ಬೆಳಗಾವಿ: ಮಲಪ್ರಭಾ ಡ್ಯಾಂನಿಂದ 4 ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಬಿಡುಗಡೆ

ಮಲಪ್ರಭಾ ಜಲಾಶಯದಿಂದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯ 14 ತಾಲೂಕುಗಳಿಗೆ ನೀರು ಬಿಡಲಾಗಿದೆ. ಸೆ.22 ರಿಂದ ಮುಂದಿನ 15 ದಿನಗಳ ಕಾಲ 1.5 ಟಿಎಂಸಿ ನೀರು ಕಾಲುವೆಗೆ ಬಿಡಲಾಗುತ್ತದೆ.

ಬೆಳಗಾವಿ: ಮಲಪ್ರಭಾ ಡ್ಯಾಂನಿಂದ 4 ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಬಿಡುಗಡೆ
ಮಲಪ್ರಭಾ ಡ್ಯಾಂ
Edited By: ವಿವೇಕ ಬಿರಾದಾರ

Updated on: Sep 22, 2023 | 2:32 PM

ಬೆಳಗಾವಿ ಸೆ.22: ಕಳೆದ ಜುಲೈ ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದ ಉತ್ತರ ಕರ್ನಾಟಕದ (North Karnataka) ಪ್ರಮುಖ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮತ್ತು ಭೀಮಾ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಜಲಾಶಯಶಗಳಲ್ಲಿ ನೀರು ಸಂಗ್ರಹಣೆಯಾಗಿದೆ. ಆದರೆ ಜುಲೈ ನಂತರ ಮಳೆಯಾಗದೆ ಬರಗಾಲ ಆವರಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸವದತ್ತಿ (Savadatti) ತಾಲೂಕಿನ ನವೀಲುತೀರ್ಥದಲ್ಲಿ ಮಲಪ್ರಭಾ ಜಲಾಶಯದಿಂದ (Malaprabha Dam) ಬಲದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡಲಾಗಿದೆ.

ಮಲಪ್ರಭಾ ಜಲಾಶಯದಿಂದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯ 14 ತಾಲೂಕುಗಳಿಗೆ ನೀರು ಬಿಡಲಾಗಿದೆ. ಸೆ.22 ರಿಂದ ಮುಂದಿನ 15 ದಿನಗಳ ಕಾಲ 1.5 ಟಿಎಂಸಿ ನೀರು ಕಾಲುವೆಗೆ ಬಿಡಲಾಗುತ್ತದೆ. ಈ ಬಗ್ಗೆ ಇತ್ತೀಚಿಗೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇಂದು ಸೆ.22 ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿ ಸಮ್ಮುಖದಲ್ಲಿ ನೀರು ಬಿಡಲಾಯಿತು.

ಇದನ್ನೂ ಓದಿ: ಕಾವೇರಿ ವಿವಾದ: ನ್ಯಾಯಾಲಯದ ಆದೇಶ ಪಾಲನೆ ಮಾಡಿದರೆ ಜನರ ಬದುಕು ನಶಿಸಿ ಹೋಗುತ್ತದೆ; ನಿರ್ಮಲಾನಂದನಾಥ ಶ್ರೀ 

ಸವದತ್ತಿ, ಧಾರವಾಡ ಜಿಲ್ಲೆಯಲ್ಲಿ ನೀರು ಬಿಡುವಂತೆ ಇತ್ತೀಚಿಗೆ ರೈತರು ಪ್ರತಿಭಟನೆ ನಡೆಸಿದ್ದರು. ಮಲಪ್ರಭಾ ಜಲಾಶಯ 37 ಟಿಎಂಸಿ ಸಾಮರ್ಥ್ಯ ಹೊಂದಿದೆ. ಮಳೆ ಕೊರತೆಯಿಂದ 21 ಟಿಎಂಸಿ ಮಾತ್ರ ನೀರು ಸಂಗ್ರಹವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us