AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಆದೇಶಕ್ಕೆ ಕಾಯುತ್ತಿರುವ ಹಿಂಡಲಗ ಜೈಲು ಸಿಬ್ಬಂದಿ: ಧಾರವಾಡದಲ್ಲಿ ವಿನಯ್ ಕುಲಕರ್ಣಿ ಬೆಂಬಲಿಗರ ಸಂಭ್ರಮಾಚರಣೆ

ಧಾರವಾಡಕ್ಕೆ ತೆರಳುವಂತಿಲ್ಲ ಎಂದು ಸುಪ್ರೀಂಕೋರ್ಟ್​ ಆದೇಶಿಸಿರುವ ಕಾರಣ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ವಿನಯ್ ಕುಲಕರ್ಣಿ ಆಪ್ತರು ಹೇಳಿದ್ದಾರೆ.

ಜಾಮೀನು ಆದೇಶಕ್ಕೆ ಕಾಯುತ್ತಿರುವ ಹಿಂಡಲಗ ಜೈಲು ಸಿಬ್ಬಂದಿ: ಧಾರವಾಡದಲ್ಲಿ ವಿನಯ್ ಕುಲಕರ್ಣಿ ಬೆಂಬಲಿಗರ ಸಂಭ್ರಮಾಚರಣೆ
ವಿನಯ್ ಕುಲಕರ್ಣಿ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 19, 2021 | 5:20 PM

Share

ಬೆಳಗಾವಿ: ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಇದೀಗ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಜಾಮೀನು ದೊರೆತಿದೆ. ಆದರೆ ಬೆಳಗಾವಿ ಜಿಲ್ಲೆ ಹಿಂಡಲಗಾ ಜೈಲಿನ ಅಧಿಕಾರಿಗಳಿಗೆ ಇನ್ನೂ ಕೋರ್ಟ್​ ಆದೇಶದ ಪ್ರತಿ ಸಿಕ್ಕಿಲ್ಲ. ಕೊವಿಡ್ ಹಿನ್ನೆಲೆಯಲ್ಲಿ ಆದೇಶದ ಇಮೇಲ್ ಬಂದರೂ ವಿನಯ್ ಕುಲಕರ್ಣಿ ಬಿಡುಗಡೆ ಮಾಡಲು ಅವಕಾಶವಿದೆ.

ಇಂದು ಸಂಜೆ ಸಂಜೆ 6 ಗಂಟೆಯ ಒಳಗೆ ಆದೇಶದ ಪ್ರತಿ ಜೈಲು ಅಧಿಕಾರಿಗಳ ಕೈಸೇರಿದರೆ ಮಾತ್ರ ಇಂದು ವಿನಯ್ ಕುಲಕರ್ಣಿಯನ್ನು ಬಿಡುಗಡೆ ಮಾಡಲಾಗುತ್ತದೆ. ಆದೇಶ ಬರುವುದು ತಡವಾದರೆ ನಾಳೆ ಬಿಡುಗಡೆ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.

ನಾಳೆಯೇ ಬಿಡುಗಡೆ ಸಾಧ್ಯತೆ ವಿನಯ್ ಕುಲಕರ್ಣಿ ಅವರನ್ನು ನಾಳೆ ಬೆಳಿಗ್ಗೆಯೇ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಚಿವರ ಬೆಂಬಲಿಗರು ತಿಳಿಸಿದ್ದಾರೆ. ನಾಳೆ ಬೆಳಿಗ್ಗೆ 10ಕ್ಕೆ ಹಿಂಡಲಗಾ ಜೈಲಿನ ಎದುರು ಸೇರುವಂತೆ ವಿನಯ್ ಕುಲಕರ್ಣಿ ಬೆಂಬಲಿಗರು ಪರಸ್ಪರ ವಾಟ್ಸ್ಯಾಪ್ ಮೆಸೇಜ್ ಮೂಲಕ ಚರ್ಚಿಸಿದ್ದಾರೆ. ಬೆಳಗಾವಿಯಿಂದ ಬೆಂಗಳೂರಿಗೆ ವಿನಯ್ ಕುಲಕರ್ಣಿ ತೆರಳುವ ಸಾಧ್ಯತೆಯಿದೆ ಎಂದು ಮಾಜಿ ಸಚಿವರ ಆಪ್ತ ವಲಯ ಹೇಳಿದೆ.

ಧಾರವಾಡದಲ್ಲಿ ಬೆಂಬಲಿಗರ ಸಂಭ್ರಮ ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರಾದ ಹಿನ್ನೆಲೆ ಧಾರವಾಡದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು. ಧಾರವಾಡದ ಶಿವಗಿರಿ ಬಡಾವಣೆಯಲ್ಲಿನ ನಿವಾಸದ ಎದುರು ವಿಜಯೋತ್ಸವ ನಡೆಯಿತು. ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಮತ್ತು ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನದಲ್ಲಿದ್ದರು. ಕೊಲೆ ಪ್ರಕರಣದಲ್ಲಿ ಆಗಸ್ಟ್ 11ರಂದು ಸುಪ್ರೀಂಕೋರ್ಟ್​ ಜಾಮೀನು ನೀಡಿತ್ತು. ಅದರೆ ಸಾಕ್ಷಿನಾಶ ಪ್ರಕರಣ ಬಾಕಿಯಿದ್ದ ಕಾರಣ ಬಿಡುಗಡೆ ಸಾಧ್ಯವಾಗಿರಲಿಲ್ಲ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿತ್ತು. ಇದೀಗ ಸಾಕ್ಷ್ಯನಾಶ ಪ್ರಕರಣದಲ್ಲಿಯೂ ಜಾಮೀನು ದೊರೆತಿದ್ದು ವಿನಯ ಕುಲಕರ್ಣಿ ಅವರ ಬಿಡುಗಡೆ ಸಾಧ್ಯವಾಗಲಿದೆ.

ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿರುವ ತಮ್ಮ ಒಡೆತನದ ಜಿಮ್​ನಲ್ಲಿಯೇ ಜೂನ್ 15, 2016ರಲ್ಲಿ ಯೋಗೇಶ್​ ಗೌಡ ಅವರ ಕೊಲೆ ನಡೆದಿತ್ತು. ಪ್ರಕರಣ ಸಂಬಂಧ ನವೆಂಬರ್ 5, 2020ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಕೊಲೆ ಸಂಬಂಧ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಬಂಧನದ ಬಳಿಕ ಹಲವು ಬಾರಿ ವಿನಯ್ ಕುಲಕರ್ಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಧಾರವಾಡ ಹೈಕೋರ್ಟ್​ ಜಾಮೀನು ನಿರಾಕರಿಸಿತ್ತು. ಬಳಿಕ ಪ್ರಕರಣವನ್ನು ಜನಪ್ರತಿನಿಧಿಗಳ ಕೋರ್ಟ್​ಗೆ ವರ್ಗಾಯಿಸುವಂತೆ ವಿನಯ್ ಮನವಿ ಮಾಡಿದ್ದರು.

ಅಲ್ಲಿಯೂ ಜಾಮೀನು ಅರ್ಜಿ ವಜಾ ಅಗಿತ್ತು. ಕೊನೆಗೆ ಸುಪ್ರೀಂಕೋರ್ಟ್​ನಿಂದ ಆಗಸ್ಟ್​ 11ರಂದು ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಧಾರವಾಡಕ್ಕೆ ಬರಬಾರದು ಎಂದು ಷರತ್ತುವಿಧಿಸಿ ಸುಪ್ರೀಂಕೋರ್ಟ್​ ಜಾಮೀನು ನೀಡಿತ್ತು. ಆದರೆ ಸಾಕ್ಷ್ಯನಾಶ ಪ್ರಕರಣ ಬಾಕಿಯಿದ್ದ ಕಾರಣ ಬಿಡುಗಡೆ ಸಾಧ್ಯವಾಗಿರಲಿಲ್ಲ. ಇದೀಗ ಆ ಪ್ರಕಣದಲ್ಲಿಯೂ ಜಾಮೀನು ಸಿಕ್ಕಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದ್ದಾರೆ.

ಧಾರವಾಡಕ್ಕೆ ತೆರಳುವಂತಿಲ್ಲ ಎಂದು ಸುಪ್ರೀಂಕೋರ್ಟ್​ ಆದೇಶಿಸಿರುವ ಕಾರಣ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ವಿನಯ್ ಕುಲಕರ್ಣಿ ಆಪ್ತರು ಹೇಳಿದ್ದಾರೆ. ಸುಪ್ರೀಂಕೋರ್ಟ್ ವಿಧಿಸಿರುವ ಷರತ್ತಿನಲ್ಲಿ ಅವರು ವಾರಕ್ಕೆ ಎರಡು ಬಾರಿ ಸಿಬಿಐ ಕಚೇರಿಗೆ ಹಾಜರಾಗಬೇಕಿದೆ.

(Vinay Kulkarni Got Bail he May Release Tomorrow from Hindalga Jail)

ಇದನ್ನೂ ಓದಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಜಾಮೀನು

ಇದನ್ನೂ ಓದಿ: ಯೋಗೀಶ್​ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದರೂ ಸದ್ಯಕ್ಕೆ ಇಲ್ಲ ರಿಲೀಫ್

Published On - 5:17 pm, Thu, 19 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ