AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಗ್ಗಂಟಾದ ಕಬ್ಬಿನ ಬೆಲೆ: ಸಂಧಾನ ಸಭೆಗಳು ವಿಫಲ; ಡಿಸಿ ಕಚೇರಿಗೆ ಬೀಗ ಹಾಕಲು‌ ಯತ್ನಿಸಿದ ರೈತರು

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಸೂಕ್ತ ಕಬ್ಬು ಬೆಲೆಗಾಗಿ ರೈತರು ಕಳೆದ ಎರಡು ತಿಂಗಳಿಂದ ನಿರಂತರ ಪ್ರತಿಭಟನೆ ನಡೆಸಿದ್ದಾರೆ. ಸರಣಿ ಸಭೆಗಳು ವಿಫಲಗೊಂಡಿವೆ. ಪ್ರತಿ ಟನ್‌ಗೆ 4000 ರೂ. ಮತ್ತು 1000 ರೂ. ಪ್ರೋತ್ಸಾಹ ಧನ ನೀಡುವಂತೆ ಒತ್ತಾಯಿಸಿದ್ದಾರೆ. ಸಮಸ್ಯೆಗೆ ಪರಿಹಾರ ಸಿಗದೆ ರೈತರ ಆಕ್ರೋಶ ಹೆಚ್ಚಿದೆ.

ಕಗ್ಗಂಟಾದ ಕಬ್ಬಿನ ಬೆಲೆ: ಸಂಧಾನ ಸಭೆಗಳು ವಿಫಲ; ಡಿಸಿ ಕಚೇರಿಗೆ ಬೀಗ ಹಾಕಲು‌ ಯತ್ನಿಸಿದ ರೈತರು
ಬೆಳಗಾವಿ ಡಿಸಿ ಕಚೇರಿ ಬಳಿ ಜಮಾಯಿಸಿದ ರೈತರು
ಸಹದೇವ್​ ಮಾನೆ
| Edited By: |

Updated on:Nov 04, 2026 | 5:08 PM

Share

ಬೆಳಗಾವಿ, ನವೆಂಬರ್​​ 04: ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸಭೆಗಳ ಮೇಲೆ ಸಭೆಗಳು ನಡೆಯುತ್ತಿದ್ದರೂ ಕಬ್ಬಿನ ದರ ಮಾತ್ರ ಕಗ್ಗಂಟಾಗಿದೆ. ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ರೈತರು ನಡೆಸುತ್ತಿರುವ ನಿರಂತರ ಹೋರಾಟಕ್ಕೆ ಇನ್ನೂ ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯ ಬಳಿಕವೂ ಸಮಸ್ಯೆ ಬಗೆಹರಿಯದ ಹಿನ್ನೆಲೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸರಣಿ ಸಭೆಗಳು ನಡೆದವು. ಆದರೆ ಕಾರ್ಖಾನೆ ಮಾಲೀಕರು ಮತ್ತು ರೈತರ ನಡುವಿನ ದರ ಗೊಂದಲ ಮಾತ್ರ ಬಗೆಹರಿದಿಲ್ಲ.

ಬೆಳಗಾವಿಯಲ್ಲಿನ ಕಬ್ಬು ಬೆಳೆಗಾರರ ಹೋರಾಟ ಇದೀಗ ನಿರ್ಣಾಯಕ ಘಟ್ಟ ತಲುಪಿದೆ. ಕಳೆದ ಎರಡು ತಿಂಗಳಿನಿಂದ ಕಬ್ಬಿಗೆ ಸೂಕ್ತ ಬೆಲೆ ನಿಗದಿಗಾಗಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಪಾದಯಾತ್ರೆ, ರಸ್ತೆ ತಡೆ, ರಾಷ್ಟ್ರೀಯ ಹೆದ್ದಾರಿ ಬಂದ್, ಕರ್ನಾಟಕ ಬಂದ್ ಮಾಡಿ ಹೋರಾಟ ಮಾಡಿದರೂ ಸ್ಪಂದನೆ ಸಿಗದ ಕಾರಣಕ್ಕೆ ನಿನ್ನೆಯಿಂದ ರೈತರು ಜೈಲ್ ಭರೋ ಚಳವಳಿ ಆರಂಭಿಸಿದ್ದು, ಇದೀಗ ಹೋರಾಟದ ಕಾವು ಹೆಚ್ಚಾಗಿದೆ.

ಬೆಳಗಾವಿ ಡಿಸಿ ಕಚೇರಿಗೆ ಬೀಗ ಹಾಕಲು ಯತ್ನಿಸಿದ ರೈತರು

ಇನ್ನು ರೈತ ಮುಖಂಡ ಗಣೇಶ ಇಳಿಗೇರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ಮಾಡಿದ್ದು, ಈ ವೇಳೆ ಡಿಸಿ ಕಚೇರಿಯ ಮುಖ್ಯದ್ವಾರಕ್ಕೆ ಬೀಗ ಹಾಕಲು‌ ರೈತರು ಯತ್ನಿಸಿದರು. ಈ ವೇಳೆ ಪೊಲೀಸರು‌ ಹಾಗೂ ರೈತರ ನಡುವೆ ವಾಗ್ವಾದ ಉಂಟಾಗಿದ್ದು, ಬಳಿಕ ನೂಕಾಟ-ತಳ್ಳಾಟವಾಗಿ ಮಹಿಳೆಗೆ ಗಾಯವಾಗಿದೆ. ಸಭೆ ನಡೆಸದೆ ಕಾಲಹರಣ ಮಾಡುತ್ತಿದ್ದಾರೆಂದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು, ಕೊಟ್ಟ ಮಾತಿನಂತೆ ಸಭೆ ನಡೆಸಿ, ದರ ನಿಗದಿ ಮಾಡುವಂತೆ ರೈತರ ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಸಿದ್ದರೆ ಕೆಲವೇ ಕ್ಷಣಗಳಲ್ಲಿ ಚನ್ನಮ್ಮ ಸರ್ಕಲ್ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕಬ್ಬು ಬೆಳೆಗಾರರ ಹೋರಾಟ ತೀವ್ರ: ಸತೀಶ್ ಜಾರಕಿಹೊಳಿ ಜೊತೆಗಿನ ಸಭೆ ವಿಫಲ, ಇಂದು ಸಿಎಂ ಜೊತೆ ಮತ್ತೊಂದು ಸುತ್ತಿನ ಮಾತುಕತೆ

ಇನ್ನು ಈವರೆಗೂ ದರ ಘೋಷಣೆ ಆಗದಿದ್ದಕ್ಕೆ ರೈತರು ತೀವ್ರ ಆಕ್ರೋಶಗೊಂಡಿದ್ದು, ಎತ್ತಿನಬಂಡಿ, ಬೈಕ್, ಕಾರು, ಟ್ರ್ಯಾಕ್ಟರ್ ಮೂಲಕ ಪ್ರತಿಭಟನಾ ರ‍್ಯಾಲಿ ನಡೆಸಿದ್ದಾರೆ. ಕೆಲವೇ ಹೊತ್ತಿನಲ್ಲಿ ರೈತರ ರ‍್ಯಾಲಿ ರಾಷ್ಟ್ರೀಯ ಹೆದ್ದಾರಿ ಪ್ರವೇಶಿಸಲಿದೆ. ಸರ್ಕಾರ ಹಾಗೂ ಕಾರ್ಖಾನೆಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಸಿದ್ದು, ಪ್ರತಿ ಟನ್ ಕಬ್ಬಿಗೆ 4000 ರೂ ನೀಡುವಂತೆ ಪಟ್ಟು ಹಿಡಿದಿದ್ದಾರೆ. ರಾಜ್ಯ ಸರ್ಕಾರ 1 ಸಾವಿರ ರೂ. ಪ್ರೋತ್ಸಾಹ ಧನ ನೀಡಬೇಕೆಂದು ಎಂದು ಆಗ್ರಹಿಸಿದ್ದಾರೆ. 2 ಕಂತಿನಲ್ಲಿ ದರ ನೀಡುವುದಾಗಿ ಕಾರ್ಖಾನೆ ಮಾಲೀಕರು ಹೇಳಿದ್ದು, ಅಗ್ರಿಮೆಂಟ್ ಮಾಡಿ ತೆಗೆದುಕೊಂಡು ಬರಲು ರೈತ ಮುಖಂಡರು ಒತ್ತಾಯಿಸಿದ್ದಾರೆ.

ನಮಗೂ ಕಾರ್ಖಾನೆಯವರಿಗೆ 90% ಹೊಂದಾಣಿಕೆಯಾಗಿದೆ ಎಂದ ಚೂನಪ್ಪ ಪೂಜಾರಿ

ಬಡಕುಂದ್ರಿ ಗ್ರಾಮದಲ್ಲಿ ಟಿವಿ9ಗೆ ರೈತ ಮುಖಂಡ ಚೂನಪ್ಪ ಪೂಜಾರಿ ಪ್ರತಿಕ್ರಿಯಿಸಿದ್ದು, ‘ನಮಗೂ ಕಾರ್ಖಾನೆಯವರು 90% ಹೊಂದಾಣಿಕೆ ಆಗಿದೆ. ನಾಳೆ ದರ ನಿಗದಿ ಆಗಿ ನಾಡಿದ್ದು ಕಾರ್ಖಾನೆ ಆರಂಭವಾಗುತ್ತವೆ. ನಾಳೆ ಬೆಳಗಾವಿಯ ಚನ್ನಮ್ಮ ವೃತ್ತದ ಬಳಿಯ ಸಿಪಿಎಡ್ ಮೈದಾನದಲ್ಲಿ ಹೋರಾಟ ಮಾಡುತ್ತೇವೆ. ಒಂದು ಕೋಟಿ ಜನ ರೈತರು ಹೋರಾಟದಲ್ಲಿ ಭಾಗಿಯಾಗುತ್ತಾರೆ. ಉಸ್ತುವಾರಿ ಸಚಿವರು, ಡಿಸಿ ಸ್ಥಳಕ್ಕೆ ಬಂದು ದರ ಘೋಷಣೆ ಮಾಡುತ್ತಾರೆ’ ಎಂದರು.

LIVE TV

‘ಎರಡು ಕಂತಿನಲ್ಲಿ ದರ ತೆಗೆದುಕೊಳ್ಳಲು ತೀರ್ಮಾನ ಆಗಿದೆ. ಮೊದಲ ಕಂತಿನಲ್ಲಿ 3500 ಮೀರಿ ದರ ನಿಗದಿ ಮಾಡಲು ಒತ್ತಾಯಿಸಿದ್ದೇವೆ. ಅದು ನಾಳೆಗೆ ನಿಗದಿ ಆಗಲಿದೆ. ಎರಡನೇ ಕಂತಿನಲ್ಲಿ ಸಕ್ಕರೆ ಮಾರಾಟದ ದರದ ನೋಡಿ ಕೊಡಲು ಡಿಮ್ಯಾಂಡ್ ಇದೆ. ಅದನ್ನ ಕಾರ್ಖಾನೆಯವರು ಅಗ್ರಿಮೆಂಟ್ ಮಾಡಿ ಕೊಡಲು ಒತ್ತಾಯ ಇದೆ. ನಾಳೆ ಒಳಗಾಗಿ ಅಗ್ರಿಮೆಂಟ್ ಆಗಿ ದರ ಘೋಷಣೆ ಆಗುವ ನಿರೀಕ್ಷೆ ಇದೆ. ಇನ್ನು ನಾಳೆ ಸಿಎಂ ನಮ್ಮ ಹೋರಾಟದ ವೇದಿಕೆಯಲ್ಲಿ ಒಂದು ಸಾವಿರ ರೂ ಪ್ರೋತ್ಸಾಹ ಧನ ಘೋಷಣೆ ಮಾಡಲಿ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಗುರ್ಲಾಪುರದಿಂದ ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ

ಒಟ್ಟಿನಲ್ಲಿ ಬೆಳಗಾವಿಯಲ್ಲಿ ಕಬ್ಬಿನ ದರ ನಿಗದಿ ವಿಚಾರವಾಗಿ ಸಭೆ ಮೇಲೆ ಸಭೆಗಳು ನಡೆಯುತ್ತಿವೆ. ಆದರೆ ಅನ್ನದಾತನ ಕೈಗೆ ನ್ಯಾಯಯುತ ಬೆಲೆ ಮಾತ್ರ ಇನ್ನೂ ಸಿಕ್ಕಿಲ್ಲ. ಎರಡು ತಿಂಗಳ ಹೋರಾಟ, ಸರಣಿ ಪ್ರತಿಭಟನೆ, ರಸ್ತೆ ತಡೆ, ಜೈಲ್ ಬರೋ ಚಳುವಳಿ ಬಳಿಕವೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ನಾಳೆಯಾದರೂ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಮುಕ್ತಿ ಸಿಗುತ್ತಾ ಅಥವಾ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:07 pm, Wed, 4 November 26

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?