ಭಾರಿ ಗಾಳಿ ಮಳೆಗೆ ಹಾರಿಹೋದ ಚೆಕ್ ಪೊಸ್ಟ್ ಛಾವಣಿ: ಕರ್ತವ್ಯ ನಿರತ 2 ಸಿಬ್ಬಂದಿಗೆ ಗಂಭೀರ ಗಾಯ
ಭಾರಿ ಗಾಳಿ ಮಳೆಗೆ ಚೆಕ್ ಪೊಸ್ಟ್ ಛಾವಣಿ ಹಾರಿ ಕರ್ತವ್ಯ ನೀರತ ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರವಂತಹ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯ ಕರ್ನಾಟಕ ಮಹಾರಾಷ್ಟ್ರ ಗಡಿಯ ಚೆಕ್ ಪೊಸ್ಟ್ನಲ್ಲಿ ನಡೆದಿದೆ.
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ (heavy rains) ಚೆಕ್ ಪೊಸ್ಟ್ (check post) ಛಾವಣಿ ಹಾರಿ ಕರ್ತವ್ಯ ನಿರತ ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರವಂತಹ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯ ಕರ್ನಾಟಕ ಮಹಾರಾಷ್ಟ್ರ ಗಡಿಯ ಚೆಕ್ ಪೊಸ್ಟ್ನಲ್ಲಿ ನಡೆದಿದೆ. ತಾಲ್ಲೂಕು ಆಡಳಿತ ಸಿಬ್ಬಂದಿ ಮಾರುತಿ ಪಾಟೀಲ್, SSB ಸೇನಾ ಭದ್ರತಾ ಸಿಬ್ಬಂದಿ ಕಾಳುಸಿಂಗಗೆ ಗಾಯವಾಗಿದೆ. ಗಾಯಾಳುಗಳಿಗೆ ನಿಪ್ಪಾಣಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಾಳೆ ಚುನಾವಣಾ ಹಿನ್ನೆಲೆ ಕರ್ನಾಟಕ, ಮಹಾರಾಷ್ಟ್ರ ಗಡಿಯ ಚೆಕ್ ಪೋಸ್ಟ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಭಾರಿ ಪ್ರಮಾಣದ ಗಾಳಿ ಮಳೆ ಹಿನ್ನೆಲೆ ಚೆಕ್ ಪೊಸ್ಟ್ ಶೇಡಿನ ಛಾವಣಿ ಹಾಕಿ ಹೋಗಿ ಘಟನೆ ಸಂಭವಿಸಿದೆ.
ಬಸ್ ಮೇಲೆ ಧರೆಗುರುಳಿದ ಬೃಹತ್ ಮರ: ಯುವತಿ ಗಂಭೀರ
ಗದಗ: ಭಾರಿ ಗಾಳಿ ಮಳೆಗೆ ಬೃಹತ್ ಮರ ಧರೆಗುರುಳಿ ಸಾರಿಗೆ ಸಂಸ್ಥೆಯ ಬಸ್ ಮೇಲೆ ಬಿದಿದ್ದಿದೆ. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಬಳಿ ಘಟನೆ ನಡೆದಿತ್ತು. ಬಸ್ನಲ್ಲಿದ್ದ ಯುವತಿಗೆ ಗಂಭೀರವಾದ ಗಾಯವಾಗಿದ್ದು, ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಗಜೇಂದ್ರಗಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿತ್ತು.
ಇದನ್ನೂ ಓದಿ: ಬೆಂಗಳೂರಿನ ಭಾರೀ ಮಳೆಗೆ ಕುಸಿದುಬಿದ್ದ ಮನೆ: ಅದೃಷ್ಟವಶಾತ್ ತಪ್ಪಿದ ಅನಾಹುತ
ಧಾರಾಕಾರ ಮಳೆ ಕುಸಿದ ಮನೆ
ಬೆಂಗಳೂರು: ನಗರದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಸೋಮವಾರ ಕೂಡ ಜೋರು ಮಳೆಯಾಗಿದ್ದ ಪರಿಣಾಮ ಮನೆಯೊಂದು ಕುಸಿದಿತ್ತು. ಅಂದು ಸುರಿದ ಭಾರಿ ಮಳೆಗೆ ಮನೆ ಕುಸಿದುಬಿದ್ದು ಮನೆಯಲ್ಲಿ ಯಾರೂ ಇಲ್ಲದಿರುವುದರಿಂದ ಅನಾಹುತ ತಪ್ಪಿದೆ. ರಿಂಗ್ ರೋಡ್ನ ವೀರಭದ್ರೇಶ್ವರ ನಗರದಲ್ಲಿ ಘಟನೆ ಸಂಭವಿಸಿತ್ತು.
ಇದನ್ನೂ ಓದಿ: Karnataka Rain: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ; ಮತದಾನಕ್ಕೆ ಮಳೆ ಅಡ್ಡಿ, ನಾಳೆಯಿಂದ ಐದು ದಿನ ಕರ್ನಾಟಕದಲ್ಲಿ ಭಾರೀ ಮಳೆ
ಅಪಾರ್ಟ್ಮೆಂಟ್ನ ತಡೆಗೋಡೆ ಸಮೇತ ಮನೆ ಕುಸಿದುಬಿದಿದ್ದು, ತಡೆಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಜಖಂಗೊಂಡಿದ್ದವು. ಅವಘಡದಲ್ಲಿ ಮತ್ತೆರಡು ಕಾರುಗಳಿಗೆ ಹಾನಿ ಆಗಿದ್ದವು. ಗೋಪಾಲ್ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸಂಪೂರ್ಣ ಹಾನಿ ಆಗಿದ್ದವು.
ಅವಳಿ ನಗರದಲ್ಲಿ ಗುಡುಗು ಸಹಿತ ಭಾರಿ ಮಳೆ
ಹುಬ್ಬಳ್ಳಿ ಮತ್ತು ಧಾರವಾಡ ನಗರಗಳಲ್ಲದೆ, ಸುತ್ತಮುತ್ತಲ ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗಿದೆ. ಧಾರಾಕಾರ ಮಳೆಯಿಂದಾಗಿ ಹುಬ್ಬಳ್ಳಿಯ ದಾಜಿಬಾನ್ ಪೇಟೆಯ ರಸ್ತೆಗಳು ಹರಿಯವ ನದಿಗಳಂತೆ ಗೋಚರವಾದವು. ಅಂಗಡಿ-ಮುಂಗಟ್ಟುಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರವಾಹನಗಳು ಹರಿಯುತ್ತಿದ್ದ ಮಳೆನೀರಲ್ಲಿ ಕೊಚ್ಚಿ ಹೋಗದ ಹಾಗೆ ಹಗ್ಗ ಕಟ್ಟಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.