ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಬಗ್ಗೆಯೂ ಚರ್ಚೆ? ಮತಾಂತರ ನಿಷೇಧ ವಿಧೇಯಕದಲ್ಲಿ ಪ್ರಸ್ತಾಪಿತ ಅಂಶಗಳು ಏನು?

ಮಂಗಳವಾರ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕವೂ ಮಂಡನೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ವಿಧಾನಪರಿಷತ್​​ನಲ್ಲಿ ಸದ್ಯಕ್ಕೆ ಬಿಜೆಪಿಗೆ ಬಹುಮತ ಇಲ್ಲದ ಹಿನ್ನೆಲೆ ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಬಗ್ಗೆಯೂ ಚರ್ಚೆ ನಡೆಸಲಾಗಿದೆ.

ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಬಗ್ಗೆಯೂ ಚರ್ಚೆ? ಮತಾಂತರ ನಿಷೇಧ ವಿಧೇಯಕದಲ್ಲಿ ಪ್ರಸ್ತಾಪಿತ ಅಂಶಗಳು ಏನು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Edited By:

Updated on: Dec 17, 2021 | 4:51 PM

ಬೆಳಗಾವಿ: ಸಂಪುಟ ಸಭೆಯಲ್ಲಿ ಮತಾಂತರ ‌ನಿಷೇಧ ವಿಧೇಯಕ ಮಂಡನೆಗೆ ಅನುಮೋದನೆ ಸಾಧ್ಯತೆ ಕೇಳಿಬಂದಿದೆ. ಸೋಮವಾರ ಮಧ್ಯಾಹ್ನ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕ ಮಂಡನೆಗೆ ಅನುಮೋದನೆ ಸಾಧ್ಯತೆ ಇದೆ. ಮಂಗಳವಾರ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕವೂ ಮಂಡನೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ವಿಧಾನಪರಿಷತ್​​ನಲ್ಲಿ ಸದ್ಯಕ್ಕೆ ಬಿಜೆಪಿಗೆ ಬಹುಮತ ಇಲ್ಲದ ಹಿನ್ನೆಲೆ ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಬಗ್ಗೆಯೂ ಚರ್ಚೆ ನಡೆಸಲಾಗಿದೆ.

ಮತಾಂತರ ನಿಷೇಧ ವಿಧೇಯಕದಲ್ಲಿ ಪ್ರಸ್ತಾಪಿತ ಅಂಶಗಳು ಹೀಗಿವೆ:

  • ಬಲವಂತದ ಮತಾಂತರ ಶಿಕ್ಷಾರ್ಹ ಎಂಬ ಪ್ರಕಾರವೇ ವಿಧೇಯಕ ಸಿದ್ಧತಾ ಹಂತದಲ್ಲಿದೆ
  • ಯಾವುದೇ ವ್ಯಕ್ತಿ ಅಥವಾ ಸಮುದಾಯದ ಬಲವಂತದ ಮತಾಂತರ ಮಾಡುವಂತಿಲ್ಲ
  • ವ್ಯಕ್ತಿ ಮತಾಂತರ ಹೊಂದಬೇಕಾದರೆ ಸಕ್ಷಮ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು
  • ಮತಾಂತರ ಪ್ರಕ್ರಿಯೆ ನಡೆಸಬೇಕಾದರೂ ಸಕ್ಷಮ‌ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು
  • ಅರ್ಜಿ ಸಲ್ಲಿಸಿದ ವ್ಯಕ್ತಿ ತನ್ನ ಇಚ್ಛೆಗೆ ಅನುಗುಣವಾಗಿ ನೀಡಿರುವ ಅರ್ಜಿ ಹಿಂಪಡೆಯಲು ಸ್ವತಂತ್ರ
  • ಮತಾಂತರ ಆಗಲು ಬಯಸುವ ವ್ಯಕ್ತಿಯ ಖಾಸಗಿತನ ಕಾಪಾಡಲು ಮತ್ತು ಧಾರ್ಮಿಕ ಹಕ್ಕನ್ನು ಕಾಪಾಡಲು ಮತಾಂತರ ಪ್ರಕ್ರಿಯೆ ಗೌಪ್ಯವಾಗಿಡುವಂತಿಲ್ಲ
  • ಮತಾಂತರ ಪ್ರಕ್ರಿಯೆಯೊಳಗೆ ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ತೊಡಗುವಂತೆ ಮಾಡಲು ಅವಕಾಶವಿಲ್ಲ
  • ಬಲವಂತದ ಮತಾಂತರ ಮಾಡುವ ಅಥವಾ ಮತಾಂತರಕ್ಕೆ ಪ್ರಚೋದನೆ ನೀಡುವ ವ್ಯಕ್ತಿಯನ್ನು ಬಂಧಿಸಲು ಅವಕಾಶ
  • ಬಂಧಿತನಾಗುವ ವ್ಯಕ್ತಿಗೆ ಜಾಮೀನು ಪಡೆಯಲು ಅವಕಾಶ ಇಲ್ಲದಂತೆ, ಜಾಮೀನುರಹಿತ ಎಂದು ಪರಿಗಣಿಸುವುದು
  • ಮತಾಂತರ ಪ್ರಕ್ರಿಯೆ ಯಾವುದೇ ಧಾರ್ಮಿಕ ಕಟ್ಟಡಗಳು, ಪ್ರಾರ್ಥನಾ ಕೇಂದ್ರಗಳಲ್ಲಿ ಮಾಡುವಂತಿಲ್ಲ
  • ಮತಾಂತರ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆಯುತ್ತಿದ್ದಲ್ಲಿ ನಿಗದಿತ ಪ್ರಕ್ರಿಯೆಯನ್ನು ತಟಸ್ಥ ಪ್ರದೇಶದಲ್ಲಿ ಮಾಡುವುದು ಕಡ್ಡಾಯ

ಮತಾಂತರ ನಿಷೇಧ ಕಾಯ್ದೆ ಜಾರಿ ವಿರೋಧಿಸಿ ಪ್ರತಿಭಟನೆ
ಬೆಳಗಾವಿ ಸುವರ್ಣಸೌಧದ ಸುವರ್ಣಗಾರ್ಡನ್​​ನಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಭೇಟಿ ನೀಡಿದ್ದಾರೆ. ಮತಾಂತರ ನಿಷೇಧ ಕಾಯ್ದೆಗೆ ಆತಂಕಪಡುವ ಅಗತ್ಯವಿಲ್ಲ. ಈ ಕಾಯ್ದೆಯಿಂದ ಯಾವುದೇ ರೀತಿಯ ತೊಂದರೆ ಇಲ್ಲ. ಸರ್ಕಾರಕ್ಕೆ ಜನರ ಮನಸ್ಸು ಗೆಲ್ಲುವ ಇಚ್ಛಾಶಕ್ತಿ ಹೊಂದಿಲ್ಲ. ಧರ್ಮಗಳ ಮಧ್ಯೆ ಧ್ವೇಷ ಹುಟ್ಟಿಸಿ ಅಧಿಕಾರಕ್ಕೆ ಬರುತ್ತಾರೆ. ನಾವೆಲ್ಲರೂ ಇಂತಹ ಸಂದರ್ಭದಲ್ಲಿ ಒಗ್ಗಟ್ಟಾಗಿರಬೇಕು. ಚರ್ಚ್ ಮೇಲೆ ದಾಳಿ ನಿರಂತರವಾಗಿ ನಡೆಯುತ್ತಲೇ ಇವೆ. ನಮ್ಮ ಪಕ್ಷ ನಿಮ್ಮ ರಕ್ಷಣೆಗೆ ಇದೆ ಎಂದು ಶಾಸಕ ಸತೀಶ್​​ ಜಾರಕಿಹೊಳಿ ಹೇಳಿದ್ದಾರೆ.

ಇದನ್ನೂ ಓದಿ: ಕ್ರೈಸ್ತ ಧರ್ಮಕ್ಕೆ ಮತಾಂತರ ವಿವಾದ ಹಿನ್ನೆಲೆ: ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿ ದಿಢೀರ್ ವರ್ಗಾವಣೆ

ಇದನ್ನೂ ಓದಿ: ಆಶ್ಲೆ ಇಂಟರ್ ನ್ಯಾಷನಲ್ ಸ್ಕೂಲ್ ವಿರುದ್ಧ ಮತಾಂತರ ಯತ್ನ ಆರೋಪ, ಶಾಲೆ ವಿರುದ್ದ ಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ

Published On - 4:46 pm, Fri, 17 December 21