ಬೆಳಗಾವಿ ಅಧಿವೇಶನಕ್ಕೆ ಹೊರಟ ಬಸ್ಸಿಗೆ ಅಪರಿಚಿತ ವಾಹನ ಡಿಕ್ಕಿ, 20ಕ್ಕೂ ಹೆಚ್ಚು ಮಂದಿಗೆ ಗಾಯ

| Updated By: ಆಯೇಷಾ ಬಾನು

Updated on: Dec 11, 2023 | 11:00 AM

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನ್ಯಾಯ‌ಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಗ್ರಹಿಸಲು ಬೆಳಗಾವಿಗೆ ತೆರಳುತ್ತಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್​ಗೆ ಅಪಘಾತವಾಗಿದೆ. ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳಗಾವಿ ಅಧಿವೇಶನಕ್ಕೆ  ಹೊರಟ ಬಸ್ಸಿಗೆ ಅಪರಿಚಿತ ವಾಹನ ಡಿಕ್ಕಿ, 20ಕ್ಕೂ ಹೆಚ್ಚು ಮಂದಿಗೆ ಗಾಯ
ಅಪಘಾತ
Follow us on

ದಾವಣಗೆರೆ, ಡಿ.11: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ (Belagavi Session) ಹೊರಟಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು (Accident) ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ. ದಾವಣಗೆರೆ ನಗರದ ಹೊರವಲಯದ ಜಿಲ್ಲಾ ಪಂಚಾಯಿತ್ ಎದುರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಚಿಕ್ಕಬಳ್ಳಾಪುರ, ಚಿಂತಾಮಣಿ ಸೇರಿದಂತೆ ವಿವಿಧ ಕಡೆಗಳಿಂದ ಮೂರು ಬಸ್​ಗಳಲ್ಲಿ ಮಾದಿಗ ದಂಡೋರ ಸಮಿತಿ ಸದಸ್ಯರು ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದರು. ಮೂರು ಬಸ್ಸುಗಳಲ್ಲಿ ಒಂದು ಬಸ್ಸಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನ್ಯಾಯ‌ಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಗ್ರಹಿಸಲು ಬೆಳಗಾವಿಗೆ ತೆರಳುತ್ತಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್​ಗೆ ಅಪಘಾತವಾಗಿದೆ. ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಳಗಾವಿ: ಪುಂಡರ ಗೂಂಡಾಗಿರಿಯಿಂದ ಬೀದಿಗೆ ಬಿದ್ದ ವಿಕಲಚೇತನ ವ್ಯಕ್ತಿಯ ಕುಟುಂಬ

ಖಾಸಗಿ ಬಸ್ ಅಪಘಾತಕ್ಕೆ ಪ್ರಯಾಣಿಕ ಬಲಿ

ಖಾಸಗಿ ಬಸ್ ಅಪಘಾತವಾಗಿ ವ್ಯಕ್ತಿ ಮೃತಪಟ್ಟಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಉಗಣೆಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಲ್ಕೆರೆ ಗ್ರಾಮದ ಮಂಜುನಾಥ ಮೃತ ದುರ್ದೈವಿ. ಮತ್ತೋರ್ವನ ಸ್ಥಿತಿಯು ಗಂಭೀರ ಆಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಇನ್ನು ಉಗಣೆಕಟ್ಟೆ ಬಳಿ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ