Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಭಾಗಕ್ಕೆ ವಂದೇ ಮಾತರಂ ರೈಲು, ಕೆಲವೇ ದಿನಗಳಲ್ಲಿ ಮಹದಾಯಿ ಯೋಜನೆಗೆ ಶಂಕುಸ್ಥಾಪನೆ: ಯಡಿಯೂರಪ್ಪ ಘೋಷಣೆ

ಬೆಳಗಾವಿ ಭಾಗಕ್ಕೆ ವಂದೇ ಮಾತರಂ ರೈಲು ಯೋಜನೆ ಜಾರಿಯಾಗಲಿದೆ. ಹಾಗೇ ಕೆಲವೇ ದಿನಗಳಲ್ಲಿ ಮಹದಾಯಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದಾರೆ.

ಬೆಳಗಾವಿ ಭಾಗಕ್ಕೆ ವಂದೇ ಮಾತರಂ ರೈಲು, ಕೆಲವೇ ದಿನಗಳಲ್ಲಿ ಮಹದಾಯಿ ಯೋಜನೆಗೆ ಶಂಕುಸ್ಥಾಪನೆ: ಯಡಿಯೂರಪ್ಪ ಘೋಷಣೆ
ಬಿಎಸ್ ಯಡಿಯೂರಪ್ಪ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 28, 2023 | 6:20 PM

ಬೆಳಗಾವಿ: ಎಲೆಕ್ಷನ್​ಗೆ ರಣಕಹಳೆ ಮೊಳಗಿಸಿರುವ ರಾಜ್ಯ ಕೇಸರಿ ಪಡೆಗೆ ಇಂದು ಅಮಿತ್ ಶಾ  ಎಂಟ್ರಿಯಿಂದ ಮತ್ತಷ್ಟು ಹುರುಪು ತುಂಬಿತ್ತು. ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯ ಮಿಂಚಿನ ಸಂಚಾರ ನಡೆಸಿದರು. ಇನ್ನು ಬೆಳಗಾವಿ(Belagavi) ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಇಂದು(ಜನವರಿ 28) ನಡೆದ ಬಿಜೆಪಿ ಬೃಹತ್ ಜನಸಂಕಲ್ಪ​​ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರು ಬೆಳಗಾವಿ ಭಾಗಕ್ಕೆ ವಂದೇ ಮಾತರಂ ರೈಲು (vande bharat train)ಯೋಜನೆ ಜಾರಿಯಾಗಲಿದೆ. ಹಾಗೇ ಕೆಲವೇ ದಿನಗಳಲ್ಲಿ ಮಹದಾಯಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಘೋಷಣೆ ಮಾಡಿದರು.

ಇದನ್ನೂ ಓದಿ: NFSU: ಫಾರೆನ್ಸಿಕ್ ಯೂನಿವರ್ಸಿಟಿಗಾಗಿ ಪ್ರಲ್ಹಾದ್ ಜೋಶಿ ನನ್ನ ಗಂಟು ಬಿದ್ದಿದ್ದರು – ಜೋಶಿ ಕಾರ್ಯವೈಖರಿ ಶ್ಲಾಘಿಸಿದ ಅಮಿತ್ ಶಾ, ಸಿಎಂ ಬೊಮ್ಮಾಯಿ

ಇದು ವಿಜಯ ಸಂಕಲ್ಪ ಯಾತ್ರೆ ಅಲ್ಲ ವಿಜಯ ಯಾತ್ರೆ. ದೇಶದ ಇತಿಹಾಸದಲ್ಲಿ ಮನೆ ಮನೆಗೆ ಶುದ್ದ ನೀರು ಕೊಡುವ ಜಲಜೀವನ್ ಮಿಷನ್ ಯೋಜನೆ ಕೇವಲ ಬಿಜೆಪಿಗೆ ಮಾತ್ರ ಸಾಧ್ಯ. ಕಾಂಗ್ರೆಸ್ ಜನ ಹಿತ ಸಂಪೂರ್ಣ ಮರೆತು ಸ್ವಾರ್ಥಕ್ಕಾಗಿ ಮಾಡುತ್ತಿದ್ದಾರೆ. ರೈತರಿಗೆ ಹತ್ತು ಸಾವಿರ ರೂಪಾಯಿ ಕೊಡ್ತಿರುವ ತೃಪ್ತಿ ಇದೆ. ಒಂದೇ ಮಾತರಂ ರೈಲು ಮುಂದಿನ ದಿನಗಳಲ್ಲಿ ನೀಡುತ್ತೇವೆ. ಕಳಸಾಬಂಡೂರಿ ಯೋಜನೆಗೆ ಡಿಪಿಆರ್ ಆಗಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ತಡಿಯಲು ಯಾವ ಶಕ್ತಿಗೂ ಸಾಧ್ಯವಿಲ್ಲ. ರಾಜ್ಯದಲ್ಲಿ 140ಸ್ಥಾನಗಳನ್ನ ಗೆದ್ದು ಬಿಜೆಪಿ ಅಧಿಕಾರಕ್ಕೆ ತರೋಣ. ಬೆಳಗಾವಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರ ಗೆದ್ದು ಮತ್ತೊಮ್ಮೆ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ತರೋಣ. ಉಕ್ಕಿನ ಮನುಷ್ಯ ದೇಶದ್ರೋಹಿಗಳಿಗೆ ಸಿಂಹ ಸ್ವಪ್ನ ಆಗಿರುವ ಅಮಿತ್ ಶಾ ಅವರು ಬಂದಿದ್ದಾರೆ. ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ದೇಶದ ಅಭಿವೃದ್ಧಿಯಾಗಿದೆ. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಆಗುತ್ತಿದೆ. ಪ್ರಧಾನಿ ಮೋದಿ ಯಾವುದೇ ಕ್ಷೇತ್ರವನ್ನು ಕಡೆಗಣಿಸಿಲ್ಲ ಎಂದರು

ಉತ್ತರ ಕರ್ನಾಟಕದ ದಶಕಗಳ ಹೋರಾಟವಾದ ಮಹದಾಯಿ ಕಳಸಾ ಬಂಡೂರಿ ಯೋಜನೆ ಡಿಪಿಆರ್ ಗೆ ಕೇಂದ್ರ ಜಲ‌ ಆಯೋಗ ಅನುಮತಿ ನೀಡಿದೆ. ಈಗ ಅಧಿಕೃತವಾಗಿ ಕಾಮಗಾರಿಗೆ ಚಾಲನೆ ನೀಡಬೇಕಿದೆ. ಇದೀಗ ಆದಷ್ಟು ಬೇಗ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಬಿಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದು, ಮಹದಾಯಿ ಹೋರಾಟಗಾರರ ಸಂತಸಕ್ಕೆ ಕಾರಣವಾಗಿದೆ.

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು