ಬೆಳಗಾವಿ ಅಧಿವೇಶನ: ಪೊಲೀಸ್ ಸಿಬ್ಬಂದಿ ವಾಸ್ತವ್ಯಕ್ಕೆ 4 ಜರ್ಮನ್ ಟೆಂಟ್, ಹೇಗಿದೆ? ಏನೆಲ್ಲಾ ವ್ಯವಸ್ಥೆ? ಇಲ್ಲಿದೆ ವಿವರ

| Updated By: ರಮೇಶ್ ಬಿ. ಜವಳಗೇರಾ

Updated on: Nov 30, 2023 | 9:19 AM

Belagavi Winter Session: ಇದೇ ಡಿಸೆಂಬರ್ 4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ರಾಜಕಾರಣಿ ಹಾಗೂ ಪೊಲೀಸ್ ಸಿಬ್ಬಂದಿ ವಾಸ್ತವ್ಯದ್ದೇ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಬಂದೋಬಸ್ತ್​ಗೆ ಬರುವ ಪೊಲೀಸರ ವಾಸ್ತವ್ಯಕ್ಕೆ ಜರ್ಮನ್​ ಟೆಂಟ್​ಗಳ ಮೂಲಕ ಟೌನ್ ಶಿಪ್​ ನಿರ್ಮಾಣ ಮಾಡಲಾಗಿದೆ. ಹಾಗಾದ್ರೆ, ಈ ಜರ್ಮನ್​ ಟೆಂಟ್​ ಹೇಗಿರಲಿದೆ? ಏನೆಲ್ಲಾ ವ್ಯವಸ್ಥೆಗಳು ಇರಲಿದೆ? ಎನ್ನುವ ವಿವರ ಈ ಕೆಳಗಿನಂತಿದೆ.

ಬೆಳಗಾವಿ ಅಧಿವೇಶನ: ಪೊಲೀಸ್ ಸಿಬ್ಬಂದಿ ವಾಸ್ತವ್ಯಕ್ಕೆ 4 ಜರ್ಮನ್ ಟೆಂಟ್, ಹೇಗಿದೆ? ಏನೆಲ್ಲಾ ವ್ಯವಸ್ಥೆ? ಇಲ್ಲಿದೆ ವಿವರ
ಪೊಲೀಸರ ವಾಸ್ತವ್ಯಕ್ಕೆ ಟೌನ್ ಶಿಪ್
Follow us on

ಬೆಳಗಾವಿ, (ನವೆಂಬರ್ 30): ಇದೇ ಡಿಸೆಂಬರ್ 4 ರಿಂದ 15 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ (Suvarna Soudha) ಚಳಿಗಾಲದ ಅಧಿವೇಶನ (Belagavi Winter Session)
ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಇನ್ನು ರಾಜ್ಯ ವಿಧಾನಮಂಡಲ ಚಳಿಗಾಲ ಅಧಿವೇಶನದ (Winter Session) ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ (Police) ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಮಾಹಿತಿ ನೀಡಿದ್ದಾರೆ. ಇನ್ನು ಇಷ್ಟೊಂದು ಸಂಖ್ಯೆಯ ಪೊಲೀಸರ ವಾಸ್ತವ್ಯಕ್ಕೆ ನಾಲ್ಕು ದೊಡ್ಡ ದೊಡ್ಡ ಜರ್ಮನ್ ಟೆಂಟ್ ನೊಂದಿಗೆ ಬೃಹತ್ ಟೌನ್ ಶಿಪ್ (township)ನಿರ್ಮಿಸಲಾಗಿದೆ.

ಎರಡು ಕೋಟಿ ರೂ. ವೆಚ್ಚದಲ್ಲಿ ಟೌನ್ ಶಿಪ್

ಅಧಿವೇಶನ ಬಂದೋಬಸ್ತ್‌ಗೆ ರಾಜ್ಯದ ನಾನಾ ಜಿಲ್ಲೆಗಳಿಂದ ಬರುವ ಪೊಲೀಸ್ ಸಿಬ್ಬಂದಿಗೆ ಬೃಹತ್ ಟೌನ್ ಶೀಫ್ ನಿರ್ಮಿಸಿ ವಾಸ್ತವ್ಯಕ್ಕೆ ಸುವರ್ಣ ವಿಧಾನ ಸೌಧದ ಅಲಾರವಾಡ ಬಳಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಟೌನ್ ಶಿಪ್ ನಿರ್ಮಾಣವಾಗಿದೆ. ಈ ಟೌನ್ ಶಿಪ್ ನಿರ್ಮಾಣ ಕೆಲಸವನ್ನು ಮೈಸೂರಿನ ಕೆ.ಎಂ ಶರೀಫ್ ಎನ್ನುವರು ತೆಗೆದುಕೊಂಡಿದ್ದು, ಹದಿಮೂರು ದಿನಗಳಿಂದ 100 ಜನ ಕಾರ್ಮಿಕರು ಈ ಟೆಂಟ್ ನಿರ್ಮಾಣದಲ್ಲಿ ತೊಡಗಿದ್ದಾರೆ. ಇದೀಗ ಬಹುತೇಕ ಮುಗಿದಿದ್ದು, ಕೊನೆಯ ಹಂತದ ಕೆಲಸಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ 5 ಸಾವಿರ ಪೊಲೀಸರ ನಿಯೋಜನೆ

ಹೇಗಿರಲಿವೆ ಈ ಜರ್ಮನ್ ಟೆಂಟ್?

ನಾಲ್ಕು ದೊಡ್ಡ ದೊಡ್ಡ ಜರ್ಮನ್ ಟೆಂಟ್ ಹಾಕಿ ಒಂದು ಚಿಕ್ಕ ಟೆಂಟ್ ಹಾಕಿ ಟೌನ್ ಶಿಪ್ ನಿರ್ಮಾಣ ಮಾಡಲಾಗಿದ್ದು, ಒಂದು ಜರ್ಮನ್ ಟೆಂಟ್ 100 ಅಡಿ ಅಗಲ, 200ಅಡಿ ಉದ್ದ ಇರಲಿದೆ. ಇದೇ ಮಾದರಿಯ ಒಟ್ಟು ನಾಲ್ಕು ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದೆ. ಅಧಿಕಾರಿಗಳಿಗೆ ಒಂದು ಸಣ್ಣ-ಸಣ್ಣ ಟೆಂಟ್ ಸಹ ನಿರ್ಮಿಸಲಾಗಿದೆ. ಇನ್ನು ಒಂದೊಂದು ಟೌನ್ ಶಿಪ್ ನಲ್ಲಿ ಐದನೂರು ಜನ ಸಿಬ್ಬಂದಿಗೆ ಮಲಗಲು ವ್ಯವಸ್ಥೆ ಮಾಡಲಾಗಿದೆ.

ವಾಟರ್ ಪ್ರೂಫ್ ಟೆಂಟ್ ಇದಾಗಿದ್ದು, ಒಟ್ಟು 2000 ಜನ ಪೊಲೀಸ್ ಸಿಬ್ಬಂದಿಗಳಿಗೆ ಇಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕಾಟ್, ಗಾದೆ, ತಲೆ ದಿಂಬು, ಬೆಡ್ ಶೀಟ್ ನೀಡಲಾಗುತ್ತದೆ. ಹಾಗೇ ಚಾರ್ಜಿಂಗ್ ವ್ಯವಸ್ಥೆ ಕೂಡ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ