Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾವಶ್ಯಕ ಗರ್ಭಕೋಶ ಶಸ್ತ್ರ ಚಿಕಿತ್ಸೆ; ಸರ್ಕಾರಿ ವೈದ್ಯನ ವಂಚನೆಗೆ ಸುವರ್ಣ ವಿಧಾನಸೌಧ ಬಳಿ ಮಹಿಳೆಯರಿಂದ ಧರಣಿ

ಕಳೆದ ಎಂಟು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಮಹಿಳೆಯರು ಕಣ್ಣೀರು ಹಾಕುತ್ತಿದ್ದು, ತಮಗೆ ನ್ಯಾಯ ದೊರಕಿಸಿಕೊಡುವಂತೆ ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ವೇಳೆ ಮನವಿ ಸ್ವೀಕರಿಸಲು ಬಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎದುರು ಮಹಿಳೆಯರು ಕಣ್ಣೀರಿಟ್ಟಿದ್ದಾರೆ.

ಅನಾವಶ್ಯಕ ಗರ್ಭಕೋಶ ಶಸ್ತ್ರ ಚಿಕಿತ್ಸೆ; ಸರ್ಕಾರಿ ವೈದ್ಯನ ವಂಚನೆಗೆ ಸುವರ್ಣ ವಿಧಾನಸೌಧ ಬಳಿ ಮಹಿಳೆಯರಿಂದ ಧರಣಿ
ಪ್ರಾತಿನಿಧಿಕ ಚಿತ್ರ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 05, 2023 | 5:14 PM

ಬೆಳಗಾವಿ, ಡಿ.05: ಸರ್ಕಾರಿ ವೈದ್ಯನ ವಂಚನೆಯಿಂದ ಅನಾವಶ್ಯಕ ಗರ್ಭಕೋಶ ಶಸ್ತ್ರ ಚಿಕಿತ್ಸೆಗೊಳಗಾದ ಮಹಿಳೆಯರು ಕಣ್ಣೀರು ಹಾಕುತ್ತಾ ಬೆಳಗಾವಿಯ ಸುವರ್ಣ ವಿಧಾನಸೌಧ(Suvarna Vidhana Soudha) ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು (Ranebennuru)ತಾಲೂಕು ಆಸ್ಪತ್ರೆ ವೈದ್ಯ ಡಾ.ಪಿ.ಶಾಂತ ಧನ ದಾಹಕ್ಕೆ 1500 ಕ್ಕೂ ಹೆಚ್ಚು ಮಹಿಳೆಯರು ನರಳಾಟ ನಡೆಸುವಂತಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ದೈಹಿಕವಾಗಿ ಮಾನಸಿಕವಾಗಿ ತೊಂದರೆ ಆಗುತ್ತಿದೆ. ಈ ಹಿನ್ನಲೆ ಆರ್ಥಿಕ ನೆರವು ಘೋಷಣೆಗೆ ಆಗ್ರಹಿಸಿ ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆಯರು ಧರಣಿ ನಡೆಸಿದ್ದಾರೆ.

ಎಂಟು ವರ್ಷಗಳಿಂದ ಹೋರಾಟ

ಕಳೆದ ಎಂಟು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಮಹಿಳೆಯರು ಕಣ್ಣೀರು ಹಾಕುತ್ತಿದ್ದು, ತಮಗೆ ನ್ಯಾಯ ದೊರಕಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ವೇಳೆ ಮನವಿ ಸ್ವೀಕರಿಸಲು ಬಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎದುರು ಮಹಿಳೆಯರು ಕಣ್ಣೀರಿಟ್ಟಿದ್ದು, ಸಿಎಂ ಗಮ‌ನಕ್ಕೆ ತಂದು ಪರಿಹಾರ ಕೊಡಿಸುವುದಾಗಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಜೊತೆಗೆ 2010 ರಿಂದ 2016ರ ಅವಧಿಯಲ್ಲಿ 1522 ಮಹಿಳೆಯರಿಗೆ ಅನಾವಶ್ಯಕ ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ಡಾ‌‌.ಪಿ.ಶಾಂತ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಅರ್ಜುನ ಆನೆಯ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರಿಂದ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ….

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ