AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಗೆ ಎಂಎಸ್​ಪಿಗೆ ಆಗ್ರಹಿಸಿ ಇಂದಿನಿಂದ ರೈತರ ಹೆದ್ದಾರಿ ಬಂದ್ ಹೋರಾಟ: ಪುಣೆ-ಬೆಂಗಳೂರು ಹೈವೇ ರೂಟ್‌ ಬದಲಾವಣೆ

ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಅಕ್ಟೋಬರ್ 13ರಿಂದ ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿ ತಡೆಗೆ ಕರೆ ನೀಡಿವೆ. ಬೆಳಗಾವಿ ಜಿಲ್ಲೆಯಲ್ಲಿ ಹತ್ತರಗಿ ಟೋಲ್‌, ಹಿರೇಬಾಗೇವಾಡಿ ಹಾಗೂ ಕೊಗನೊಳ್ಳಿ ಬಳಿ ಪ್ರತಿಭಟನೆಗೆ ಸಿದ್ಧತೆ ನಡೆದಿದ್ದು, ಪೊಲೀಸರು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ಸೇರಿದಂತೆ ಹಲವು ಮಾರ್ಗಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಿದ್ದಾರೆ. ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ.

ಕಬ್ಬಿಗೆ ಎಂಎಸ್​ಪಿಗೆ ಆಗ್ರಹಿಸಿ ಇಂದಿನಿಂದ ರೈತರ ಹೆದ್ದಾರಿ ಬಂದ್ ಹೋರಾಟ: ಪುಣೆ-ಬೆಂಗಳೂರು ಹೈವೇ ರೂಟ್‌ ಬದಲಾವಣೆ
ಪುಣೆ-ಬೆಂಗಳೂರು ಹೈವೇ ರೂಟ್‌ ಬದಲಾವಣೆ (ಸಾಂದರ್ಭಿಕ ಚಿತ್ರ)Image Credit source: Belagavi District Police
ಸಹದೇವ್​ ಮಾನೆ
| Edited By: |

Updated on:Oct 13, 2026 | 9:33 AM

Share

ಮುಖ್ಯಾಂಶಗಳು

  • ಕಬ್ಬಿಗೆ ಎಂಎಸ್​​ಪಿ ಆಗ್ರಹಿಸಿ ರಾಜ್ಯಾದ್ಯಂತ ಹೆದ್ದಾರಿ ತಡೆ ಹೋರಾಟ
  • ಬೆಳಗಾವಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ
  • ವಿಜಯಪುರ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತ ಸಂಘಟನೆಗಳ ಪ್ರತಿಭಟನೆ

ಬೆಳಗಾವಿ, ಅಕ್ಟೋಬರ್ 13: ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಪಡಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಇಂದಿನಿಂದ (ಅಕ್ಟೋಬರ್ 13) ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾಗಿವೆ. ದೆಹಲಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ವಿಫಲವಾದ ಬೆನ್ನಲ್ಲೇ ರಾಜ್ಯ ರೈತ ಸಂಘ ಹೆದ್ದಾರಿ ಬಂದ್‌ಗೆ ಕರೆ ನೀಡಿದೆ. ರೈತರ ಹೋರಾಟದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ವಾಹನ ಸಂಚಾರದ ಮಾರ್ಗ ಬದಲಾವಣೆ ಮಾಡಿದ್ದಾರೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಯಿರುವುದರಿಂದ ಭಾರೀ ಮತ್ತು ಲಘು ವಾಹನಗಳಿಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಬೆಳಗಾವಿಯಲ್ಲಿ ಹೆದ್ದಾರಿ ತಡೆ; ವಾಹನಗಳಿಗೆ ಪರ್ಯಾಯ ಮಾರ್ಗ

ಬೆಳಗಾವಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಧಾರವಾಡದಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ. ಧಾರವಾಡದಿಂದ ಬರುವ ವಾಹನಗಳು ಅಳ್ನಾವರ, ಖಾನಾಪುರ ಮಾರ್ಗವಾಗಿ ಬೆಳಗಾವಿ ಪ್ರವೇಶಿಸಬಹುದು. ಧಾರವಾಡದಿಂದ ಗೋಕಾಕಕ್ಕೆ ತೆರಳುವ ವಾಹನಗಳು ಬೆಳವಡಿ, ಬೈಲಹೊಂಗಲ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.

ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಬರುವ ವಾಹನಗಳು ಕಾಗಲ್, ನಿಪ್ಪಾಣಿ, ಚಿಕ್ಕೋಡಿ, ಗೋಕಾಕ ಮತ್ತು ಸವದತ್ತಿ ಮಾರ್ಗವಾಗಿ ಧಾರವಾಡ ತಲುಪುವಂತೆ ಸಂಚಾರ ಬದಲಾವಣೆ ಮಾಡಲಾಗಿದೆ. ಭಾರೀ ವಾಹನಗಳು ಹಾಗೂ ಲಘು ವಾಹನಗಳ ಸಂಚಾರಕ್ಕೂ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.

ಹುಕ್ಕೇರಿಯ ಹತ್ತರಗಿ ಟೋಲ್ ಬಳಿ ಹೆದ್ದಾರಿ ತಡೆಗೆ ಮುಂದಾದ ರೈತರು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್‌ ಬಳಿ ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಹೆದ್ದಾರಿ ತಡೆ ನಡೆಸಲು ರೈತರು ಮುಂದಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ರೈತ ಮುಖಂಡ ಪ್ರಕಾಶ ನಾಯಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಚಿಕ್ಕೋಡಿ ತಾಲೂಕಿನ ಕೊಗನೊಳ್ಳಿ ಟೋಲ್‌ ಬಳಿ ಮಹಾರಾಷ್ಟ್ರದ ರೈತರೂ ಧರಣಿ ನಡೆಸಲು ಸಜ್ಜಾಗಿದ್ದಾರೆ.

ಕೇಂದ್ರದ ಸಭೆ ವಿಫಲ: ರಾಜ್ಯಾದ್ಯಂತ ರೈತರ ಪ್ರತಿಭಟನೆ

ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಬೇಡಿಕೆ ಮುಂದಿಟ್ಟು ಕರ್ನಾಟಕದ ರೈತರ ನಿಯೋಗ ದೆಹಲಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ಸೋಮವಾರ ಸಭೆ ನಡೆಸಿತ್ತು. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ರಾಜ್ಯದ ಸಹಕಾರ ಸಚಿವ ಲಕ್ಷ್ಮಣ ಸವದಿ ಕೂಡ ಭಾಗವಹಿಸಿದ್ದರು. ಆದರೆ, ಸಭೆಯಲ್ಲಿ ಬೇಡಿಕೆ ಈಡೇರಿಸುವ ಬಗ್ಗೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ.

ರೈತರಿಗೆ ನೀಡಿದ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರು ಒಗ್ಗಟ್ಟಾಗಿ ಹೋರಾಟ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬೆಳಗಾವಿ, ವಿಜಯಪುರ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ಹೆದ್ದಾರಿ ತಡೆದು ಧರಣಿ ನಡೆಸಲಿವೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿಯೂ ಕಬ್ಬು ಬೆಳೆಗಾರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಯಚೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

ಕೊಪ್ಪಳದಲ್ಲೂ ಟೋಲ್‌ ಗೇಟ್ ಬಂದ್‌ಗೆ ಸಿದ್ಧತೆ

ಕೊಪ್ಪಳ ತಾಲೂಕಿನ ಹಿಟ್ನಾಳ್‌ ಬಳಿಯ ಟೋಲ್‌ ಗೇಟ್‌ನಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಬೆಳಗ್ಗೆ 10.30ಕ್ಕೆ ಟೋಲ್‌ ಗೇಟ್ ಬಂದ್ ಮಾಡಲು ನಿರ್ಧರಿಸಿರುವ ಸಂಘಟನೆಗಳು, ಕಬ್ಬಿಗೆ MSP ನಿಗದಿಪಡಿಸುವಂತೆ ಒತ್ತಾಯಿಸಲಿವೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಇಲ್ಲಿಯೂ ಪೊಲೀಸರು ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ.

ಇದನ್ನೂ ಓದಿ: ಕಬ್ಬಿಗೆ ಎಂಎಸ್‌ಪಿ ಘೋಷಣೆ ವಿಚಾರವಾಗಿ ರೈತರ ಜೊತೆ ಕೇಂದ್ರದ ಸಭೆ ವಿಫಲ: ನಾಳೆಯಿಂದಲೇ ಹೆದ್ದಾರಿ ಬಂದ್​​ಗೆ ಕರೆ

ಕಬ್ಬು ಬೆಳೆಗಾರರ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನು ರೈತ ಸಂಘಟನೆಗಳು ನೀಡಿವೆ. ರಾಜ್ಯದ ವಿವಿಧೆಡೆ ನಡೆಯಲಿರುವ ಹೆದ್ದಾರಿ ತಡೆ ಹೋರಾಟದಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಏತನ್ಮಧ್ಯೆ, ರೈತರ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ರೈತರು ಪ್ರತಿಭಟನೆಯ ಹಾದಿ ಹಿಡಿಯಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 am, Tue, 13 October 26

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ