AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಟಮೂರಿ ಮಹಿಳೆ‌‌ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಘಟನೆಗೆ ಕಾರಣವಾಗಿದ್ದ ಪ್ರೇಮಿಗಳ ಮದುವೆ ಮಾಡಿಸಿದ ಪೊಲೀಸ್

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಈ ಘಟನೆಗೆ ಕಾರಣವಾದ ಪ್ರೇಮಿಗಳನ್ನು ಪತ್ತೆ ಹಚ್ಚಿ ಪೊಲೀಸರು ಮದುವೆ ಮಾಡಿಸಿದ್ದಾರೆ. ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ಪ್ರೇಮಿಗಳ ಮದುವೆ ಮಾಡಿಸಲಾಗಿದೆ.

ವಂಟಮೂರಿ ಮಹಿಳೆ‌‌ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಘಟನೆಗೆ ಕಾರಣವಾಗಿದ್ದ ಪ್ರೇಮಿಗಳ ಮದುವೆ ಮಾಡಿಸಿದ ಪೊಲೀಸ್
ಪ್ರಾತಿನಿಧಿಕ ಚಿತ್ರ
Sahadev Mane
| Edited By: |

Updated on: Feb 01, 2024 | 8:52 AM

Share

ಬೆಳಗಾವಿ, ಫೆ.01: ಮಗ ಯುವತಿಯೊಂದಿಗೆ ಓಡಿ ಹೋದ ಎಂಬ ಕಾರಣಕ್ಕೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು (Woman) ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ (Assault) ನಡೆಸಲಾಗಿತ್ತು. ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿತ್ತು. ಸದ್ಯ ಈಗ ಈ ಘಟನೆಗೆ ಕಾರಣವಾಗಿದ್ದ ವಂಟಮೂರಿ ಗ್ರಾಮದ ಪ್ರೇಮಿಗಳ ಮದುವೆ ಮಾಡಿಸಲಾಗಿದೆ. ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ಮದುವೆ ಮಾಡಿಸಲಾಗಿದೆ.

ದುಂಡಪ್ಪ ಅಶೋಕ ನಾಯಕ್ ಎಂಬ ವಂಟಮೂರಿ ಗ್ರಾಮದ ಯುವಕ, ಪ್ರಿಯಾಂಕಾ ಬಸಪ್ಪ ನಾಯಕ್ ಎಂಬ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿಯ ಪೋಷಕರು ಇವರ ಪ್ರೀತಿಯನ್ನು ತಿರಸ್ಕರಿಸಿ ಯುವತಿಗೆ ಬೇರೊಬ್ಬರ ಜೊತೆ ಯಾದಿ ಮೇ ಶಾದಿ ಮಾಡಲು ನಿರ್ಧರಿಸಿದ್ದರು. ಈ ವಿಚಾರ ತಿಳಿದು ಯುವತಿಯ ನಿಶ್ಚಿತಾರ್ಥದ ಹಿಂದಿನ ದಿನ ಇಬ್ಬರೂ ಪರಾರಿ ಆಗಿದ್ದರು. ಮಗಳು ಯುವಕನ ಜೊತೆ ಓಡಿ ಹೋದ ವಿಚಾರ ತಿಳಿಯುತ್ತಿದ್ದಂತೆ ಯುವತಿ ಕುಟುಂಬಸ್ಥರು ಯುವಕನ ಮನೆಗೆ ನುಗ್ಗಿ ಮಲಗಿದ್ದ ದುಂಡಪ್ಪನ ತಾಯಿ ಕಮಲವ್ವಳನ್ನು ಹೊರಗೆ ಎಳೆದುಕೊಂಡು ಬಂದು ದೌರ್ಜನ್ಯವೆಸಗಿದ್ದರು. ಡಿ.10ರಂದು ಯುವಕನ ತಾಯಿಯನ್ನು ಯುವತಿಯ ಕಡೆಯವರು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿತ್ತು. ಬಳಿಕ ಬೆಳಗಾವಿ ಜಿಲ್ಲಾ ಪೊಲೀಸರು ಪ್ರೇಮಿಗಳನ್ನು ರಕ್ಷಣೆ ಮಾಡಿದ್ದರು. ಇದೀಗ ಉಪನೋಂದಣಿ ಕಚೇರಿಯಲ್ಲಿ ಕಾನೂನು ಪ್ರಕಾರ ವಿವಾಹ ಮಾಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಘಟನೆ ತಡೆದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಸನ್ಮಾನ

ಇನ್ನು ಮಹಿಳೆಯನ್ನು ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ‌ ಕಾಕತಿ ಪೊಲೀಸರು ಕಾರ್ಯಾಚರಣೆ ನಡೆಸಿ ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲೂ ಈ ಘಟನೆ ಪ್ರಸ್ತಾಪವಾಗಿತ್ತು. ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಇತ್ತೀಚೆಗೆ ಪ್ರೀತಿ ಮಾಡಿ ಮದುವೆ ಆಗುವುದು ಜಾಸ್ತಿ ಆಗಿದೆ. ಅದಕ್ಕೆ ಪೋಷಕರು ವಿರೋಧ ಮಾಡುತ್ತಾರೆ. ಆದರೆ, ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ನೀಡಲಾಗುತ್ತದೆ ಎಂದು ಹೇಳಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ