋರಾಟ

ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಕರ್ನಾಟಕ ಬಂದ್​​ಗೆ ಕರೆ ಹಿನ್ನೆಲೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೋರಾಟ ಬಿರುಸುಗೊಂಡಿದೆ. ಕೇಂದ್ರ ಬಸ್ ನಿಲ್ದಾಣದಲ್ಲಿ ರಸ್ತೆ ಮೇಲೆ ಮಲಗಿ ರೈತರ ಪ್ರತಿಭಟನೆ ನಡೆಸಿದ್ದು, ಗಂಟೆ ಹಿಡಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್​​ ಸಂಚಾರ ಸ್ಥಗಿತಕ್ಕೆ ಪ್ರತಿಭಟನಾಕಾರರು ಯತ್ನಿಸಿದ್ದು, ಈ ವೇಳೆ ಅವರನ್ನು ಪೊಲೀಸರು ತಡೆದ ಕಾರಣ ಹೈಡ್ರಾಮಾವೇ ನಡೆದಿದ್ದು, ರೈತರು-ಪೊಲೀಸರ ನಡುವೆ ವಾಗ್ವಾದ, ನೂಕಾಟ, ತಳ್ಳಾಟ ಉಂಟಾಗಿದೆ. ಅಂತಿಮವಾಗಿ ಬಸ್​​ ನಿಲ್ದಾಣದಲ್ಲಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಮೀರಿದ ರೈತರ ತಾಳ್ಮೆ: ಬೆಳಗಾವಿಯಲ್ಲಿ ಮತ್ತೊಂದು ಹಂತಕ್ಕೆ ಕಬ್ಬು ಬೆಳೆಗಾರರ ಹೋರಾಟ

ಮೂಡಲಗಿ ತಾಲೂಕಿನ ಮುಸಗುಪ್ಪಿ ಬಳಿ ಮಹಾಲಿಂಗಪುರ ಮೂಡಲಗಿ ಸಂಪರ್ಕಿಸುವ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದ್ದರೆ, ಗೋಕಾಕ್-ಹಿಡಕಲ್ ಡ್ಯಾಂ-ಬೆಳಗಾವಿ ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲೇ ಅಡುಗೆ ಮಾಡಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿರುವ ಪರಿಣಾಮ ಗೋಕಾಕ್ ತಾಲೂಕಿನ ಹಲವೆಡೆ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದೆ. ಹುಕ್ಕೇರಿ ಪಟ್ಟಣದಲ್ಲೂ ರಸ್ತೆ ತಡೆದು ರೈತರು ಹೋರಾಟ ನಡೆಸಿದ್ದು, ಪ್ರತಿಭಟನೆಗೆ ಹುಕ್ಕೇರಿಯ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ ಕೂಡ ಸಾಥ್ ನೀಡಿದ್ದಾರೆ. ಮತ್ತೊಂದೆಡೆ ಬಾವನಸೌಂದತ್ತಿ ಗ್ರಾಮದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ, ಅಂಗಡಿ ಮುಂಗಟ್ಟು ಬಂದ್ ಮಾಡಿ ಹೋರಾಟ ನಡೆಸಲಾಗಿದೆ. ಶಿವಶಕ್ತಿ ಸಕ್ಕರೆ ಕಾರ್ಖಾನೆಗೆ ಹೋಗ್ತಿದ್ದ ಕಾರ್ಮಿಕರು, ಸಿಬ್ಬಂದಿಯನ್ನೂ ಪ್ರತಿಭಟನಾಕಾರರು ತಡೆದಿದ್ದಾರೆ. ಅಥಣಿ ಪಟ್ಟವೂ ಸ್ತಬ್ಧವಾಗಿದ್ದು, ಸ್ವಯಂಪ್ರೇರಿತವಾಗಿ ಅಂಗಡಿ ಬಂದ್ ಮಾಡಿ ವ್ಯಾಪಾರಸ್ಥರು ರೈತರಿಗೆ ಬೆಂಬಲ ಸೂಚಿಸಿದ್ದಾರೆ.

ಬಾಗಲಕೋಟೆ, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ನಿಷೇಧಾಜ್ಞೆ

ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿಗಳ ಬಂದ್​​ಗೆ ಕರೆ ನೀಡಿರುವ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಲ್ಲಿ ಬಿಎನ್​​​ಎಸ್ 163ರಡಿ ಇಂದು ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸಂಗಪ್ಪ ಆದೇಶಿಸಿದ್ದಾರೆ. ಈ ನಡುವೆಯೂ ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್​​ನಲ್ಲಿ ರೈತರ ಪ್ರತಿಭಟನೆ ನಡೆದಿದೆ. ಹೆದ್ದಾರಿಗೆ ಅಡ್ಡಲಾಗಿ ಕಲ್ಲು , ಮುಳ್ಳು ಹಾಕಿ, ಟ್ರ್ಯಾಕ್ಟರ್ ನಿಲ್ಲಿಸಿ ಪ್ರತಿಭಟನೆ ನಡೆಸಲಾಗಿದ್ದುಮ ಪ್ರತಿಭಟನಾ ನಿರತರು ಪೋಲಿಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ 10 ಪ್ರಮುಖ ಸ್ಥಳಗಳಲ್ಲಿಯೂ ರೈತರಿಂದ ಪ್ರತಿಭಟನೆ, ಹೆದ್ದಾರಿ ತಡೆಗೆ ಸಿದ್ಧತೆ ಹಿನ್ನೆಲೆ ಇಂದು ಬೆಳಗ್ಗೆ 6ರಿಂದ ರಾತ್ರಿ 10ರ ಜಿಲ್ಲೆಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಟೋಲ್ ಪ್ಲಾಜಾಗಳ ಪ್ರವೇಶ, ನಿರ್ಗಮನ ಮಾರ್ಗ ಬಂದ್ ಮಾಡುವಂತಿಲ್ಲ. ಟೋಲ್ ಸಂಗ್ರಹಣೆ ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಬಾರದು. ಟ್ರ್ಯಾಕ್ಟರ್, ಲಾರಿ ಸೇರಿದಂತೆ ವಾಹನಗಳನ್ನು ಅಡ್ಡಲಾಗಿ ನಿಲ್ಲಿಸಿ ರಸ್ತೆ ತಡೆ ಮಾಡುವಂತಿಲ್ಲ. ಹೆದ್ದಾರಿಗಳಲ್ಲಿ ಧರಣಿ, ಮೆರವಣಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಪಡಿಸುವುದಕ್ಕೆ ನಿರ್ಬಂಧವಿರಲಿದೆ. ಆಂಬುಲೆನ್ಸ್, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೆ ಅಡ್ಡಿ ಮಾಡುವಂತಿಲ್ಲ. ಸಾರ್ವಜನಿಕ ಆಸ್ತಿ ಹಾನಿ, ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಡಿಸಿ ಡಾ.ಆನಂದ್ ಕೆ. ಆದೇಶಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿಯೂ ಇದೇ ರೀತಿಯ ಆದೇಶ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:13 am, Sat, 31 October 26

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಮಹಿಳಾ ಹೈನುಗಾರರ ಜೊತೆ ಸಂವಾದ: ಮಹತ್ವದ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಮಹಿಳಾ ಹೈನುಗಾರರ ಜೊತೆ ಸಂವಾದ: ಮಹತ್ವದ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹಾಸನಾಂಬೆ ದರ್ಶನೋತ್ಸವಕ್ಕೆ ಬೆಳ್ಳಂಬೆಳಿಗ್ಗೆಯೇ ಭಕ್ತಸಾಗರ
ಹಾಸನಾಂಬೆ ದರ್ಶನೋತ್ಸವಕ್ಕೆ ಬೆಳ್ಳಂಬೆಳಿಗ್ಗೆಯೇ ಭಕ್ತಸಾಗರ
ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವೂ ಲೀಟರ್​​ಗೆ​​ 14 ರೂ.ಹೆಚ್ಚಳ
ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವೂ ಲೀಟರ್​​ಗೆ​​ 14 ರೂ.ಹೆಚ್ಚಳ
ಇಂದು ಈ ರಾಶಿಯವರು ಅತಿಯಾಗಿ ಯಾರಿಗೂ ಆಶ್ವಾಸನೆ ನೀಡಬೇಡಿ
ಇಂದು ಈ ರಾಶಿಯವರು ಅತಿಯಾಗಿ ಯಾರಿಗೂ ಆಶ್ವಾಸನೆ ನೀಡಬೇಡಿ
ನಿಯಮ ಉಲ್ಲಂಘಿಸಿದ್ದ ಎಂಟು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಬಂದ್
ನಿಯಮ ಉಲ್ಲಂಘಿಸಿದ್ದ ಎಂಟು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಬಂದ್
ಕೇದಾರನಾಥದಲ್ಲಿ ಈ ಋತುವಿನ ಮೊದಲ ಹಿಮಪಾತ; ಭಕ್ತರ ಮೇಲೆ ಹಿಮದ ಮಳೆ!
ಕೇದಾರನಾಥದಲ್ಲಿ ಈ ಋತುವಿನ ಮೊದಲ ಹಿಮಪಾತ; ಭಕ್ತರ ಮೇಲೆ ಹಿಮದ ಮಳೆ!
ಧನ್ವೀರ್ ವಿರುದ್ಧ ನಿರ್ಬಂಧಜಾಜ್ಞೆ: ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಧನ್ವೀರ್ ವಿರುದ್ಧ ನಿರ್ಬಂಧಜಾಜ್ಞೆ: ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ