AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ

ಅಪಘಾತದ ಪ್ರತೀಕಾರಕ್ಕೆ ಚಲಿಸುತ್ತಿದ್ದ ಲಾರಿ ಏರಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಡ್ರೈವರ್​​ನ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಮತ್ತೊಂದೆಡೆ ಯಾದಗಿರಿಯಲ್ಲಿ ಕೇಸರಿ ಧ್ವಜದ ವಾಟ್ಸಾಪ್‌ ಸ್ಟೇಟಸ್ ವಿಚಾರಕ್ಕೆ ತಾಯಿ-ಮಗನ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ.

Belagavi: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ
ಪೊಲೀಸರಿಂದ ಸ್ಥಳ ಪರಿಶೀಲನೆImage Credit source: Tv9 Kannada
ಸಹದೇವ್​ ಮಾನೆ
| Edited By: |

Updated on: Feb 04, 2026 | 7:21 AM

Share

ಬೆಳಗಾವಿ, ಫೆಬ್ರವರಿ 04: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯ ಶಂಕರಾನಂದ ಪುತ್ಥಳಿ ಬಳಿ ನಡೆದಿದೆ. ರುಕ್ಮಿಣಿ ನಗರದ ನಿವಾಸಿ ಅಯಾಜ್ ಸವಣೂರ(36) ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಎಂಟು ಜನರಿಂದ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ ಹಿಂಡಲಗಾ ಬಳಿ ನಡೆದ ಅಪಘಾತವೇ ಘಟನೆಗೆ ಕಾರಣ ಎನ್ನಲಾಗಿದೆ. ಆ್ಯಕ್ಸಿಡೆಂಟ್ ಮಾಡಿ ಲಾರಿ ನಿಲ್ಲಿಸದೇ ಬಂದ ಕಾರಣ, ಬೆನ್ನುಹತ್ತಿ ಬಂದು ಚಾಲಕನ ಮೇಲೆ ನಡೆಸಿರುವ ಮಾಹಿತಿ ಇದೆ.

ಲಾರಿ ಚಾಲಕ ಅಯಾಜ್ ಸವಣೂರ ತೊಡೆ, ಕಿವಿ, ಬೆನ್ನು ಮತ್ತು ತಲೆ ಭಾಗಕ್ಕೆ ದುಷ್ಕರ್ಮಿಗಳು ಚಾಕುವಿನಿಂದ ಮನಬಂತೆ ಇರಿದಿದ್ದು, ಲಾರಿ ಮೇಲೂ ಕಲ್ಲು ತೂರಾಟ ನಡೆಸಿ, ಗಾಜು ಒಡೆದು ಅಟ್ಟಹಾಸ ಮೆರೆದಿದ್ದಾರೆ. ಗಂಭೀರ ಗಾಯಗೊಂಡ ಅಯಾಜ್​​ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಘಟನಾ ಸ್ಥಳಕ್ಕೆ ಬೆಳಗಾವಿ ಪೊಲೀಸರ ತಂಡ ಮತ್ತು ಸೋಕೋ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಆಸ್ತಿಗಾಗಿ ಒಡಹುಟ್ಟಿದವನನ್ನೇ ಕೊಂದ ಪಾಪಿ; ಒಂದೂವರೆ ಎಕರೆ ಜಮೀನಿಗಾಗಿ ಹರಿದ ನೆತ್ತರು

ಕೇಸರಿ ಧ್ವಜದ ವಾಟ್ಸ್ಯಾಪ್​ ಸ್ಟೇಟಸ್ ವಿಚಾರಕ್ಕೆ ಹಲ್ಲೆ

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಪುಟ್ಪಾಕ್ ಗ್ರಾಮದಲ್ಲಿ ಕೇಸರಿ ಧ್ವಜದ ವಾಟ್ಸ್ಯಾಪ್​ ಸ್ಟೇಟಸ್ ವಿಚಾರಕ್ಕೆ ತಾಯಿ ಮತ್ತು ಮಗನ ಮೇಲೆ ಅನ್ಯ ಕೋಮಿನವರಿಂದ ಹಲ್ಲೆ ನಡೆದಿದೆ. ಮಸೀದಿ ಮೇಲೆ ಕೇಸರಿ ಧ್ವಜ ಕಟ್ಟಿದ ರೀತಿಯಲ್ಲಿ ಸ್ಟೇಟಸ್ ಹಾಕಿದ ಆರೋಪ ಹಿನ್ನೆಲೆ ಮನೆಗೆ ಹೋಗಿ ಸ್ಟೇಟಸ್ ಹಾಕಿದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಮಗನನ್ನ ಹೊಡೆದಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ತಾಯಿ ಮೇಲೆಯೂ ಹಲ್ಲೆ ನಡೆಸಲಾಗಿದೆ. ಶಿವ ಮಾಲಾಧಾರಿಗಳ ಕಾರ್ಯಕ್ರಮಕ್ಕಾಗಿ ಕೇಸರಿ ಧ್ವಜ ಹಾಕಲಾಗಿತ್ತು. ಇದೇ ದೃಶ್ಯಗಳನ್ನು ಎಡಿಟ್ ಮಾಡಿ ಯುವಕ ಸ್ಟೇಟಸ್ ಹಾಕಿದ್ದ. ಇನ್ನು ಹಲ್ಲೆ ಖಂಡಿಸಿ ಪ್ರತಿಭಟನೆ ಪುಟ್ಪಾಕ್ ಗ್ರಾಮಸ್ಥರು ಹಾಗೂ ಶಿವಮಾಲಾಧಾರಿಗಳು ಕೈಯಲ್ಲಿ ಶಿವ ಪಾರ್ವತಿ ಹಾಗೂ ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಗುರುಮಠಕಲ್ ಠಾಣೆ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ