ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ವಿಳಂಬ ಏಕೆ? ಕಾರಣ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ(Gruha Jyothi)ಯೋಜನೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭವಾಗಿದ್ದು, ಈ ಹಿನ್ನಲೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಗೃಹಜ್ಯೊತಿ ಯೋಜನೆಗೆ ಇವತ್ತಿನಿಂದ ಅರ್ಜಿ ಕಾಲ್‌ಫಾರ್ಮ್ ಮಾಡಿದ್ದೇವೆ. ಶೀಘ್ರದಲ್ಲೇ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೂಡ ಆರಂಭವಾಗಲಿದೆ ಎಂದರು.

ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ವಿಳಂಬ ಏಕೆ? ಕಾರಣ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 18, 2023 | 11:26 AM

ಬೆಳಗಾವಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ(Gruha Jyothi)ಯೋಜನೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭವಾಗಿದೆ. ಈ ಹಿನ್ನಲೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ‘ಗೃಹಜ್ಯೋತಿ ಯೋಜನೆಗೆ ಇವತ್ತಿನಿಂದ ಅರ್ಜಿ ಕಾಲ್‌ಫಾರ್ಮ್ ಮಾಡಿದ್ದೇವೆ. ಶೀಘ್ರದಲ್ಲೇ ಗೃಹ ಲಕ್ಷ್ಮೀ(Gruha Lakshmi)ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೂಡ ಆರಂಭವಾಗಲಿದ್ದು, ಸಾಫ್ಟ್​​ವೇರ್​, ಌಪ್​ ರೆಡಿ ಮಾಡುತ್ತಿದ್ದೇವೆ. ಹೀಗಾಗಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ವಿಳಂಬವಾಗಿದೆ ಎಂದು ಹೇಳಿದರು.

ಇಂದು(ಜೂ.18) ಬೆಳಗಾವಿ ತಾಲೂಕಿನ ಬಸ್ತವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಈಗಾಗಲೇ ಜಾಹೀರಾತು ಹಾಗೂ ಮಾಧ್ಯಮಗಳ ಮೂಲಕ ಜಾಗೃತಿ ಮಾಡುತ್ತಿದ್ದೇವೆ. ಗೃಹ ಲಕ್ಷ್ಮೀ ಅಪ್ಲಿಕೇಷನ್ ಕೂಡ ಅತೀ ಬೇಗ ಲಾಂಚ್ ಆಗಲಿದೆ. ಇನ್ನು ಇದಕ್ಕೊಸ್ಕರ ಪ್ರತಿ ಬೂತ್​ನಲ್ಲಿ ಓರ್ವ ಮಹಿಳೆ ಸೇರಿ ನಾಲ್ಕು ಜನರನ್ನ ನೇಮಕ ಮಾಡಲಾಗುತ್ತದೆ. ಸರಿಸುಮಾರು 1 ಕೋಟಿ 13 ಲಕ್ಷ ಕುಟುಂಬಗಳು ಇದರ ಉಪಯೋಗ ಪಡೆಯಲಿವೆ. ಇನ್ನು ಲಾಂಚ್ ಮಾಡಿದಾಗ ಗೊಂದಲ ಮೂಡಬಾರದು ಎಂಬ ಒಂದೇ ಕಾರಣಕ್ಕೆ ಸೂಕ್ಷ್ಮವಾಗಿ ಸಾಫ್ಟ್‌ವೇರ್ ರೆಡಿ ಮಾಡುತ್ತಿದ್ದೇವೆ. ಬಹಳ ಬೇಗ ಇದನ್ನ ಬಿಡುಗಡೆ ಮಾಡ್ತೀವಿ ಅದೇ ಕೆಲಸ ಪ್ರಗತಿಯಲ್ಲಿದೆ ಎಂದರು.

ಇದನ್ನೂ ಓದಿ:Gruha Jyoti Scheme: ಉಚಿತ ವಿದ್ಯುತ್‌ ಪಡೆಯಲು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಇದೇ ವೇಳೆ ಶಕ್ತಿ ಯೋಜನೆಯಿಂದ ಮಹಿಳೆಯರು ಪುಣ್ಯಕ್ಷೇತ್ರಗಳಿಗೆ ತೆರಳಿ ಬಸ್‌ಗಳು ಫುಲ್ ಆಗುತ್ತಿರುವ ವಿಚಾರ ‘ಮಹಿಳೆಯರು ಬರೀ ಮನೆ ಕೆಲಸಕ್ಕೆ, ಮಕ್ಕಳನ್ನ ಹೆರುವುದಕ್ಕೆ ಮಾತ್ರ ಸೀಮಿತವಾಗಬಾರದು, ಸಿದ್ದರಾಮಯ್ಯ ಅವರ ಸರ್ಕಾರ ಬಂದ ಮೇಲೆ ಮಹಿಳೆಯರು ನೆಮ್ಮದಿಯಿಂದ ಜೀವನ ಮಾಡಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಇದರಿಂದ ಎಲ್ಲಾ ದೇವಸ್ಥಾನಕ್ಕೆ ಹೋಗಿ, ಎಲ್ಲರೂ ಪುನೀತರಾಗಲಿ. ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲೆಂದು ನಾನೂ ಪ್ರಾರ್ಥಿಸುವೆ ಎಂದಿದ್ದಾರೆ.

ಇನ್ನು ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆಯೆಂಬ ವಿಚಾರವಾಗಿ ‘ ಇದು ಸಂಪೂರ್ಣ ದ್ವೇಷ ರಾಜಕಾರಣ ಬೇರೆ ಏನೂ ಅಲ್ಲ. ಎಫ್‌ಸಿಐದವರು ಮೊದಲು ಕೊಡುತ್ತೇನೆಂದು ಹೇಳಿ, ವಿತ್ ಡ್ರಾ ಮಾಡಿಕೊಂಡಿದ್ದಾರೆ. ರಾಜ್ಯದ ಜನರು ವಿಚಾರ ಮಾಡಬೇಕಾಗಿಲ್ಲ. ನಾವು ಏನು ಭರವಸೆ ಕೊಟ್ಟಿದ್ದೇವೆ ಅದನ್ನ ಈಡೇರಿಸುತ್ತೇವೆ, ಜಾರ್ಖಂಡ್, ತೆಲಂಗಾಣ, ಪಂಜಾಬ್ ಜೊತೆ ಚರ್ಚೆ ಆಗುತ್ತಿದೆ. ಹೆಚ್ಚಿನ ಮಾಹಿತಿಯನ್ನು ನಮ್ಮ ಆಹಾರ ಸಚಿವರು ಕೊಡುತ್ತಾರೆಂದು ಹೇಳಿದರು. ಈ ಸಂದರ್ಭದಲ್ಲಿ ಮಹದಾಯಿ ವಿಚಾರದಲ್ಲಿ ಗೋವಾಕ್ಕೆ ಮಹಾರಾಷ್ಟ್ರ ಬೆಂಬಲ ಕುರಿತು ‘ಅದರ ಬಗ್ಗೆ ನನಗೆ ಗೊತ್ತಿಲ್ಲ. ತಿಳಿದುಕೊಂಡು ಮಾತನಾಡ್ತೀನಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ