ಬೆಳಗಾವಿ ಹಲಶಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಪುಂಡರು

ಬೆಳಗಾವಿ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿದ್ದ ಕನ್ನಡ ಬಾವುಟಕ್ಕೆ ಪುಂಡರು ಬೆಂಕಿ ಹಚ್ಚಿದ್ದಾರೆ. ರಾತ್ರಿ ಬೆಂಕಿ ಹಚ್ಚಿ, ಧ್ವಜಕಟ್ಟೆಯ ಮೇಲಿನ ಜಗಜ್ಯೋತಿ ಬಸವೇಶ್ವರ ಚಿತ್ರಕ್ಕೆ ಕಪ್ಪು ಮಸಿ ಬಳಿದು ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದಾರೆ.

ಬೆಳಗಾವಿ ಹಲಶಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಪುಂಡರು
ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ, ಮಸಿ ಬಳಿದಿದ್ದಾರೆ
Follow us
TV9 Web
| Updated By: sandhya thejappa

Updated on:Dec 20, 2021 | 1:35 PM

ಬೆಳಗಾವಿ: ಜಿಲ್ಲೆಯಲ್ಲಿ ಎಮ್ಇಎಸ್ ಪುಂಡರ ಅಟ್ಟಹಾಸಕ್ಕೆ ಇಡೀ ಕರ್ನಾಟಕ ಜನತೆ ಕೆಂಡಾಮಂಡಲವಾಗಿದೆ. ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದನ್ನು ವಿರೋಧಿಸಿ ಇಂದು ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಎಮ್ಇಎಸ್ ಸಂಘಟನೆ ನಿಷೇಧಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ಬಂದ್​ಗೆ ಕರೆ ನೀಡಲಾಗುತ್ತದೆ ಅಂತ ಎಚ್ಚರಿಕೆ ನೀಡುತ್ತಿದ್ದಾರೆ. ಈಗಾಗಲೇ ಎಮ್ಇಎಸ್ ಮತ್ತು ಶಿವಸೇನೆ ಸಂಘಟನೆ ವಿರುದ್ಧ ಕನ್ನಡಿಗರ ಕೂಗು ಮುಗಿಲು ಮುಟ್ಟಿದೆ. ಈ ನಡುವೆ ಜಿಲ್ಲೆಯ ಖಾನಾಪುರ ತಾಲೂಕಿನ ಹಲಶಿ ಗ್ರಾಮದಲ್ಲಿ ಪುಂಡರು ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದಾರೆ.

ಬೆಳಗಾವಿ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿದ್ದ ಕನ್ನಡ ಬಾವುಟಕ್ಕೆ ಪುಂಡರು ಬೆಂಕಿ ಹಚ್ಚಿದ್ದಾರೆ. ರಾತ್ರಿ ಬೆಂಕಿ ಹಚ್ಚಿ, ಧ್ವಜಕಟ್ಟೆಯ ಮೇಲಿನ ಜಗಜ್ಯೋತಿ ಬಸವೇಶ್ವರ ಚಿತ್ರಕ್ಕೆ ಕಪ್ಪು ಮಸಿ ಬಳಿದು ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಕನ್ನಡಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೆ ರಾರಾಜಿಸುತ್ತಿದೆ ಕನ್ನಡದ ಬಾವುಟ ಕಿಡಿಗೇಡಿಗಳು ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದರು. ಆದರೆ ಗ್ರಾಮಸ್ಥರು, ಪೊಲೀಸರು ಹೊಸ ಬಾವುಟವನ್ನು ಹಾರಿಸಿದ್ದಾರೆ. ನಂದಗಡ ಪೊಲೀಸ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಾಗಿದೆ.

ಬೃಹತ್ ಮೆರವಣಿಗೆ ಇಂದು ಕರವೇ ಕಾರ್ಯರ್ತರು ಬೆಳಗಾವಿಯಲ್ಲಿ ಬೃಹತ್ ಮೆರವಣಿಗೆ ಮಾಡಿದ್ದಾರೆ. ಪಾದಯಾತ್ರೆ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಎಮ್​ಇಎಸ್​ ಮತ್ತು ಶಿವಸೇನೆ ಬ್ಯಾನ್ ಆಗಬೇಕು ಅಂತ ಆಗ್ರಹಿಸಿದ್ದಾರೆ. ಹೋರಾಟವನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಕರ್ನಾಟಕ್ ಬಂದ್ ಎಚ್ಚರಿಕೆ ಸರ್ಕಾರ ಎಮ್​ಇಎಸ್​ ಮತ್ತು ಶಿವಸೇನೆಯನ್ನು ನಿಷೇಧಿಸದಿದ್ದರೆ ಕರ್ನಾಟಕ ಬಂದ್​ಗೆ ಕರೆ ನೀಡಲಾಗುತ್ತದೆ ಅಂತ ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಬುಧವಾರ ಈ ಬಗ್ಗೆ ಚರ್ಚೆ ನಡೆಸಿ ಬಂದ್​ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಅಂತ ವಾಟಾಳ್ ನಾಗಾರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ

ಮಹಿಳೆಯರ ವಿವಾಹ ವಯಸ್ಸು ಹೆಚ್ಚಿಸುವ ಕಾನೂನು, ಪರಿಶೀಲನೆಗೆ ಮುಕ್ತವಾಗಿದೆ ಎಂದ ಕೇಂದ್ರ

ಬಾಲಂಗೋಚಿಗಳಿಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಕಷ್ಟ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Published On - 1:23 pm, Mon, 20 December 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ