AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರ ಹೋರಾಟಕ್ಕೆ ಬ್ರೇಕ್: ನಾಳೆ ಹೆದ್ದಾರಿ ಬಂದ್ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಾಳೆ ಕರೆ ನೀಡಿದ್ದ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಜಿಲ್ಲಾಡಳಿತ ಶಾಕ್ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಸೇರಿ ಟೋಲ್ ಪ್ಲಾಜಾ ಬಂದ್‌ಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ. ಮತ್ತೊಂದೆಡೆ, ಗಲ್ಲಿಗೇರಿಸಿದ್ರೂ ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡುತ್ತೇವೆ ಎಂದು ಚೂನಪ್ಪ ಪೂಜಾರಿ ಹೇಳಿದ್ದಾರೆ.

ಕಬ್ಬು ಬೆಳೆಗಾರರ ಹೋರಾಟಕ್ಕೆ ಬ್ರೇಕ್: ನಾಳೆ ಹೆದ್ದಾರಿ ಬಂದ್ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆ
ಕಬ್ಬು ಬೆಳೆಗಾರರು
ಸಹದೇವ್​ ಮಾನೆ
| Edited By: |

Updated on: Oct 30, 2026 | 6:33 PM

Share

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ವಿಚಾರ.
  • ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್​ಗೆ ಕರೆ ಕೊಟ್ಟಿರುವ ರೈತರು
  • ರೈತರ ಹೋರಾಟಕ್ಕೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ

ಬೆಳಗಾವಿ, ಅಕ್ಟೋಬರ್​​ 30: ಬೆಳಗಾವಿಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ಘೋಷಿಸಬೇಕೆಂದು ರೈತರು ನಡೆಸಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳಿಗೆ ರೈತರು ನೀಡಿದ್ದ ಅಂತಿಮ ಗಡುವು ಇಂದು ಮುಕ್ತಾಯಗೊಳ್ಳಲಿದೆ. ಹೀಗಾಗಿ ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್​​ಗೆ ಮತ್ತು ಹತ್ತರಗಿ ಟೋಲ್ ಸ್ಥಗಿತಕ್ಕೆ ನಿರ್ಧರಿಸಿದ್ದಾರೆ. ಆದರೆ ರೈತರ ಹೋರಾಟಕ್ಕೆ ಇದೀಗ ಬೆಳಗಾವಿ ಜಿಲ್ಲಾಡಳಿತ ಶಾಕ್​ ಕೊಟ್ಟಿದ್ದು, ರಾಷ್ಟ್ರೀಯ ಹೆದ್ದಾರಿ, ರಸ್ತೆ, ಟೋಲ್​ಪ್ಲಾಜಾ ತಡೆಗೆ ನಿಷೇಧ ವಿಧಿಸಿ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಹೆದ್ದಾರಿ, ಟೋಲ್ ಪ್ಲಾಜಾ ತಡೆಗೆ ನಿಷೇಧ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರ ಹಿನ್ನೆಲೆ ಜಿಲ್ಲಾಡಳಿತ ಅಲರ್ಟ್​ ಆಗಿದ್ದು, ನಿರ್ಬಂಧಗಳನ್ನು ವಿಧಿಸಿದೆ. ಅ. 31ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವಂತೆ ರೈತರು ಕರೆ ನೀಡಿರುವ ಬೆನ್ನಲ್ಲೇ, ಬೆಳಗಾವಿ ಜಿಲ್ಲಾಡಳಿತ ಹೆದ್ದಾರಿ ಮತ್ತು ರಸ್ತೆ ಹಾಗೂ ಟೋಲ್ ಪ್ಲಾಜಾಗಳನ್ನು ತಡೆದು ಪ್ರತಿಭಟನೆ ನಡೆಸುವುದಕ್ಕೆ ನಿಷೇಧ ಹೇರಿದೆ.

ಇದನ್ನೂ ಓದಿ: ಕಬ್ಬು ಬೆಳೆಗಾರರ ಹೋರಾಟ ಮತ್ತೆ ತೀವ್ರ: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್, ಹತ್ತರಗಿ ಟೋಲ್ ಸ್ಥಗಿತಕ್ಕೆ ನಿರ್ಧಾರ

ಈ ಕುರಿತಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​​ ಅವರಿಗೆ ಪತ್ರ ಬರೆಯಲಾಗಿದೆ. ಹೀಗಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) 2023ರ ಕಲಂ 163 ಅಡಿಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. 8 ಷರತ್ತುಗಳನ್ನು ವಿಧಿಸಿ ಆದೇಶ ಹೊರಡಿಸಿರುವ ಜಿಲ್ಲಾಡಳಿತ, ಯಾವುದೇ ಕಾರಣಕ್ಕೂ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವಂತಿಲ್ಲ ಖಡಕ್​​ ಸೂಚನೆ ನೀಡಿದೆ.

ಸಾರ್ವಜನಿಕ,‌ ಸರ್ಕಾರಿ ಆಸ್ತಿ ಪಾಸ್ತಿಗೆ ಹಾನಿ ಮಾಡುವಂತಿಲ್ಲ 

ಬೆಳಗಾವಿ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ಸೇರಿದಂತೆ ಜಿಲ್ಲೆಯ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಗುಂಪು ಪ್ರತಿಭಟನೆಗೆ ನಡೆಸುವಂತಿಲ್ಲ. ಜಿಲ್ಲೆಯಲ್ಲಿರುವ ಮೂರು ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲು ಅವಕಾಶವಿಲ್ಲ. ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ರಸ್ತೆಗಳಲ್ಲಿ ಟ್ರ್ಯಾಕ್ಟರ್ ಸೇರಿ ವಾಹನ ಅಡ್ಡಗಟ್ಟುವಂತಿಲ್ಲ. ಸಾರ್ವಜನಿಕ,‌ ಸರ್ಕಾರಿ ಆಸ್ತಿ ಪಾಸ್ತಿಗೆ ಹಾನಿ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ.

LIVE TV

ಇನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಸ್ಪಿ ಮತ್ತು ಪೊಲೀಸ್ ಕಮಿಷನರ್​ಗೆ ತಿಳಿಸಲಾಗಿದ್ದು, ನಿರ್ಬಂಧ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಡಿಸಿ ಸೂಚಿಸಿದ್ದಾರೆ.

ಗಲ್ಲಿಗೇರಿಸಿದ್ರೂ ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡುತ್ತೇವೆ ಎಂದ ಚೂನಪ್ಪ ಪೂಜಾರಿ

ಜಿಲ್ಲಾಡಳಿತದ ನಿರ್ಬಂಧ ವಿಚಾರವಾಗಿ ಪ್ರತಿಕ್ರಿಯಿಸಿರುವ ರೈತ ಮುಖಂಡ ಚೂನಪ್ಪ ಪೂಜಾರಿ, ‘ಕಾನೂನು ಸುವ್ಯವಸ್ಥೆ ಕಾಪಾಡಲು ನಿರ್ಬಂಧ ಹಾಕ್ತಾರೆ ತಪ್ಪಿಲ್ಲ. ಅವರು ನಮಗೆ ಗುಂಡು ಹಾರಿಸಲಿ, ಲಾಠಿಚಾರ್ಜ್ ಮಾಡಲಿ, ನಾವು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿಯೇ ಮಾಡುತ್ತೇವೆ. ಪ್ರತಿವರ್ಷ ಸುವರ್ಣಸೌಧ ಸುತ್ತ ನಿಷೇಧಾಜ್ಞೆ ಜಾರಿ ಮಾಡುತ್ತಾರೆ. ಸಿಎಂ ಡಿಕೆ ಶಿವಕುಮಾರ್​​​ ಅವರು ಸ್ಪಷ್ಟವಾಗಿ ಹೇಳಿದ್ದಾರೆ, ಬೆಂಗಳೂರಿಗೆ ಹೋಗಿ 2 ದಿನದಲ್ಲಿ ಘೋಷಿಸುತ್ತೇವೆ ಅಂದಿದ್ದಾರೆ. ಹೀಗಾಗಿ ಸಿಎಂ ಅವರಿಗೆ ರಾತ್ರಿ 12 ಗಂಟೆಯವರೆಗೂ ಸಮಯವಿದೆ. ಘೋಷಿಸದಿದ್ದರೆ ನಾಳೆ ಬೆಳಗ್ಗೆ 11ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡುತ್ತೇವೆ. ನಾವು ಹತ್ತರಗಿ ಟೋಲ್ ಬಂದ್ ಮಾಡುತ್ತೇವೆ. ಅರೆಸ್ಟ್ ಮಾಡಲಿ, ಜೈಲಿಗೆ ಕಳಿಸಲಿ, ಗಲ್ಲಿಗೇರಿಸಿದರೂ ಸಂತಸ’ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!