AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ ವರ್ಷ ಭೀಕರ ಅಪಘಾತ ಕಂಡಿದ್ದ ರಸ್ತೆಯ ಅಗಲೀಕರಣಕ್ಕೆ ಇಂದು ಶಂಕುಸ್ಥಾಪನೆ: ಬೆಳಗಾವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮನ

ಬೆಳಗ್ಗೆ 11ಕ್ಕೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸಚಿವ ನಿತೀನ್‌ ಗಡ್ಕರಿ ಹೊಸ ಯೋಜನೆಗಳ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

ಕಳೆದ ವರ್ಷ ಭೀಕರ ಅಪಘಾತ ಕಂಡಿದ್ದ ರಸ್ತೆಯ ಅಗಲೀಕರಣಕ್ಕೆ ಇಂದು ಶಂಕುಸ್ಥಾಪನೆ: ಬೆಳಗಾವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮನ
ನಿತಿನ್​ ಗಡ್ಕರಿ
TV9 Web
| Updated By: ಆಯೇಷಾ ಬಾನು|

Updated on:Feb 28, 2022 | 10:08 AM

Share

ಬೆಳಗಾವಿ: ಜಿಲ್ಲೆಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಇಂದು ಬೆಳಗಾವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ಆಗಮಿಸಲಿದ್ದಾರೆ. ಇಂದು ಬೆಳಗ್ಗೆ 10.40ಕ್ಕೆ ವಿಶೇಷ ವಿಮಾನದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾ‌ನ ನಿಲ್ದಾಣಕ್ಕೆ(Belagavi Airport) ನಿತಿನ್ ಗಡ್ಕರಿ ಬಂದಿಳಿಯಲಿದ್ದಾರೆ. ಹೀಗಾಗಿ ನಿತಿನ್ ಗಡ್ಕರಿ ಆಗಮನಕ್ಕೂ ಮು‌ನ್ನ ಬೆಳಗಾವಿಗೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai), ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಆಗಮಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಯಿಂದ ಬೆಳಗಾವಿಗೆ ಸಿಎಂ ಬೊಮ್ಮಾಯಿ ಆಗಮಿಸಲಿದ್ದಾರೆ.

ಬೆಳಗಾವಿಯಲ್ಲಿ ಇಂದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ನಡೆಯಲಿದೆ. 238 ಕಿ.ಮೀ. ಉದ್ದದ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಇದೆ. ಬೆಳಗ್ಗೆ 11ಕ್ಕೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸಚಿವ ನಿತೀನ್‌ ಗಡ್ಕರಿ ಹೊಸ ಯೋಜನೆಗಳ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗಿಯಾಗಲಿದ್ದು ಶಂಕುಸ್ಥಾಪನೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ವಹಿಸಿಕೊಳ್ಳಲಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ದಶಕದ ಕಿರಿದಾದ ರಸ್ತೆಗೆ ಕೊನೆಗೂ ಕಾಲ ಕೂಡಿಬಂದಿದೆ. ಕಳೆದ ವರ್ಷ ಭೀಕರ ಅಪಘಾತದಲ್ಲಿ 11 ಜನ ಬಲಿ ಪಡೆದಿದ್ದ ಹಾಗೂ ಸಾವಿನ ಹೆದ್ದಾರಿ ಅಂತಲೇ ಕುಖ್ಯಾತಿ ಪಡೆದಿದ್ದ ರಸ್ತೆ ಅಗಲೀಕರಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಲಿದೆ. 1200 ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣಕ್ಕೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ಬೆಳಗಾವಿ-ಸಂಕೇಶ್ವರ, ಸಂಕೇಶ್ವರ-ಮಹಾರಾಷ್ಟ್ರ ಗಡಿಯವರೆಗೆ ಷಟ್ಪಥ ನಿರ್ಮಾಣ ಕಾಮಗಾರಿ. ಚೋರ್ಲಾ-ಜಾಂಬೋಟಿ-ಬೆಳಗಾವಿ ನಡುವಿನ ದ್ವಿಪಥ ಕಾಮಗಾರಿ. ವಿಜಯಪುರ-ಮುರಗುಂಡಿ (ಎನ್.ಎಚ್.548ಬಿ), ಸಿದ್ದಾಪುರ-ವಿಜಯಪುರ(ಎನ್.ಎಚ್.561ಎ) ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ ಬೆಳಗಾವಿಯಿಂದ ಹುಬ್ಬಳ್ಳಿಗೆ ತೆರಳುತ್ತಾರೆ. ಇಂದು ಬೆಳಗಾವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮನ ಹಿನ್ನೆಲೆ ಬೆಳಗಾವಿ ನಗರದಲ್ಲಿ ಸ್ವಾಗತ ಕೋರುವ ಬ್ಯಾನರ್‌ಗಳು ರಾರಾಜಿಸುತ್ತಿವೆ.

ಸದ್ಯ ಹುಬ್ಬಳ್ಳಿಯ ಮಥುರಾ ಎಸ್ಟೇಟ್​ನಲ್ಲಿರೋ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದ್ದು ಉಪಹಾರ ಸೇವನೆಯೊಂದಿಗೆ ಉಭಯ ನಾಯಕರ ಮಾತುಕತೆ ನಡೆಯುತ್ತಿದೆ. ಪ್ರಹ್ಲಾದ್ ಜೋಶಿ ಜೊತೆಗೆ ಹಲವು ವಿಚಾರಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ರಾಜ್ಯ ಬಜೆಟ್ ಸೇರಿದಂತೆ ಹಲವು ವಿಷಯಗಳ ಕುರಿತು ಕೇಂದ್ರ ಸಚಿವರ ಜೊತೆ ಚರ್ಚೆ ಸಾಧ್ಯತೆ ಇದೆ.

ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹೆಚ್ಚು ಅನುದಾನವನ್ನು ನೀಡಿದ್ದಾರೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಾವಿರಾರು ಕೋಟಿ ಅನುದಾನ ನೀಡಿದೆ.ರಸ್ತೆಗಳ ನಿರ್ಮಾಣಕ್ಕೆ ಹೆಚ್ಚು ಅನುದಾನವನ್ನು ನೀಡಿದ್ದಾರೆ. ಬೊಮ್ಮಾಯಿ ಒತ್ತಾಯ ಮಾಡಿದ ಹಿನ್ನೆಲೆ ಅನುದಾನ ಸಿಕ್ಕಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಸಾವಿರಾರು ಕೋಟಿಯ ಅನುದಾನವನ್ನ ಮೋದಿ ಸರ್ಕಾರ ರಾಜ್ಯಕ್ಕೆ ನೀಡಿದೆ. ಏಕಪಥ ರಸ್ತೆಯನ್ನ ಷಟ್ಪಥ ರಸ್ತೆಯನ್ನಾಗಿ ಮಾಡ್ತಿದ್ದೇವೆ. ಐತಿಹಾಸಕವಾಗಿ ರಸ್ತೆಗಳ ಅನುದಾನ ರಾಜ್ಯಕ್ಕೆ ಬಂದಿದೆ. ಇವತ್ತು ಗಡ್ಕರಿಯವರು ಹಲವು ಕಾಮಗಾರಿಗಳ ಶಂಕು ಸ್ಥಾಪನೆ, ಉಧ್ಘಾಟನೆಗೆ ಬರ್ತಿದ್ದಾರೆ. ಬೊಮ್ಮಾಯಿರ ಅವರ ಆಗ್ರಹದಿಂದ ಈ ರೀತಿ ಅನುದಾನ ಬರ್ತಿದೆ. ರಾಜ್ಯದ ಪರವಾಗಿ ಗಡ್ಕರಿಯವರನ್ನ ಅಭಿನಂದನೆ ಸಲ್ಲಿಸುತ್ತೆನೆ ಎಂದರು.

ಇನ್ನು ಇದೇ ವೇಳೆ ಸಿಎಂ ಬೊಮ್ಮಾಯಿ ಮಾತನಾಡಿದ್ದು ಕೇಂದ್ರ ಸಚಿಗ ನಿತಿನ್ ಗಡ್ಕರಿ ರಾಜ್ಯಕ್ಕೆ ಆಗಿಮಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶಂಕುಸ್ಥಾಪನೆಗೆ ಬರ್ತಿದ್ದಾರೆ. ಪಾದಯಾತ್ರೆಗೆ ಬಹಳ ಅವಶ್ಯಕತೆ ಕೊಡ ಅಗತ್ಯೆ ಇಲ್ಲ. ರಾಜಕೀಯಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡ್ತಿದೆ. ಅವರು ಡಿಪಿಆರ್ ಕೂಡಾ ಮಾಡಿರಲಿಲ್ಲ ಎಂದರು.

ಇದನ್ನೂ ಓದಿ: BSF Recruitment 2022: ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ: ತಿಂಗಳ ವೇತನ 69 ಸಾವಿರ ರೂ.

ಕಬ್ಬನ್ ಪಾರ್ಕ್​ನ ಬಾಲಭವನ ಅಭಿವೃದ್ಧಿ ಕೆಲಸಕ್ಕೆ ಜನಾಕ್ರೋಶ; ಸ್ಮಾರ್ಟ್ ಸಿಟಿ ಹೆಸರಲ್ಲಿ ಪ್ರಕೃತಿ ಸೌಂದರ್ಯಕ್ಕೆ ಧಕ್ಕೆ ಎಂದು ಅಸಮಾಧಾನ

Published On - 9:08 am, Mon, 28 February 22

‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್