AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಲಾರಿ- ಕಾರು ಮಧ್ಯೆ ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎರಡೂ ವಾಹನಗಳು ನೇರವಾಗಿ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

ಬೆಳಗಾವಿಯಲ್ಲಿ ಲಾರಿ- ಕಾರು ಮಧ್ಯೆ ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ
Maladinni Cross Accident
ಸಹದೇವ್​ ಮಾನೆ
| Edited By: |

Updated on:Nov 15, 2026 | 3:13 PM

Share

ಬೆಳಗಾವಿ, (ನವೆಂಬರ್ 15): ಲಾರಿ ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ನಡೆದಿದೆ. ಓಂಕಾರ ಮಾಂಡ್ರಿ(26), ರೇಷ್ಮಾ ಮಾಂಡ್ರಿ(32), ದೇವಾಂಶ್(4) ಮೃತ ದುರ್ವೈವಿಗಳು. ಇನ್ನು ಘಟನೆಯಲ್ಲಿ ಶ್ರೀಕಾಂತ್, ವಂದನಾ, ಹರ್ಷದ್​ ಎನ್ನುವರಿಗೆ ಗಂಭೀರ ಗಾಯಗಳಾಗಿದ್ದು, ಇವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಾರಾಷ್ಟ್ರದ ಪುಣೆಯಿಂದ ಸವದತ್ತಿ ಕಡೆಗೆ ಹೊರಟಿದ್ದ ಕಾರು, ಸವದತ್ತಿಯಿಂದ ಗೋಕಾಕ್ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ.

ಕಾರು ಮಹಾರಾಷ್ಟ್ರದ ಪುಣೆಯಿಂದ ಸವದತ್ತಿ ಕಡೆಗೆ ಹೊರಟಿದ್ದರೆ, ಸವದತ್ತಿಯಿಂದ ಗೋಕಾಕ್ ಕಡೆಗೆ ತೆರಳುತ್ತಿದ್ದ ಲಾರಿ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಲಾರಿ ಪಲ್ಟಿಯಾಗಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಇನ್ನುಳಿದ ಮೂವರಿಗೆ ಗಾಯಗಳಾಗಿವೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು! ಭೀಕರ ಅಪಘಾತದಲ್ಲಿ ಯುವಕರಿಬ್ಬರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿ

ಇನ್ನೊಂದೆಡೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಶಹಾಪುರದಿಂದ ಲಿಂಗಸ್ಗೂರಿಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದರೆ ಎಂಟು ಜನರಿಗೆ ಗಾಯಗಳಾಗಿವೆ. ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡೆತ್​ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಕಾರಿಪುರ ತಾಲೂಕಿನ ನೆರಲಗಿ ಗ್ರಾಮದಲ್ಲಿ ನಡೆದಿದೆ. ಶಿವಮೂರ್ತಿ(55) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ​ಸೊಸೆ ಸೇರಿದಂತೆ ಐವರ ಕಿರುಕುಳವೇ ಸಾವಿಗೆ ಕಾರಣವೆಂದು ಡೆತ್​​ ನೋಟ್​​ನಲ್ಲಿ ಬರೆದಿಟ್ಟು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ​ಮೃತ ಶಿವಮೂರ್ತಿ ಪತ್ನಿ ರೇಣುಕಮ್ಮ ದೂರಿನ ಮೇರೆಗೆ ಶಿರಾಳಕೊಪ್ಪ ಠಾಣೆಯಲ್ಲಿ ಸೊಸೆ ಸೃಷ್ಟಿ, ನಾಗಪ್ಪ, ರೇಣುಕಮ್ಮ, ವಿನಾಯಕ, ಮನೋಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Sun, 15 November 26

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್
ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ
ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ