ಬೆಳಗಾವಿಯಲ್ಲಿ ಬಾಣಂತಿ ಪೂಜಾ ಸಾವಿಗೆ ಕಾರಣ ಕೊಟ್ಟ ರಾಜ್ಯ ಆರೋಗ್ಯ ಇಲಾಖೆ

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ಒಬ್ಬ ಬಾಣಂತಿ ಹೆರಿಗೆಯ ನಂತರ ಮೃತಪಟ್ಟರೆ, ಇನ್ನೊಬ್ಬರು ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಗಳಿಂದ ಆಸ್ಪತ್ರೆ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿದ್ದು, ತನಿಖೆಗೆ ಆಗ್ರಹಿಸಲಾಗುತ್ತಿದೆ. ರಾಜ್ಯ ಆರೋಗ್ಯ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಳಗಾವಿಯಲ್ಲಿ ಬಾಣಂತಿ ಪೂಜಾ ಸಾವಿಗೆ ಕಾರಣ ಕೊಟ್ಟ ರಾಜ್ಯ ಆರೋಗ್ಯ ಇಲಾಖೆ
ಬೆಳಗಾವಿಯಲ್ಲಿ ಬಾಣಂತಿ ಪೂಜಾ ಸಾವಿಗೆ ಕಾರಣ ತಿಳಿಸಿದ ರಾಜ್ಯ ಆರೋಗ್ಯ ಇಲಾಖೆ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Dec 26, 2024 | 9:08 PM

ಬೆಳಗಾವಿ, ಡಿಸೆಂಬರ್​ 26: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ನಾಲ್ಕು ದಿನದ ಅವಧಿಯಲ್ಲಿ ಇಬ್ಬರು ಬಾಣಂತಿಯರು ಸಾವನ್ನಪ್ಪಿರುವುದು (Maternal death) ಸಾಕಷ್ಟು ಅನುಮಾನ ಮೂಡಿಸಿದೆ. ಡಿ.22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿ ಮಾರನೇ ದಿನ ಓರ್ವ ಬಾಣಂತಿ ಮೃತಪಟ್ಟಿದ್ದರೆ ಇಂದು ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಇದೀಗ ಬಾಣಂತಿ ಪೂಜಾ ಸಾವಿಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆರೋಗ್ಯ ಇಲಾಖೆ ಮಾಹಿತಿ ಹೀಗಿದೆ

ಬೆಳಗಾವಿಯ ಬಿಮ್ಸ್​ ಮೆಡಿಕಲ್ ಕಾಲೇಜಿನಲ್ಲಿ ಪೂಜಾ ಅಡಿವೆಪ್ಪ ಎಂಬುವರು ಹೆರಿಗೆ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್ 24ರಂದು ಅಡ್ಮಿಟ್ ಆಗಿದ್ದ ಪೂಜಾ ಗಂಭೀರ ಸ್ಥಿತಿಯಲ್ಲಿದ್ದರು. ಆಸ್ಪತ್ರೆಗೆ ದಾಖಲಾದ ವೇಳೆ ಮೂಗು ಮತ್ತು ಬಾಯಿಯಲ್ಲಿ ರಕ್ತಸ್ರಾವವಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು: ತರಾತುರಿಯಲ್ಲಿ ಮೃತದೇಹ ಕೊಟ್ಟು ಕಳಿಸಿದ ವೈದ್ಯರು

ಹೆರಿಗೆಯ ದಿನಾಂಕ ಇನ್ನೂ ಒಂದು ತಿಂಗಳು ಮುಂದಿದ್ದು, ಗರ್ಭಿಣಿ ಪೂಜಾ ಅಡಿವೆಪ್ಪ ಖಡಕಬಾವಿ ಸ್ಥಿತಿ ಗಂಭೀರವಾಗಿದ್ದರಿಂದ ಮಗುವಿನ ಜೀವ ಉಳಿಸುವ ನಿಟ್ಟಿನಲ್ಲಿ ಕುಟುಂಬದವರ ಒಪ್ಪಿಗೆ ಪಡೆದು ಸಹಜ ಹೆರಿಗೆ ಮಾಡಿಸಲಾಗಿದೆ. ಬಳಿಕ ಪೂಜಾ ಖಡಕಬಾವಿ ನಿಧನರಾಗಿದ್ದಾರೆ. ಮಗುವನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಡಿ.24ರಂದು ರಾತ್ರಿ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದ ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಖಡಕಬಾವಿ (25) ಎಂಬ ಬಾಣಂತಿ ನಿನ್ನೆಯಷ್ಟೇ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಬಿಮ್ಸ್​ನಲ್ಲಿ ಮತ್ತೊಬ್ಬ ಬಾಣಂತಿ ಸಾವು: ವೈದ್ಯರ ವಿರುದ್ಧ ಆಕ್ರೋಶ

ಎಂಟು ತಿಂಗಳಿಗೆ ಮಗು ಜನಿಸಿದ್ದು, 1.6ಕೆಜಿ ಯಷ್ಟು ತೂಕ ಇದ್ದ ಕಾರಣಕ್ಕೆ ಮಗುವನ್ನ ಐಸಿಯುವಿಗೆ ಶಿಫ್ಟ್​ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿರುತ್ತೆ. ಇತ್ತ ಬಾಣಂತಿ ಪೂಜಾಗೂ ಕೂಡ ಆರೋಗ್ಯದಲ್ಲಿ ಏರುಪೇರಾಗಿ ಆಕೆಗೂ ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿರುತ್ತೆ. ಆದರೆ ಇಂದು ಮಧ್ಯಾಹ್ನದ ವೇಳೆ ಏಕಾಏಕಿ ಪೂಜಾ ಸಾವನ್ನಪ್ಪಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಆಸ್ಪತ್ರೆ ಮುಂಭಾಗದಲ್ಲೇ ಮುಗಿಲುಮುಟ್ಟಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:55 pm, Thu, 26 December 24

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ