ನಿಜಗುಣಾನಂದ ಸ್ವಾಮೀಜಿ ಸೇರಿದಂತೆ 3 ಸಚಿವರಿಗೆ ಜೀವ ಬೆದರಿಕೆ; ಪತ್ರದಲ್ಲಿ ಏನಿದೆ? ಇಲ್ಲಿದೆ ಓದಿ

| Updated By: ವಿವೇಕ ಬಿರಾದಾರ

Updated on: Sep 30, 2023 | 11:43 AM

ಅನಾಮಿಕನಿಂದ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಸೇರಿದಂತೆ ರಾಜ್ಯದ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ ಬಂದಿದೆ. ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಪ್ರೀಯಾಂಕ್ ಖರ್ಗೆ ಅವರ ಹೆಸರು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಿಜಗುಣಾನಂದ ಸ್ವಾಮೀಜಿ ಸೇರಿದಂತೆ 3 ಸಚಿವರಿಗೆ ಜೀವ ಬೆದರಿಕೆ; ಪತ್ರದಲ್ಲಿ ಏನಿದೆ? ಇಲ್ಲಿದೆ ಓದಿ
ನಿಜಗುಣಾನಂದ ಸ್ವಾಮೀಜಿ, ಸತೀಶ್​ ಜಾರಕಿಹೊಳಿ, ಪ್ರಿಯಾಂಕ್​ ಖರ್ಗೆ
Follow us on

ಬೆಳಗಾವಿ ಸೆ.30: ಇತ್ತೀಚಿಗೆ ಬೈಲಹೊಂಗಲ (Bailhongal) ತಾಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ (Nijagunananda Swamiji) ಅವರಿಗೆ ಅನಾಮಿಕನಿಂದ ಜೀವ ಬೆದರಿಕೆ ಪತ್ರ ಬಂದಿತ್ತು. ಇದೀಗ ಸೆ.20 ಮತ್ತೊಂದು ಜೀವ ಬೆದರಿಕೆ ಪತ್ರ ಸ್ವಾಮೀಜಿಗೆ ಬಂದಿದ್ದು, ಪತ್ರದಲ್ಲಿ ಸ್ವಾಮೀಜಿ ಸೇರಿದಂತೆ ರಾಜ್ಯದ ಮೂವರು ಸಚಿವರ ಹೆಸರನ್ನು ಉಲ್ಲೇಖಿಸಲಾಗಿದೆ. ಸಚಿವರಾದ ಸತೀಶ್ ಜಾರಕಿಹೊಳಿ (Satish Jarkiholi), ದಿನೇಶ್ ಗುಂಡೂರಾವ್ (Dinesh Gundurao), ಪ್ರೀಯಾಂಕ್ ಖರ್ಗೆ (Priyank Kharge) ಅವರ ಹೆಸರು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅನಾಮಿಕ ಬರೆದ ಪತ್ರದಲ್ಲಿ ಏನಿದೆ?

“ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ. ಅಥವಾ ಸಾವಿನ ಪತ್ರವಂತಾದರೂ ತಿಳಿ, ನಾನು ನಿನ್ನ ಜತೆ ತಮಾಷೆ‌ ಮಾಡುತ್ತಿಲ್ಲ. ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ. ನೀನು ಮನುಷ್ಯ ರೂಪದಲ್ಲಿರುವ ರಾಕ್ಷಸ. ಹಿಂದೂ ಧರ್ಮ ದೇವತೆಗಳನ್ನು ನಿಂದಿಸುವ ನೀನು ರಾಕ್ಷಸನೇ ಸರಿ. ನಿನ್ನ ಜೀವನದ‌ ಕೊನೆಯ ಘಟ್ಟದಲ್ಲಿ ನೀನು ನಿಂತಿದ್ದಿಯಾ. ನಿನ್ನ ಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲ. ನಿನ್ನಂಥ ದುಷ್ಟ ರಾಕ್ಷಸಿ ಸಂತತಿಯ ಸಂಹಾರವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: 2023ರಲ್ಲಿ ನಿನ್ನ ಹತ್ಯೆ ತಪ್ಪುವುದಿಲ್ಲ: ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ

“ಎಸ್.ಜಿ ಸಿದ್ದರಾಮಯ್ಯ, ಕೆ.ಮರುಳಸಿದ್ದಪ್ಪ, ಬರಗೂರು ರಾಮಚಂದ್ರಪ್ಪ, ಭಾಸ್ಕರ್ ಪ್ರಸಾದ್, ಪ್ರೋ.ಭಗವಾನ್,ಪ್ರೋ.ಮಹೇಶ್ ಚಂದ್ರ, ಬಿಟಿ ಲಲಿತಾನಾಯಕ್, ನಟ ಚೇತನ್, ನಟ ಪ್ರಕಾಶರಾಜ್. ಸಚಿವರಾದ ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಹಾಗೂ ಧ್ವಾರಕಾನಾಥ, ದೇವನೂರು ಮಹದೇಪ್ಪ, ಬಿ.ಎಲ್ ವೇಣು, ನೀವು ನಿಮ್ಮ ತಂದೆ ತಾಯಿಗಳಿಗೆ ಹುಟ್ಟಿದ್ದರೆ ಕೇಳುವ ಪ್ರಶ್ನೆಗೆ ಉತ್ತರ ಕೊಡಿ ಎಂದು ಸವಾಲು ಹಾಕಿದ್ದಾನೆ.”

“ಮತಾಂಧ ಮುಸ್ಲಿಂಮರು, ಪಾಕಿಸ್ತಾನಿಗಳು, ಭಯೋತ್ಪಾದಕರು ಮಾಡ್ತೊರೋದು ತಪ್ಪು ಎಂದು ಹೇಳುವ ತಾಕತ್ತು ನಿಮ್ಮಲ್ಲಿದಿಯೇ? ದೇಶದ ಒಳಗೆ ಇದ್ದುಕೊಂಡು ಪಾಕ್ ನಾಯಿಗಳು ಮಾಡ್ತಿರೋದು ತಪ್ಪು ‌ಎಂದು ಹೇಳುವ ಧೈರ್ಯ ನಿಮ್ಮಲ್ಲಿದೆಯೇ? ದೈರ್ಯವಿದ್ದರೆ ಹೇಳಿ ಇಲ್ಲವಾದರೆ ನಿಮ್ಮ ಕೊನೆಯ ‌ದಿನಗಳನ್ನು ಎಣಿಸಿ” ಎಂದು ಬೆದರಿಕೆ ಹಾಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:42 am, Sat, 30 September 23