ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ; ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಮಹಾರಾಷ್ಟ್ರ ಪೊಲೀಸರ ದಾಳಿ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಕೈದಿಯಿಂದ ಬೆದರಿಕೆ ಕರೆಗಳು ಬಂದಿವೆ.

ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ; ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಮಹಾರಾಷ್ಟ್ರ ಪೊಲೀಸರ ದಾಳಿ
ನಿತಿನ್​ ಗಡ್ಕರಿ, ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ
Follow us
ಆಯೇಷಾ ಬಾನು
|

Updated on:Mar 25, 2023 | 11:57 AM

ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ(Nitin Gadkari) ಅವರ ಕಚೇರಿಗೆ ಬೆದರಿಕೆ ಕರೆ ಬಂದಿದ್ದು ಈ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ(Hindalga Jail) ಗುರುವಾರ(ಮಾರ್ಚ್ 23) ಸಂಜೆ ಮಹಾರಾಷ್ಟ್ರ ಪೊಲೀಸರು(Maharashtra Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಮಂಗಳವಾರ(ಮಾರ್ಚ್ 21) ಮೂರು ದೂರವಾಣಿ ಕರೆಗಳು ಬಂದಿವೆ.

ಬೆದರಿಕೆ ಕರೆ ಮಾಡಿದವರನ್ನು ಹಿಂಡಲಗಾ ಜೈಲಿನ ಕೈದಿ ಜಯೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ಜಯೇಶ್, ಗಡ್ಕರಿ ಅವರ ಕಚೇರಿ ಸಿಬ್ಬಂದಿಗೆ ಕರೆ ಮಾಡಿ 10 ಕೋಟಿ ರೂಪಾಯಿ ನೀಡದಿದ್ದರೆ ಕೇಂದ್ರ ಸಚಿವರಿಗೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದ. ಜನವರಿ ತಿಂಗಳಲ್ಲೂ ಜಯೇಶ್ ಇದೇ ರೀತಿ ಕಚೇರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ. ಸದ್ಯ ನಾಗಾಪುರ ಪೊಲೀಸರು ಹಿಂಡಲಗಾ ಜೈಲಿಗೆ ಭೇಟಿ ನೀಡಿ ಕೈದಿ ಜಯೇಶ್​ಯಿಂದ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಬೆದರಿಕೆ ಕರೆಯ ನಂತರ ಗಡ್ಕರಿ ಅವರ ಕಚೇರಿ ಮತ್ತು ನಿವಾಸಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: Bomb Threat Call: ಅಮಿತಾಭ್​, ಅಂಬಾನಿ, ಧರ್ಮೇಂದ್ರ ಮನೆಯಲ್ಲಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ ಕಿಡಿಗೇಡಿ

ನಾಗಾಪುರ ಪೊಲೀಸರು ಬೆಳಗಾವಿ ಪೊಲೀಸರ ಸಹಾಯದಿಂದ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಶೋಧ ಕಾರ್ಯ ನಡೆಸಿದರು. ತಪಾಸಣೆ ವೇಳೆ ಜೈಲಿನ ಆವರಣದಲ್ಲಿ ಎರಡು ಮೊಬೈಲ್ ಫೋನ್‌ಗಳು ಮತ್ತು ಎರಡು ಸಿಮ್ ಕಾರ್ಡ್‌ಗಳು ಪತ್ತೆಯಾಗಿವೆ. ಜನವರಿಯಲ್ಲಿ 10 ಕೋಟಿ ರೂ.ಗೆ ಬೇಡಿಕೆ ಇಟ್ಟು ಸಚಿವರ ಕಚೇರಿಗೆ ಬೆದರಿಕೆ ಕರೆಗಳನ್ನು ಮಾಡಲಾಗಿದೆ. ಸದ್ಯ ಜಯೇಶ್​ನನ್ನು ವಿಚಾರಣೆ ನಡೆಸಲು ಕಸ್ಟಡಿಗೆ ನೀಡುವಂತೆ ಕೋರುತ್ತೇವೆ ಎಂದು ನಾಗ್ಪುರ ಪೊಲೀಸ್ ಅಧಿಕಾರಿ ಅಮಿತೇಶ್ ಕುಮಾರ್ ತಿಳಿಸಿದರು.

2008ರಲ್ಲಿ ಡಕಾಯಿತಿ ವೇಳೆ ನಡೆದ ಕೊಲೆ ಪ್ರಕರಣದಲ್ಲಿ ಜಯೇಶ್‌ಗೆ ಮರಣದಂಡನೆ ವಿಧಿಸಲಾಗಿತ್ತು. ಮರಣದಂಡನೆಯನ್ನು ನಂತರ ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:57 am, Sat, 25 March 23

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ