AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರ ಹೋರಾಟ ತೀವ್ರ ಬೆನ್ನಲ್ಲೇ ಅಖಾಡಕ್ಕಿಳಿದ ಸಿಎಂ: ಸಮಸ್ಯೆ ಆಲಿಸಿದ ಡಿಕೆಶಿ; ಹೋರಾಟ ಕೈಬಿಡುವಂತೆ ಮನವಿ​​

ಕಬ್ಬು ಬೆಳೆಗಾರರ ಹೋರಾಟ ತೀವ್ರವಾಗಿರುವ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್​ ಅಖಾಡಕ್ಕೆ ಇಳಿದಿದ್ದಾರೆ. ನೇರ ರೈತರ ಬಳಿಯೇ ಹೋಗಿರುವ ಸಿಎಂ, ಹೋರಾಟ ನಿಲ್ಲಿಸಿ ಅಂತಾ ರೈತರಿಗೆ ಮನವಿ ಮಾಡಿದ್ದಾರೆ. ಇತ್ತ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಕೂಡ ನೆರವಿನ ಅಭಯ ನೀಡಿದ್ದಾರೆ.

ಕಬ್ಬು ಬೆಳೆಗಾರರ ಹೋರಾಟ ತೀವ್ರ ಬೆನ್ನಲ್ಲೇ ಅಖಾಡಕ್ಕಿಳಿದ ಸಿಎಂ: ಸಮಸ್ಯೆ ಆಲಿಸಿದ ಡಿಕೆಶಿ; ಹೋರಾಟ ಕೈಬಿಡುವಂತೆ ಮನವಿ​​
ಡಿಕೆ ಶಿವಕುಮಾರ್​Image Credit source: x.com/DKShivakumar
ಸಹದೇವ್​ ಮಾನೆ
| Edited By: |

Updated on: Oct 17, 2026 | 9:11 PM

Share

ಮುಖ್ಯಾಂಶಗಳು

  • ಕಿತ್ತೂರು ಪಟ್ಟಣ ತಲುಪಿದ ಕಬ್ಬು ಬೆಳೆಗಾರರ ಪಾದಯಾತ್ರೆ
  • ಕಬ್ಬು ಬೆಳೆಗಾರರನ್ನು ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್
  • ಕಾಲಿಗೆ ಬಿದ್ದು ಪ್ರಾರ್ಥಿಸ್ತೇನೆ ಹೋರಾಟ ಕೈಬಿಡಿ ಎಂದ ಸಿಎಂ

ಬೆಳಗಾವಿ, ಅಕ್ಟೋಬರ್​​​ 17: ಎಂಎಸ್​​ಪಿ ದರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪಾದಯಾತ್ರೆ 4ನೇ ದಿನಕ್ಕೆ ಕಾಲಿಟ್ಟಿದೆ. ಹೀಗಾಗಿ ರೈತರ ಸಮಸ್ಯೆ ಬಗೆಹರಿಸಲು ಸಿಎಂ ಡಿಕೆ ಶಿವಕುಮಾರ್​ ಖುದ್ಧು ಸ್ಥಳಕ್ಕೆ ಭೇಟಿ ನೀಡಿದರು. ‘ನಿಮ್ಮ ಧ್ವನಿ ಕೇಂದ್ರಕ್ಕೂ ಮುಟ್ಟಿದೆ. ಕಾಲಿಗೆ ಬಿದ್ದು ಪ್ರಾರ್ಥಿಸ್ತೇನೆ ಹೋರಾಟ ಕೈಬಿಡಿ’ ಎಂದು ಮನವಿ ಮಾಡಿದರು. ಆದರೆ ಸಿಎಂ ಮನವಿಗೆ ಬಗ್ಗದ ಬೆಳೆಗಾರರು ‘MSP ನಿಗದಿ ಆಗುವವರೆಗೂ ನಾವು ಹೋರಾಟ ಕೈಬಿಡಲ್ಲ’ ಎಂದು ಪಟ್ಟು ಹಿಡಿದಿದ್ದಾರೆ.

ರೈತರ ಜತೆ ಸ್ವತಃ ಮುಖ್ಯಮಂತ್ರಿಗಳೇ ಚರ್ಚೆ

ಪ್ರತೀ ಟನ್‌ ಕಬ್ಬಿಗೆ 5500 ದರ, ಸಕ್ಕರೆಗೆ 60 ರೂಪಾಯಿ ಎಂಎಸ್‌ಪಿ ನಿಗದಿ ಸೇರಿದಂತೆ ವಿವಿಧ ಬೇಡಿಕೆ ಇಟ್ಟುಕೊಂಡು ಕಬ್ಬು ಬೆಳೆಗಾರರು ಬೆಳಗಾವಿಯಿಂದ ಹುಬ್ಬಳ್ಳಿ ಚಲೋ ಆರಂಭಿಸಿದ್ದಾರೆ. ನಾಲ್ಕನೇ ದಿನವಾದ ಇಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಲುಪಿದ್ದಾರೆ. ಹೀಗೆ ಕಿತ್ತೂರಿಗೆ ಬಂದ ರೈತರ ಜತೆ ಸ್ವತಃ ಮುಖ್ಯಮಂತ್ರಿಗಳೇ ಚರ್ಚೆ ಮಾಡಿದರು.

ಇದ್ನೂ ಓದಿ: ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಶೀಲನೆಗೆ ರಮೇಶ್ ಚಂದ್ ನೇತೃತ್ವದಲ್ಲಿ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಕಿತ್ತೂರಿನ ಚನ್ನಮ್ಮ ಸರ್ಕಲ್‌ನಲ್ಲೇ ಸಾವಿರಾರು ರೈತರು ಸೇರಿದ್ದರು. ಇದೇ ಪ್ರತಿಭಟನಾ ಸ್ಥಳಕ್ಕೆ ಸಂಜೆ 6.30 ಕ್ಕೆ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್‌ ರೈತರ ಜತೆ ಚರ್ಚೆ ಮಾಡಿದರು. ‘ಸಕ್ಕರೆಯ ಎಂಎಸ್‌ಪಿ 8 ವರ್ಷಗಳ ಹಿಂದೆ 31 ರೂ ನಿಗದಿ ಆಗಿತ್ತು. ಆ ಬಳಿಕ ಹೆಚ್ಚಾಗಿಲ್ಲ. ಆದರೆ ಪೆಟ್ರೋಲ್‌, ಡೀಸೆಲ್ ಸೇರಿದಂತೆ ಎಲ್ಲಾ ಬೆಲೆ ಹೆಚ್ಚಾಗಿವೆ’ ಅಂತಾ ರೈತರು ಸಿಎಂ ಮುಂದೆ ಸಮಸ್ಯೆ ವಿವರಿಸಿದರು.

LIVE TV

ಹೋರಾಟ ಕೈಬಿಡುವಂತೆ ಸಿಎಂ ಮನವಿ  

ರೈತರ ಸಮಸ್ಯೆ ಆಲಿಸಿದ ಡಿಕೆ ಶಿವಕುಮಾರ್​, ‘ಪಾದಯಾತ್ರೆ ಮಾಡಿದ್ದೀರಿ ನಿಮ್ಮ ಹೋರಾಟ ಯಶಸ್ವಿಯಾಗಿದೆ‌. ನಿಮ್ಮ ಧ್ವನಿ ಕೇಂದ್ರಕ್ಕೂ ಮುಟ್ಟಿದೆ, ಹೋರಾಟವನ್ನು ಕೈಬಿಡಿ. ಕಾಲಿಗೆ ಬಿದ್ದು ಪ್ರಾರ್ಥಿಸ್ತೇನೆ ಹೋರಾಟ ಕೈಬಿಡಿ’ ಎಂದರು. ಆದರೆ ಪಟ್ಟುಸಡಿಲಿಸದ ಕಬ್ಬು ಬೆಳೆಗಾರರು ‘ಇಂದು ಸಿಎಂ ಬಂದಂತೆ ನಾಳೆ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಬರಲಿ. ನಾಳೆ ಮಧ್ಯಾಹ್ನದ ಒಳಗಾಗಿ MSP ಘೋಷಣೆ ಮಾಡಬೇಕು. ಇಲ್ಲಾಂದ್ರೆ ಮತ್ತೆ ಪಾದಯಾತ್ರೆ ಮುಂದುವರಿಯುತ್ತೆ’ ಎಂದು ಹೇಳಿದ್ದಾರೆ.

ಶೀಘ್ರದಲ್ಲೇ ರಾಜ್ಯಕ್ಕೆ ಕೇಂದ್ರ ತಂಡ ಬರಲಿದೆ: ಪ್ರಲ್ಹಾದ್​ ಜೋಶಿ

ಇನ್ನು ಕಬ್ಬಿನ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ‘ಪ್ರಧಾನಿ ಮೋದಿ ಸರ್ಕಾರ ರೈತರ ಪರ ಇದೆ. ರೈತರ ಬೇಡಿಕೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಈಗಾಗಲೇ ಕಮಿಟಿ ರಚನೆ ಮಾಡಿದ್ದೇವೆ. ಆದಷ್ಟು ಬೇಗ ವರದಿ ನೀಡುವಂತೆ ಸೂಚನೆ ನೀಡಿದ್ದೇವೆ. ರಾಜ್ಯಕ್ಕೂ ನಾಲ್ಕೈದು ದಿನಗಳಲ್ಲೇ ಸಮಿತಿ ಬರಲಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ, ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ

ಒಟ್ಟಿನಲ್ಲಿ ಬೆಳಗಾವಿಯಿಂದ ಹುಬ್ಬಳ್ಳಿ ಚಲೋ ಆರಂಭಿಸಿರುವ ರೈತರು, ಧಾರವಾಡ ಜಿಲ್ಲೆಗೆ ಎಂಟ್ರಿಕೊಡುವ ಮುನ್ನವೇ ಮುಖ್ಯಮಂತ್ರಿಗಳು ರೈತರ ಸಮಸ್ಯೆ ಆಲಿಸಿದ್ದಾರೆ. ಈ ಮಧ್ಯೆ MSP ದರ ನಿಗದಿ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಮಧ್ಯೆ ಗುದ್ದಾಟವೂ ಶುರುವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More