ಭಾರಿ ಪ್ರವಾಹಕ್ಕೆ ರಸ್ತೆ ಸಂಪರ್ಕ ಬಂದ್; ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಓಡಾಟ

ಬೆಳಗಾವಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ಪ್ರಯಾಣಿರ ಅನುಕೂಲಕ್ಕಾಗಿ ವಿಶೇಷ ಪ್ಯಾಸೆಂಜರ್ ರೈಲು ಓಡಾಟ ನಡೆಸಲಿದೆ.

ಭಾರಿ ಪ್ರವಾಹಕ್ಕೆ ರಸ್ತೆ ಸಂಪರ್ಕ ಬಂದ್; ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಓಡಾಟ
ರೈಲು
Follow us
|

Updated on: Aug 01, 2024 | 8:51 AM

ಬೆಳಗಾವಿ, ಆಗಸ್ಟ್.01: ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ ಆಗುತ್ತಿದ್ದು, ಸಪ್ತ ನದಿಗಳು ಹರಿಯುವ ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರವಾಹ ಎದುರಾಗಿದೆ. ಗ್ರಾಮಗಳು, ಸಾವಿರಾರು ಎಕರೆ ಜಮೀನು, ಸೇತುವೆಗಳು ಮುಳುಗಿ ಜನರ ಬದುಕು ಬೀದಿಗೆ ಬಂದಿದೆ. ಇನ್ನು ಕೃಷ್ಣಾ ನದಿಯಿಂದ 3 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾದಿಂದ 73 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಹರಿಬಿಡುತ್ತಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ಪ್ರಯಾಣಿರ ಅನುಕೂಲಕ್ಕಾಗಿ ವಿಶೇಷ ಪ್ಯಾಸೆಂಜರ್ ರೈಲು ಓಡಾಟ ನಡೆಸಲಿದೆ.

ಭಾರಿ ಮಳೆಯಿಂದಾಗಿ ರಸ್ತೆ ಮಾರ್ಗ ಸ್ಥಗಿತಗೊಂಡಿದ್ದು ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ಪ್ರತಿ ದಿನ ಪ್ರಯಾಣ ಬೆಳೆಸುತ್ತಿದ್ದ ಪ್ರಯಾಣಿಕರಿಗೆ ಅನುಕೂಲವಾಗಲೆಂದು ದಕ್ಷಿಣ ನೈರುತ್ಯ ರೈಲ್ವೆ ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಓಡಾಟದ ಸೌಕರ್ಯ ಕಲ್ಪಿಸಿದೆ. ಆಗಸ್ಟ್ 1 ರಿಂದ 4ರ ವರೆಗೆ ಪ್ಯಾಸೆಂಜರ್ ವಿಶೇಷ ರೈಲು ಓಡಾಡಲಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೆ ಭಾರಿ ಮಳೆ

ಪ್ಯಾಸೆಂಜರ್ ವಿಶೇಷ ರೈಲು ವೇಳಾಪಟ್ಟಿ

  • ಬೆಳಗಾವಿ-ಮೀರಜ್ ರೈಲು ಆ-01 (07301) ಮುಂಜಾನೆ 6 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಮು. 9ಕ್ಕೆ ಮೀರಜ್ ನಿಲ್ದಾಣ ತಲುಪಲಿದೆ.
  • ಮೀರಜ್-ಬೆಳಗಾವಿ ರೈಲು ಸಂಖ್ಯೆ (07302) ಮುಂಜಾನೆ 9.50ಕ್ಕೆ ಮೀರಜ್​ನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.
  • ಬೆಳಗಾವಿ-ಮೀರಜ್ ರೈಲು ಆ.01ರ ಮಧ್ಯಾಹ್ನ 01.30 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಸಂಜೆ 04.30ಕ್ಕೆ ಮೀರಜ್ ತಲುಪಲಿದೆ.
  • ಮೀರಜ್-ಬೆಳಗಾವಿ ರೈಲು ಆ.01 ಸಂಜೆ 05.35 ಕ್ಕೆ ಮೀರಜ್​ನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.ಆಗಸ್ಟ್ 01ರಿಂದ ಆಗಸ್ಟ್ 04ರ ವರೆಗೆ ಬೆಳಗಾವಿ-ಮೀರಜ್ ರೈಲು ದಿನಕ್ಕೆ 2 ಬಾರಿ ಓಡಾಟ ನಡೆಸಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ