
ಬೆಳಗಾವಿ, (ನವೆಂಬರ್ 15): ಲಾರಿ ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ನಡೆದಿದೆ. ಓಂಕಾರ ಮಾಂಡ್ರಿ(26), ರೇಷ್ಮಾ ಮಾಂಡ್ರಿ(32), ದೇವಾಂಶ್(4) ಮೃತ ದುರ್ವೈವಿಗಳು. ಇನ್ನು ಘಟನೆಯಲ್ಲಿ ಶ್ರೀಕಾಂತ್, ವಂದನಾ, ಹರ್ಷದ್ ಎನ್ನುವರಿಗೆ ಗಂಭೀರ ಗಾಯಗಳಾಗಿದ್ದು, ಇವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಾರಾಷ್ಟ್ರದ ಪುಣೆಯಿಂದ ಸವದತ್ತಿ ಕಡೆಗೆ ಹೊರಟಿದ್ದ ಕಾರು, ಸವದತ್ತಿಯಿಂದ ಗೋಕಾಕ್ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ.
ಕಾರು ಮಹಾರಾಷ್ಟ್ರದ ಪುಣೆಯಿಂದ ಸವದತ್ತಿ ಕಡೆಗೆ ಹೊರಟಿದ್ದರೆ, ಸವದತ್ತಿಯಿಂದ ಗೋಕಾಕ್ ಕಡೆಗೆ ತೆರಳುತ್ತಿದ್ದ ಲಾರಿ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಲಾರಿ ಪಲ್ಟಿಯಾಗಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಇನ್ನುಳಿದ ಮೂವರಿಗೆ ಗಾಯಗಳಾಗಿವೆ.
ಇದನ್ನೂ ಓದಿ: ಕೆಎಸ್ಆರ್ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು! ಭೀಕರ ಅಪಘಾತದಲ್ಲಿ ಯುವಕರಿಬ್ಬರು ಸಾವು
ಇನ್ನೊಂದೆಡೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಶಹಾಪುರದಿಂದ ಲಿಂಗಸ್ಗೂರಿಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದರೆ ಎಂಟು ಜನರಿಗೆ ಗಾಯಗಳಾಗಿವೆ. ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಕಾರಿಪುರ ತಾಲೂಕಿನ ನೆರಲಗಿ ಗ್ರಾಮದಲ್ಲಿ ನಡೆದಿದೆ. ಶಿವಮೂರ್ತಿ(55) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸೊಸೆ ಸೇರಿದಂತೆ ಐವರ ಕಿರುಕುಳವೇ ಸಾವಿಗೆ ಕಾರಣವೆಂದು ಡೆತ್ ನೋಟ್ನಲ್ಲಿ ಬರೆದಿಟ್ಟು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಶಿವಮೂರ್ತಿ ಪತ್ನಿ ರೇಣುಕಮ್ಮ ದೂರಿನ ಮೇರೆಗೆ ಶಿರಾಳಕೊಪ್ಪ ಠಾಣೆಯಲ್ಲಿ ಸೊಸೆ ಸೃಷ್ಟಿ, ನಾಗಪ್ಪ, ರೇಣುಕಮ್ಮ, ವಿನಾಯಕ, ಮನೋಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Published On - 3:13 pm, Sun, 15 November 26