AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ: ನಾಳೆ ಬಾಗಲಕೋಟೆಯಲ್ಲಿ ಇಬ್ಬರು ಮಾಜಿ ಸಿಎಂಗಳ ಮತ ಬೇಟೆ

ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಹಿನಲ್ಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿದ್ದು,  ನಾಳೆ ಬಾಗಲಕೋಟೆಯಲ್ಲಿ  ಭರ್ಜರಿ ಮತಯಾಚನೆ ಮಾಡಲಿದ್ದಾರೆ.

ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ: ನಾಳೆ ಬಾಗಲಕೋಟೆಯಲ್ಲಿ ಇಬ್ಬರು ಮಾಜಿ ಸಿಎಂಗಳ ಮತ ಬೇಟೆ
TV9 Web
| Edited By: |

Updated on:Jun 06, 2022 | 9:11 PM

Share

ಬೆಳಗಾವಿ: ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಹಿನಲ್ಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಮಾಜಿ ಸಿಎಂ ಯಡಿಯೂರಪ್ಪ (Yadiyurappa) ಬೆಳಗಾವಿಯಲ್ಲಿ (Belagavi) ವಾಸ್ತವ್ಯ ಹೂಡಿದ್ದು,  ನಾಳೆ ಬಾಗಲಕೋಟೆಯಲ್ಲಿ  ಭರ್ಜರಿ ಮತಯಾಚನೆ ಮಾಡಲಿದ್ದಾರೆ. ನಾಳೆ ಬಾಗಲಕೋಟೆಯಲ್ಲಿ ಇಬ್ಬರು ಮಾಜಿ ಸಿಎಂಗಳು ಅಖಾಡಕ್ಕೆ ಇಳಿಯಲಿದ್ದಾರೆ. ಬೆಳಿಗ್ಗೆ ಯಡಿಯೂರಪ್ಪ ಅವರಿಂದ ಬಿಜೆಪಿ ಪರ ಮತಯಾಚನೆ ಮಾಡಲಿದ್ದಾರೆ. ಬಾಗಲಕೋಟೆ ಬಿವಿವಿ ಸಂಘದ ಅಡಿಟೋರಿಯಂ ಹಾಲ್ ನಲ್ಲಿ ಬೆಳಿಗ್ಗೆ ೧೧.೩೦ಕ್ಕೆ ಪ್ರಚಾರ ಸಭೆ ನಡೆಯಲಿದೆ. ನಂತರ ನಂತರ ೧ ಗಂಟೆಗೆ ಬಿ ಎಸ್ ವೈ ವಿಜಯಪುರಕ್ಕೆ (Vijayapur) ತೆರಳಲಿದ್ದಾರೆ.

ಇದನ್ನು ಓದಿ: ಮನೆಗೆ ಬಂದ ಹಾವನ್ನೆ ತನ್ನ ಮೃತ ಗಂಡ ಎಂದು ತಿಳಿದು ಹಾವಿನ ಜೊತೆ ನಾಲ್ಕು ದಿನ ವಾಸ ಮಾಡಿದ ಅಜ್ಜಿ

ಸಂಜೆ ೪ ಗಂಟೆಗೆ ಸಿದ್ದರಾಮಯ್ಯ ಮತಯಾಚನೆ ಮಾಡಿಲ್ಲದು, ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್ ಬಳಿ ಇರುವ ಲಡ್ಡು ಮುತ್ಯಾ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಚಾರ ಸಭೆ ಬಳಿಕ ಹುಬ್ಬಳ್ಳಿ ಕಡೆ ಸಿದ್ದರಾಮಯ್ಯ ಪ್ರಯಾಣಿಸಲಿದ್ದಾರೆ.

ಬೆಳಗಾವಿ: ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಹಿನಲ್ಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನಾಳೆ ನಾಡಿದ್ದು ಹನುಮಂತ ನಿರಾಣಿ, ಅರುಣ್ ಶಹಾಪುರ್ ಕ್ಷೇತ್ರದಲ್ಲಿ ನಾವೆಲ್ಲಾ ಮುಖಂಡರು ಪ್ರವಾಸ ಮಾಡ್ತಿದ್ದೇವೆ. ಹನುಮಂತ ನಿರಾಣಿ ಹೆಚ್ಚು ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಬರೋಬ್ಬರಿ 6 ಕೋಟಿಗೆ ಮಾರಾಟವಾಯ್ತು ನೆಕ್ಲೇಸ್! ಏಕಿಷ್ಟು ಡಿಮ್ಯಾಂಡ್ ಗೊತ್ತಾ?

ನಾಳೆ ಮತ್ತು ನಾಡಿದ್ದು ರಂದು ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕೈಗೊಳಲು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪ ಅರುಣ್ ಶಹಾಪುರ್ ಲೀಡ್ ಕಡಿಮೆಯಾಗಬಹುದು ನೂರಕ್ಕೆ ನೂರು ಗೆಲ್ಲುತ್ತಾರೆ.ಎರಡು ಕ್ಷೇತ್ರದಲ್ಲಿ ನಾವು ನೂರಕ್ಕೆ ನೂರಷ್ಟು ಗೆಲ್ಲುತ್ತೇವೆ. ಪ್ರಧಾನಿ ಮೋದಿಯವರ ಆಶೀರ್ವಾದದಿಂದ ವಾತಾವರಣ ಬಹಳ ಅನುಕೂಲಕರವಾಗಿದೆ. ಈಗ ಬರುವ ಚುನಾವಣೆಗಳಲ್ಲಿ ಸುಲಭವಾಗಿ ಗೆಲ್ಲುವ ಅವಕಾಶ ಇದೆ. ಹನುಮಂತ ನಿರಾಣಿ ಲೀಡ್ 50ಸಾವಿರ ಆಗಬಹುದು. ಅರುಣ್ ಶಹಾಪುರ್ ಲೀಡ್ ಹದಿನೈದು ಸಾವಿರ ಆಗುತ್ತೆ. ಮತದಾರರು ಕಡಿಮೆ ಇರುವ ಕಾರಣಕ್ಕೆ‌ ಲೀಡ್ ಕಡಿಮೆ ಆಗುತ್ತೆ ಎಂದು ಬಿಎಸ್‌ವೈ ಭವಿಷ್ಯ ನುಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:11 pm, Mon, 6 June 22

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ