ಬೆಳಗಾವಿಯಲ್ಲಿ ಐ.ಟಿ. ಪಾರ್ಕ್! 700 ಎಕರೆ ಜಮೀನು ಹಸ್ತಾಂತರಕ್ಕೆ ರಕ್ಷಣಾ ಸಚಿವ ರಾಜನಾಥ ಸಿಂಗ್ ರಿಂದ ಭರವಸೆ ದೊರೆತಿದೆ: ಸಿಎಂ ಬಸವರಾಜ ಬೊಮ್ಮಾಯಿ
Rajnath Singh: ಬೆಳಗಾವಿಯಲ್ಲಿ ಐ.ಟಿ. ಪಾರ್ಕ್ ಮಾಡುವ ಉದ್ದೇಶವಿದೆ. ಅದಕ್ಕೆ ಈ ಜಮೀನನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕಾಗುತ್ತದೆ. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ರಾಜನಾಥಸಿಂಗ್ ಅವರು, ಸಂಬಂಧಪಟ್ಟವರ ಜತೆ ಮಾತನಾಡಿ ವರದಿ ತರಿಸಿಕೊಂಡು ತೀರ್ಮಾನಿಸುವುದಾಗಿ ತಿಳಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
ನವದೆಹಲಿ: ಬೆಳಗಾವಿಯಲ್ಲಿ (Belagavi) 700 ಎಕರೆ ಹುಲ್ಲುಗಾವಲಿನ ಪ್ರದೇಶ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿದೆ. ಅದು ರಾಜ್ಯ ಸರ್ಕಾರದ ಜಮೀನು. ಈ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರು (Union Defence Minister Rajnath Singh) ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು (CM Basavaraj Bommai). ಅವರು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪಿಸಲಾಯಿತು ಎಂದರು.
ಬೆಳಗಾವಿಯಲ್ಲಿ ಐ.ಟಿ. ಪಾರ್ಕ್ ಮಾಡುವ ಉದ್ದೇಶವಿದೆ (Belagavi IT Park). ಅದಕ್ಕೆ ಈ ಜಮೀನನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕಾಗುತ್ತದೆ. ಅದಕ್ಕಾಗಿ ಈ ಜಮೀನನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ರಾಜನಾಥಸಿಂಗ್ ಅವರು, ಸಂಬಂಧಪಟ್ಟವರ ಜತೆ ಮಾತನಾಡಿ ವರದಿ ತರಿಸಿಕೊಂಡು ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಬೆಳಗಾವಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಮಿಲಿಟರಿ ಶಾಲೆ ಬಗ್ಗೆ ಅವಧಿ ವಿಸ್ತರಣೆಗೆ ಕೋರಲಾಗಿದ್ದ ಹಿನ್ನೆಲೆಯಲ್ಲಿ ವಿಸ್ತರಣೆ ನೀಡಿದ್ದಾರೆ. ಶಾಲೆಯ ಉದ್ಘಾಟನೆಗೆ ಕೇಂದ್ರ ರಕ್ಷಣಾ ಸಚಿವರನ್ನು ಆಹ್ವಾನಿಸಲಾಯಿತು ಎಂದೂ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
ರಾಜಕೀಯ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ಸಂಪುಟ ಪುನಾರಚನೆ ಬಗ್ಗೆ ನಡ್ಡಾ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ, ನಾನು ಯಾವುದೇ ಹೆಸರು ಅಮಿತ್ ಶಾಗೆ ಕೊಟ್ಟಿಲ್ಲ -ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ(Amit shah) ಭೇಟಿ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ(CM Basavaraj Bommai) ಪ್ರತಿಕ್ರಿಯಿಸಿದ್ದಾರೆ. 2-3 ದಿನಗಳಲ್ಲಿ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಅಮಿತ್ ಶಾ ಹೇಳಿದ್ದಾರೆ. ಜೆ.ಪಿ.ನಡ್ಡಾ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ನಿನ್ನೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. ಸಂಪುಟ ಸಂಬಂಧ ಯಾರ ಹೆಸರು ಕೂಡ ಪ್ರಸ್ತಾಪಿಸಿಲ್ಲ. ಮುಂದಿನ ವಾರ ಬಹಳ ಮುಖ್ಯ ಯಾಕೆಂದ್ರ ಸ್ಥಳೀಯ ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ರಾಜಕೀಯ ಸ್ಥಿತಿಗತಿ ಆಧಾರ ಬಗ್ಗೆ ಬದಲಾವಣೆ ಆಗಬಹುದು. ಬರುವ ಮೂರು ನಾಲ್ಕು ದಿನಗಳಲ್ಲಿ ನಿರ್ಧಾರವಾಗಲಿದೆ ಎಂದರು.
Published On - 7:07 pm, Wed, 11 May 22