ಬೆಳಗಾವಿ: ಬರದಿಂದ ಕಂಗೆಟ್ಟ ರೈತರು; ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಅನುಮತಿ

ಮೋಡ ಬಿತ್ತನೆ ವೇಳೆ ಸೂಕ್ತ ಮಾರ್ಗದರ್ಶನ ನೀಡುವಂತೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಸಿಕಾಂತರಾಜ್​ ಅವರು ಪತ್ರ ಬರೆದಿದ್ದು, ಇದರ ಜೊತೆಗೆ ಕೈಗೊಂಡ ಕ್ರಮದ ಬಗ್ಗೆಯೂ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಬೆಳಗಾವಿ: ಬರದಿಂದ ಕಂಗೆಟ್ಟ ರೈತರು; ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಅನುಮತಿ
ಮೋಡ ಬಿತ್ತನೆ ಪ್ರಾತಿನಿಧಿಕ ಚಿತ್ರ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 16, 2023 | 2:36 PM

ಬೆಳಗಾವಿ, ಸೆ.16: ರಾಜ್ಯಾದ್ಯಂತ ಬರಗಾಲದ ಛಾಯೆ ಮೂಡಿದೆ. ಅದರಲ್ಲೂ ಬೆಳಗಾವಿ ಸೇರಿದಂತೆ ಅನೇಕ ಜಿಲ್ಲೆಗಳು ಮಳೆ ಇಲ್ಲದೆ ಕಂಗಾಲಾಗಿದೆ. ಈ ಹಿನ್ನಲೆ ಇದೀಗ ಬೆಳಗಾವಿ (Belagavi) ಜಿಲ್ಲೆಯಲ್ಲಿ 2 ಖಾಸಗಿ ಕಂಪನಿಗಳಾದ ಕ್ಯಾತಿ ಕ್ಲೈಮೇಟ್ ಮೊಡಿಫಿಕೇಶನ್ ಕನ್ಸಲ್ಟನ್ಸಿ ಹಾಗೂ ಬೆಳಗಾಂ ಶುಗರ್ಸ್ ಪ್ರೈವೇಟ್ ಲಿಮಿಟೆಡ್​ಗೆ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಜೊತೆಗೆ ಮೋಡ ಬಿತ್ತನೆ ವೇಳೆ ಸೂಕ್ತ ಮಾರ್ಗದರ್ಶನ ನೀಡುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಸಿಕಾಂತರಾಜ್​ ಅವರು ಪತ್ರ ಬರೆದಿದ್ದು, ಇದರ ಜೊತೆಗೆ ಕೈಗೊಂಡ ಕ್ರಮದ ಬಗ್ಗೆಯೂ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಇನ್ನು ಇದೇ ಸೆಪ್ಟೆಂಬರ್​ 4 ರಂದು ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಹೇಳಿದ್ದರು. ಇದಕ್ಕೆ ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಹೆಚ್​​.ಕೆ.ಪಾಟೀಲ್​ ಚಾಲನೆ ನೀಡಿದ್ದರು. ಈ ಕುರಿತು ಮಾತನಾಡಿದ್ದ ಅವರು ‘ಬರಗಾಲ ಛಾಯೆಯ ಬಗ್ಗೆ ಹವಾಮಾನ ವರದಿ ಮುನ್ಸೂಚನೆ ನೀಡಿತ್ತು. ಕೇಂದ್ರದ ಭೂವಿಜ್ಞಾನ ಸಚಿವಾಲಯ ಕೂಡ ಸಾಕಷ್ಟು ರಿಸರ್ಚ್ ಮಾಡಿತ್ತು. ಮಳೆ ಬರುವುದು ಖಚಿತ ಎನ್ನುವ ಮಾಹಿತಿಯಿಂದ ಮೋಡ ಬಿತ್ತನೆ ಮಾಡಲಾಗಿದೆ ಎಂದಿದ್ದರು.

ಇದನ್ನೂ ಓದಿ:ರಾಜ್ಯದಲ್ಲಿ ಬರಗಾಲ..ಇತ್ತ ಮಂತ್ರಾಲಯಕ್ಕೂ ತಟ್ಟಿದ ಬಿಸಿ! ತುಂಗಭದ್ರಾ ನದಿ ಖಾಲಿ, ಪುಣ್ಯ ಸ್ನಾನವಿಲ್ಲದೇ ಭಕ್ತರು ಬೇಸರ!

ಇನ್ನು ರಾಣೆಬೆನ್ನೂರು ಕ್ಷೇತ್ರದ ರೈತರು ಮಳೆಯ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. ಹೀಗಾಗಿ ನಾವು ಮೋಡ ಬಿತ್ತನೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದರು. ಈ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯನವರು ಅನುಮತಿ ಕೊಟ್ಟಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಮಾತ್ರ ಮೋಡ ಬಿತ್ತನೆ ಕಾರ್ಯ ಮಾಡುತ್ತಿದ್ದೇವೆ. ನಮ್ಮದೇ ಸ್ವಂತ ವಿಮಾನ ಇರುವುದರಿಂದ ಖರ್ಚು ಕಡಿಮೆ ಆಗುತ್ತೆ. 15ರಿಂದ 20 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮುಗಿಯಲಿದೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ