ಬೆಳಗಾವಿಯಲ್ಲಿ 2 ಪ್ರತ್ಯೇಕ ಅಪಘಾತ: ಐದು ಜನ ದುರ್ಮರಣ

ಬೆಳಗಾವಿಯಲ್ಲಿ ಇಂದು ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಐವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಒಂದೆಡೆ ಜಮಖಂಡಿ ಮಿರಜ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಟ್ರಾಕ್ಟರ್​ ಟ್ರೈಲರ್​ ಬಿದ್ದು ಮೂವರು ಸಾವನ್ನಪ್ಪಿದರೆ, ಇತ್ತ ಖಾನಾಪುರ ತಾಲೂಕಿನ ಗರಲಗುಂಜಿ ಗ್ರಾಮದ ಬಳಿ ಕ್ರೂಸರ್​, ಬೈಕ್​ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಬೆಳಗಾವಿಯಲ್ಲಿ 2 ಪ್ರತ್ಯೇಕ ಅಪಘಾತ: ಐದು ಜನ ದುರ್ಮರಣ
ಬೆಳಗಾವಿ ಅಪಘಾತ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 04, 2024 | 4:32 PM

ಬೆಳಗಾವಿ, ಫೆ.04: ಕಬ್ಬು ಸಾಗಿಸ್ತಿದ್ದ ಟ್ರ್ಯಾಕ್ಟರ್​ನ ಟ್ರೈಲರ್ ಬಿದ್ದು ಮೂವರು ಸಾವನ್ನಪ್ಪಿದ ಧಾರುಣ ಘಟನೆ ಬೆಳಗಾವಿ (Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮಾಲಾವ್ವಾ ಐನಾಪುರೆ(61), ಚಂಪಾ ತಳಕಟ್ಟಿ(45) ಹಾಗೂ ಭಾರತಿ ಘಾಟಗೆ (45) ಮೃತಪಟ್ಟಿದ್ದಾರೆ. ಮತೋರ್ವ ಮಹಿಳೆ ಶೇಡಬಾಳ ಗ್ರಾಮದ ಶೇಖವ್ವಾ ನರಸಾಯಿ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಇವರೆಲ್ಲರೂ ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ಆಗುತ್ತಿರುವಾಗ ಈ ದುರ್ಘಟನೆ ನಡೆದಿದೆ.

ಕ್ರೂಸರ್​, ಬೈಕ್​ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಗರಲಗುಂಜಿ ಬಳಿ ಕ್ರೂಸರ್​ ಹಾಗೂ ಬೈಕ್​ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ರಾಮಲಿಂಗ ಮುತ್ಗೇಕರ್(20), ಹನುಮಂತ ಪಾಟೀಲ್(20) ಮೃತ ರ್ದುದೈವಿಗಳು. ಬೇಕ್ವಾಡ ಗ್ರಾಮದ ನಿವಾಸಿಗಳಾದ ಈ ಯುವಕರು, ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿ ಶಾಲೆಗೆ ಹೋಗುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಳ್ಳಕೆರೆ ಬಳಿ ಇನ್ನೊಂದು ರಸ್ತೆ ಅಪಘಾತ, ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದು ಕೆಎಸ್ಸಾರ್ಟಿಸಿ ಬಸ್ ಪಲ್ಟಿ, ಯಾವುದೇ ಪ್ರಾಣಾಪಾಯವಿಲ್ಲ

ಚಾಲಕನ ನಿಯಂತ್ರಣ ತಪ್ಪಿ ಪುಟ್ ಪಾತ್ ಗೆ ನುಗ್ಗಿದ ಲಾರಿ

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ನಗರದ ಪಿಎಸ್ಐ ಜಗದೀಶ್ ವೃತ್ತದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪುಟ್ ಪಾತ್​ಗೆ ಲಾರಿ ನುಗ್ಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಹಿಂದೂಪುರ ಕಡೆಯಿಂದ ಬೆಂಗಳೂರಿನ ಕಡೆ ಬರುತ್ತಿದ್ದ ಲೋಡ್ ಲಾರಿ, ತಿರುವು ಪಡೆಯುವ ವೇಳೆ ಏಕಾಏಕಿ ಅಂಗಡಿಗಳ ಮೇಲೆ ನುಗ್ಗಿದ್ದು, ಲಾರಿಯ ಚಕ್ರಕ್ಕೆ ಸಿಲುಕಿ ಬೆಡ್ ಶೀಟ್ ಮಾರುತ್ತಿದ್ದ ಯುವಕನ ಕಾಲು ಮುರಿದುಹೋಗಿದೆ. ಮಧ್ಯಪ್ರದೇಶ ಮೂಲದ ಶರವಣ ( 27 ) ಗಾಯಗೊಂಡ ಬೆಡ್ ಶೀಟ್ ಮಾರುವ ಯುವಕ. ಇನ್ನು ಕ್ರೇನ್ ಮೂಲಕ ಲಾರಿಯನ್ನ ಪುಟ್ ಪಾತ್​ನಿಂದ ಕೆಳಗಿಳಿಸುವ ಯತ್ನ ನಡೆಯುತ್ತಿದೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಅಪಘಾತ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Sun, 4 February 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ