ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹವನ್ನ ಬ್ಲಾಸ್ಟ್​​​ ಮಾಡುತ್ತೇವೆ ಎಂದು ಡಿಐಜಿಪಿಗೆ ಬೆದರಿಕೆ ಕರೆ

| Updated By: ವಿವೇಕ ಬಿರಾದಾರ

Updated on: Oct 09, 2023 | 12:10 PM

ಬೆಂಗಳೂರು ಹಾಗೂ ಬೆಳಗಾವಿ ಕೇಂದ್ರ ಕಾರಾಗೃಹದಿಂದ ಬಂದೀಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಬೆದರಿಕೆ ಕರೆ ಬಂದಿದೆ.

ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹವನ್ನ ಬ್ಲಾಸ್ಟ್​​​ ಮಾಡುತ್ತೇವೆ ಎಂದು ಡಿಐಜಿಪಿಗೆ ಬೆದರಿಕೆ ಕರೆ
ಬೆಳಗಾವಿ ಕೇಂದ್ರ ಕಾರಾಗೃಹ (ಎಡಚಿತ್ರ) ಬೆಂಗಳೂರು ಕೇಂದ್ರ ಕಾರಾಗೃಹ (ಬಲಚಿತ್ರ)
Follow us on

ಬೆಂಗಳೂರು/ಬೆಳಗಾವಿ ಅ.09: ಬೆಂಗಳೂರು ಕೇಂದ್ರ ಕಾರಾಗೃಹ (Bengaluru Central Jail) ಪರಪ್ಪನ ಅಗ್ರಹಾರ ಮತ್ತು ಬೆಳಗಾವಿ ಹಿಂಡಲಗಾ ಕಾರಾಗೃಹವನ್ನು (Belagavi Central Jail) ಬ್ಲಾಸ್ಟ್​​ ಮಾಡುತ್ತೇವೆ. ಅಲ್ಲದೆ ತಾವು ವಾಸಿಸುವ ವಸತಿಗೃಹವನ್ನೂ ಸ್ಫೋಟಿಸುತ್ತೇವೆ ಎಂದು ಬಂದೀಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಬೆದರಿಕೆ ಕರೆ (Threat Call) ಬಂದಿದೆ.

ಅಪರಿಚಿತ ವ್ಯಕ್ತಿ ಟಿ.ಪಿ.ಶೇಷ ಅವರ ಸರ್ಕಾರಿ ನಂಬರ್‌ಗೆ ಕರೆ ಮಾಡಿ, “ನನಗೆ ಹಿಂಡಲಗಾ ಜೈಲಿನ ಹೆಡ್ ವಾರ್ಡನ್​ಗಳಾದ ಜಗದೀಶ್ ಗಸ್ತಿ, ಎಸ್.ಎಂ.ಗೋಟೆ ಪರಿಚಯವಿದ್ದಾರೆ. ಅಲ್ಲದೆ ಭೂಗತ ಪಾತಕಿ ಬನ್ನಂಜೆ ರಾಜಾ ಕೂಡ ನನಗೆ ಗೊತ್ತು. ನಾನು ಜೈಲಿನಲ್ಲಿದ್ದಾಗ ಆತನಿಗೆ ನಾನು ಸಹಾಯ ಮಾಡಿದ್ದೇನೆ. ಹಿಂಡಲಗಾ ಜೈಲಿನಲ್ಲಿ ಗಲಭೆ ಸೃಷ್ಟಿಸಿ ನಿಮ್ಮ ಮೇಲೆ ಹಲ್ಲೆ ಮಾಡಲಾಗುವುದು. ತಾವು ವಾಸಿಸುವ ವಸತಿಗೃಹವನ್ನೂ ಸ್ಫೋಟಿಸುವುದಾಗಿ” ಬೆದರಿಕೆ ಕರೆ ಮಾಡಿದ್ದೇನೆ.

ಇದನ್ನೂ ಓದಿ: ಹಿಂಡಲಗಾ ಜೈಲಿನ ಅಕ್ರಮ ಬಯಲು ಮಾಡಿದ ಟಿವಿ9; ಕಾಸಿದ್ರೆ ಜೈಲಲ್ಲೂ ರಾಜನಂತೆ ಮೆರೆಯಬಹುದು

ಬೆದರಿಕೆ ಕರೆ ಹಿನ್ನೆಲೆಯಲ್ಲಿ ಅನಾಮಧೇಯ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಐಜಿಪಿ ಟಿ.ಪಿ.ಶೇಷ ಅವರು ಬೆಳಗಾವಿ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ

ಇದೇ ವರ್ಷ ಜನವರಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಮಾಡಲಾಗಿತ್ತು. ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಮಾಡಲಾಗಿತ್ತು. 10 ಕೋಟಿ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ಪ್ರಕರಣವನ್ನು ದಾಖಲಿಸಿಕೊಂಡು ಮಹಾರಾಷ್ಟ್ರ ಪೊಲೀಸರು ಕರಣದ ತನಿಖೆ ನಡೆಸಿದ್ದರು.

ತನಿಖೆ ವೇಳೆ ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ  ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್​​ ಜನವರಿ 14 ಮತ್ತು ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ಸೆಲ್ ಫೋನ್ ಬಳಸಿ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದನು ಎಂದು ಪತ್ತೆಯಾಗಿತ್ತು. ಅಲ್ಲದೆ ಈತನಿಗೆ ಭಯೋತ್ಪಾದಕ ಅಫ್ಸರ್ ಪಾಷಾ ನಂಟಿರುವುದು ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:51 am, Mon, 9 October 23