ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ

ಜೈಲಿನಿಂದ ಹೊರಬಂದು ಮಾತನಾಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ, ನಾನು ನಿರ್ದೋಷಿಯಾಗಿ ಹೊರಬರುವ ವಿಶ್ವಾಸ ನನಗಿತ್ತು. ಹಾಗಾಗಿ ನನಗೆ ಸುಪ್ರೀಂಕೋರ್ಟ್​​ನಿಂದ ಜಾಮೀನು ಸಿಕ್ಕಿದೆ. ನನ್ನನ್ನು ಬೆಂಬಲಿಸಿದ್ದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ

ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ
ಜೈಲಿನಿಂದ ಹೊರಬಂದು ಅಭಿಮಾನಿಗಳಿಗೆ ಕೈ ಮುಗಿಯುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ
Follow us
TV9 Web
| Updated By: sandhya thejappa

Updated on:Aug 21, 2021 | 11:57 AM

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ (Hindalga Jail) ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ವಿನಯ್ ಕುಲಕರ್ಣಿ (Vinay Kulkarni) ಇಂದು (ಆಗಸ್ಟ್ 21) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವಿನಯ್ ಬೆಳಗಾವಿ ತಾಲೂಕಿನ ಹಿಂಡಲಗಾ (Hindalga Jail) ಜೈಲಿನಲ್ಲಿದ್ದರು. ಸುಪ್ರೀಂಕೋರ್ಟ್​ನಿಂದ ವಿನಯ್​ಗೆ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಬಳಿಕ ಆಗಸ್ಟ್ 19ರಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​ನಿಂದ ಬೇಲ್ ಸಿಕ್ಕಿತ್ತು. ಜಾಮೀನಿನ ಮೇಲೆ ಇಂದು ವಿನಯ್ ಜೈಲಿನಿಂದ ಹೊರಬಂದಿದ್ದಾರೆ.

ಜೈಲಿನಿಂದ ಹೊರಬಂದು ಮಾತನಾಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ, ನಾನು ನಿರ್ದೋಷಿಯಾಗಿ ಹೊರಬರುವ ವಿಶ್ವಾಸ ನನಗಿತ್ತು. ಹಾಗಾಗಿ ನನಗೆ ಸುಪ್ರೀಂಕೋರ್ಟ್​​ನಿಂದ ಜಾಮೀನು ಸಿಕ್ಕಿದೆ. ನನ್ನನ್ನು ಬೆಂಬಲಿಸಿದ್ದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. 9 ತಿಂಗಳ ಬಳಿಕ ನನಗೆ ಜಾಮೀನು ಸಿಕ್ಕಿದೆ. ಉಳಿದ ರಾಜಕಾರಣಿಗಳೇ ಬೇರೆ, ನಾನೇ ಬೇರೆ. ಕಟ್ಟ ಕಡೆಯ ವ್ಯಕ್ತಿಯಿಂದ ಶ್ರೀಮಂತರವರೆಗೆ ನನ್ನೊಂದಿಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಜೈಲಿನಿಂದ ಬಿಡುಗಡೆಯಾದ ವಿನಯ್ ಹಿಂಡಲಗಾ ಗಣಪತಿ ದೇವಸ್ಥಾನಕ್ಕೆ ಹೋಗುತ್ತಾರೆ. ಅಲ್ಲಿಂದ  ನಾಗನೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಮಾಜಿ ಸಚಿವ ಜೈಲಿನಿಂದ ಬಿಡುಗಡೆಯಾದ ಖುಷಿಯಲ್ಲಿ ಅವರ ಬೆಂಬಲಿಗರು ವಿನಯ್​ನ ಎತ್ತಿಕೊಂಡು ಸಂಭ್ರಮಿಸಿದ್ದಾರೆ. ಅಲ್ಲದೇ ವಿನಯ್​ ಪರ ಘೋಷಣೆ ಮುಗಿಲು ಮುಟ್ಟಿದೆ. ವಿಕೆ ವಿಕೆ ಅಭಿಮಾನಿಗಳು ಕೂಗುತ್ತಿದ್ದಾರೆ. ಮಹಿಳಾ ಕಾರ್ಯಕರ್ತೆಯರು ಧಾರವಾಡದಿಂದ ಆರತಿಯೊಂದಿಗೆ ಬಂದಿದ್ದಾರೆ.

ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿ ಮಠಕ್ಕೆ ಭೇಟಿ ನೀಡಿ ಅಲ್ಲಮಪ್ರಭು ಶ್ರೀಗಳ ಆಶೀರ್ವಾದ ಪಡೆದ ಬಳಿಕ ವಿನಯ್ ಕುಲಕರ್ಣಿ, ಮಧ್ಯಾಹ್ನ ಬೆಂಗಳೂರಿಗೆ ತೆರಳುವ ಸಾಧ್ಯತೆಯಿದೆ. ಸಾಂಬ್ರಾ ಏರ್‌ಪೋರ್ಟ್‌ಗೆ ತೆರಳಿ ಮಧ್ಯಾಹ್ನ 3.40ರ ಫ್ಲೈಟ್‌ಗೆ ಬೆಂಗಳೂರಿಗೆ ತೆರಳುವ ಸಾಧ್ಯತೆಯಿದೆ.

ಹಣೆಗೆ ತಿಲಕವಿಟ್ಟು ಸ್ವಾಗತಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಿಂಡಲಗಾ ಜೈಲಿನಿಂದ ಹೊರಬಂದ ವಿನಯ್ ಕುಲಕರ್ಣಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು. ಈ ವೇಳೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು.

ಇದನ್ನೂ ಓದಿ

ಜೈಲಿನಿಂದ ಬಿಡುಗಡೆಯಾಗುವ ವಿನಯ್ ಕುಲಕರ್ಣಿ ಸ್ವಾಗತಕ್ಕೆ ರಾಖಿ ಹಿಡಿದು ನಿಂತಿರುವ ಲಕ್ಷ್ಮೀ ಹೆಬ್ಬಾಳ್ಕರ್

5 ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿದ್ದ ಸರಗಳ್ಳರನ್ನು ಅರೆಸ್ಟ್​ ಮಾಡಿದ ಸಿಸಿಬಿ ಪೊಲೀಸರು

(Vinay Kulkarni has been released from Hindalga jail)

Published On - 11:29 am, Sat, 21 August 21

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್