Crime News: ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆ

| Updated By: ಆಯೇಷಾ ಬಾನು

Updated on: Nov 19, 2022 | 9:38 AM

ತನುಜಾ ಜೀವನದಲ್ಲಿ ಜಿಗುಪ್ಸೆಗೊಂಡು ಮಕ್ಕಳನ್ನ ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮತ್ತೊಂದೆಡೆ ಕುಡಿದ ಮತ್ತಿನಲ್ಲಿ ತಂದೆ ತನ್ನ ಮಕ್ಕಳ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Crime News: ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆ
ಸಾಂದರ್ಭಿಕ ಚಿತ್ರ
Follow us on

ಬೆಳಗಾವಿ: ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆಯಾಗಿದೆ. ತನುಜಾ ಪರಸಪ್ಪ ಗೋಡಿ(32), ಸುದೀಪ್(4), ರಾಧಿಕಾ(3) ಶವವಾಗಿ ಸಿಕ್ಕವರು.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ‌ ಚುಂಚನೂರು ಗ್ರಾಮದ ನಿವಾಸಿ ತನುಜಾ ಜೀವನದಲ್ಲಿ ಜಿಗುಪ್ಸೆಗೊಂಡು ಮಕ್ಕಳನ್ನ ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಕಳೆದ ರಾತ್ರಿ ಮೂರು ಜನರ ಶವಗಳನ್ನ ಪೊಲೀಸರು ಹೊರ ತೆಗೆದಿದ್ದಾರೆ. ಸವದತ್ತಿ ತಾಲೂಕು ಆಸ್ಪತ್ರೆಗೆ ಶವಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕುಡಿದ ಮತ್ತಿನಲ್ಲಿ ಮಕ್ಕಳಿಗೆ ಸುತ್ತಿಗೆಯಲ್ಲಿ ಹೊಡೆದ ತಂದೆ

ಮೈಸೂರು ತಾಲೂಕಿನ ಉದ್ಬೂರು ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ತಂದೆ ಕುಡಿದ ಮತ್ತಿನಲ್ಲಿ ತನ್ನ ಮಕ್ಕಳಿಗೆ ಸುತ್ತಿಗೆಯಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಘಟನೆಯಿಂದ 13 ವರ್ಷದ ಕುಸುಮಾ, 9 ವರ್ಷದ ಧನಶ್ರೀಗೆ ಗಂಭೀರ ಗಾಯಗಳಾಗಿದ್ದು ಗಾಯಾಳು ಮಕ್ಕಳಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ವಾಮಿನಾಯಕ ಎಂಬ ವ್ಯಕ್ತಿ ರಾತ್ರಿ ಕಂಠ ಪೂರ್ತಿ ಕುಡಿದು ಬಂದು ಪತ್ನಿ ಗೀತಾ ಜೊತೆ ಜಗಳ ಮಾಡಿದ್ದ. ಈ ವೇಳೆ ಮಕ್ಕಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸ್ವಮೂತ್ರ ಸೇವನೆ ಕ್ಯಾನ್ಸರ್​ಗೆ ಮುದ್ದು; ಪಠ್ಯದ ವಿರುದ್ಧ ಆಯುರ್ವೇದ ತಜ್ಞ ಡಾ‌.ಗಿರಿಧರ ಕಜೆ ಆಕ್ಷೇಪ

Hassan: ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಮಡದಿ ಮಕ್ಕಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿದ ಪಾಪಿ ಪತಿ

ಹಾಸನ: ದಂಪತಿಗಳ ನಡುವೆ ಜಗಳ ನಡೆದು ಬೇರೆಬೇರೆಯಾಗಿದ್ದರು. ಆದರೂ ಪತಿ ಮಕ್ಕಳನ್ನು ನೋಡಲು ಆಗಾಗ ಬರುತ್ತಿದ್ದ. ಆದರೆ ನಿನ್ನೆ ಮಕ್ಕಳನ್ನು ನೋಡಲು ಬಿಡಲಿಲ್ಲ ಎನ್ನುವ ಕಾರಣಕ್ಕೆ ಕೋಪಗೊಂಡ ಪತಿಮಹಾಶಯ ತನ್ನ ಮಡದಿ ಮಕ್ಕಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿದ ಘಟನೆ ತಾಲೂಕಿನ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಗೀತಾ, ಚಿರಂತನ್ (7), ನಂದನ್ (5) ಗಾಯಗೊಂಡಿದ್ದು, ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಹಚ್ಚಿದ ಬೆಂಕಿಯಿಂದಾಗಿ ಮನೆಯೊಳಗಿದ್ದ ಪೀಠೋಪಕರಣಗಳು ಸುಟ್ಟಭಸ್ಮವಾಗಿವೆ.

Published On - 8:20 am, Sat, 19 November 22