ಬೆಳಗಾವಿ, ಡಿ.05: ಸರ್ಕಾರಿ ವೈದ್ಯನ ವಂಚನೆಯಿಂದ ಅನಾವಶ್ಯಕ ಗರ್ಭಕೋಶ ಶಸ್ತ್ರ ಚಿಕಿತ್ಸೆಗೊಳಗಾದ ಮಹಿಳೆಯರು ಕಣ್ಣೀರು ಹಾಕುತ್ತಾ ಬೆಳಗಾವಿಯ ಸುವರ್ಣ ವಿಧಾನಸೌಧ(Suvarna Vidhana Soudha) ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು (Ranebennuru)ತಾಲೂಕು ಆಸ್ಪತ್ರೆ ವೈದ್ಯ ಡಾ.ಪಿ.ಶಾಂತ ಧನ ದಾಹಕ್ಕೆ 1500 ಕ್ಕೂ ಹೆಚ್ಚು ಮಹಿಳೆಯರು ನರಳಾಟ ನಡೆಸುವಂತಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ದೈಹಿಕವಾಗಿ ಮಾನಸಿಕವಾಗಿ ತೊಂದರೆ ಆಗುತ್ತಿದೆ. ಈ ಹಿನ್ನಲೆ ಆರ್ಥಿಕ ನೆರವು ಘೋಷಣೆಗೆ ಆಗ್ರಹಿಸಿ ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆಯರು ಧರಣಿ ನಡೆಸಿದ್ದಾರೆ.
ಕಳೆದ ಎಂಟು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಮಹಿಳೆಯರು ಕಣ್ಣೀರು ಹಾಕುತ್ತಿದ್ದು, ತಮಗೆ ನ್ಯಾಯ ದೊರಕಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ವೇಳೆ ಮನವಿ ಸ್ವೀಕರಿಸಲು ಬಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎದುರು ಮಹಿಳೆಯರು ಕಣ್ಣೀರಿಟ್ಟಿದ್ದು, ಸಿಎಂ ಗಮನಕ್ಕೆ ತಂದು ಪರಿಹಾರ ಕೊಡಿಸುವುದಾಗಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಜೊತೆಗೆ 2010 ರಿಂದ 2016ರ ಅವಧಿಯಲ್ಲಿ 1522 ಮಹಿಳೆಯರಿಗೆ ಅನಾವಶ್ಯಕ ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ಡಾ.ಪಿ.ಶಾಂತ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಅರ್ಜುನ ಆನೆಯ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರಿಂದ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಪ್ಡೇಟ್ ಆಗುತ್ತಿದೆ….