Belagavi News: ಪತ್ನಿ ಜತೆ ಅನೈತಿಕ ಸಂಬಂಧ ಆರೋಪ, ಯುವಕನ ಹತ್ಯೆಗೈದ ಪತಿ

ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನ ಆಕೆಯ ಗಂಡ ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕ.

Belagavi News: ಪತ್ನಿ ಜತೆ ಅನೈತಿಕ ಸಂಬಂಧ ಆರೋಪ, ಯುವಕನ ಹತ್ಯೆಗೈದ ಪತಿ
ಮೃತ ಯುವಕ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 18, 2023 | 10:11 AM

ಬೆಳಗಾವಿ: ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನ ಆಕೆಯ ಗಂಡ ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಕೊಲೆ(Murder) ಮಾಡಿರುವ ಘಟನೆ ಜಿಲ್ಲೆಯ ಯರಗಟ್ಟಿ(Yaragatti) ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕ. ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ನಿವಾಸಿಯಾಗಿರುವ ರಮೇಶ್ ಗುಂಜಗಿ, ಎರಡು ತಿಂಗಳ ಹಿಂದೆ, ಮನೆ ಪಕ್ಕದ ಸಾವಾಂಕ್ಕಾ ಎಂಬುವವರ ಜತೆಗೆ ಸಂಬಂಧವಿಟ್ಟುಕೊಂಡಿದ್ದನಂತೆ. ಈ ವಿಚಾರ ಗೊತ್ತಾಗಿ ಗಂಡ ಯಲ್ಲಪ್ಪ ಕಸೊಳ್ಳಿ ಮತ್ತು ಆತನ ಗೆಳೆಯರು ಸೇರಿ ರಮೇಶ್ ಎಂಬಾತನನ್ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.

ಅನೈತಿಕ ಸಂಬಂಧ ಗೊತ್ತಾಗಿ ತಿಂಗಳ ಹಿಂದೆ ರಾಜಿ ಪಂಚಾಯಿತಿ

ಇನ್ನು ಇವರಿಬ್ಬರ ಅನೈತಿಕ ಸಂಬಂಧ ಗೊತ್ತಾಗಿ ಒಂದು ತಿಂಗಳ ಹಿಂದೆ ಗ್ರಾಮದಲ್ಲಿ ರಾಜಿ ಪಂಚಾಯಿತಿ ಮಾಡಲಾಗಿತ್ತು. ರಮೇಶ್ ಮಾಡಿದ ತಪ್ಪಿಗೆ ಯಲ್ಲಪ್ಪನಿಗೆ ಎರಡೂವರೆ ಲಕ್ಷ ದಂಡ ಕೂಡ ಕೊಟ್ಟಿದ್ದ. ಈ ವೇಳೆ ಸಾಂವಕ್ಕಾ ಗಂಡನನ್ನ ಬಿಟ್ಟು ರಮೇಶ್ ಮನೆಗೆ ಬಂದಿದ್ದಳು. ಹೀಗೆ ಬಂದು 15 ದಿನಕ್ಕೆ ಮತ್ತೆ ಗಂಡನ ಜತೆಗೆ ಸಂಪರ್ಕಕ್ಕೆ ಬಂದು, ತವರು ಮನೆ ಸೇರಿದ್ದಳು. ಇದೀಗ ರಮೇಶ್ ಬಿಟ್ಟು ಬಂದ ಸಾಂವಕ್ಕಾ, ಗಂಡನ ಜತೆಗೆ ಸೇರಿಕೊಂಡು ಜೊತೆಗೆ ಆತನ 6 ಜನ ಸೇರಿ ಕೊಲೆ ಮಾಡಿಸಿದ್ದಾರೆಂದು ಕೊಲೆಯಾದ ರಮೇಶ್ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಳಗಾವಿ: ರಾತ್ರಿ ಮನೆಯಿಂದ ಆಚೆ ಹೋದವ ಬರ್ಬರವಾಗಿ ಕೊಲೆಯಾದ, ಆಂಟಿಗಾಗಿ ಬಿತ್ತು ಹೆಣ

ಗೂಡ್ಸ್​ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

ಮಂಡ್ಯ: ಗೂಡ್ಸ್​ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೋಡಿಹಳ್ಳಿ ವೃತ್ತದ ಬಳಿ ನಡೆದಿದೆ. ಮರಿಲಿಂಗಯ್ಯ(65) ಮೃತ ವ್ಯಕ್ತಿ. ಬಸ್​ನಿಂದ ಇಳಿದು ರಸ್ತೆ ದಾಟುವಾಗ ಗೂಡ್ಸ್​ ವಾಹನ ಡಿಕ್ಕಿಯಾಗಿತ್ತು. ಈ ವೇಳೆ ಮರಿಲಿಂಗಯ್ಯ ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಆತನನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಹಲಗೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ