AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಪ್ರಕರಣ ಕೈಜಾರುವ ಆತಂಕ -ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಾಧಿತ ಯುವತಿ, ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ

ಎಸ್ಐಟಿ ರಚನೆ ಸಿಂಧುತ್ವ ಪ್ರಶ್ನಿಸಿರುವ ಅರ್ಜಿ ಇನ್ನೂ ಬಾಕಿ ಇದೆ. ಒಂದು ವೇಳೆ ಎಸ್ಐಟಿ ರಚಿಸಿರುವ ಕ್ರಮವೇ ಅಸಿಂಧುವಾದರೆ ತನಿಖಾ ವರದಿಯೂ ಅಸಿಂಧುಗೊಳ್ಳುತ್ತದೆ. ಇಂತಹ ವರದಿ ಆಧರಿಸಿ ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸುವುದೂ ಸೂಕ್ತವಲ್ಲ.

ಸಿಡಿ  ಪ್ರಕರಣ ಕೈಜಾರುವ ಆತಂಕ -ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಾಧಿತ ಯುವತಿ, ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ
ಸಿಡಿ ಪ್ರಕರಣ ಕೈಜಾರುವ ಆತಂಕ -ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಾಧಿತ ಯುವತಿ, ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ
TV9 Web
| Edited By: |

Updated on:Feb 12, 2022 | 10:00 AM

Share

ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕೈತಪ್ಪಿರುವ ಸಚಿವ ಸ್ಥಾನವನ್ನು ಮರಳಿ ಗಳಿಸಲು ಸಿಡಿ ಪ್ರಕರಣದಲ್ಲಿ (cd case) ಆರೋಪಿ ಸ್ಥಾನದಲ್ಲಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ (Ramesh jarkiholi)‌ ಸರ್ವಪ್ರಯತ್ನ ನಡೆಸಿರವ ಬೆನ್ನಿಗೇ ಪ್ರಕರಣವೇ ಎಲ್ಲಿ ಕೈತಪ್ಪುತ್ತದೋ ಎಂದು ಆತಂಕಗೊಂಡಿರುವ ಸಿಡಿ ಪ್ರಕರಣದ ಬಾಧಿತ ಯುವತಿ ನೇರವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ​ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣದಲ್ಲಿ ಎಸ್ಐಟಿ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯದಲ್ಲಿ ಸಲ್ಲಿಸಲು ಕಳೆದ ವಾರ (ಫೆಬ್ರವರಿ 3) ಹೈಕೋರ್ಟ್ (karnataka high court) ಅನುಮತಿ ನೀಡಿತ್ತು. ಆದರೆ ಬಾಧಿತ ಯುವತಿ ಈ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ (supreme court)ಗೆ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂಕೋರ್ಟ್ ಪ್ರಕರಣವನ್ನು ಸೋಮವಾರ ಫೆಬ್ರವರಿ 14ರಂದು ವ್ಯಾಲೆಂಟೈನ್ಸ್ ಡೇ ದಿನ (Valentine’s Day) ಪ್ರಕರಣ ಕೈಗೆತ್ತಿಕೊಳ್ಳುವ ಅಂದಾಜಿದೆ.

ಅರ್ಜಿಯಲ್ಲಿ ಎತ್ತಿರುವ ಪ್ರಮುಖ ಅಂಶಗಳು ಹೀಗಿವೆ: ರಮೇಶ್ ಜಾರಕಿಹೊಳಿ ಕೋರಿಕೆ ಮೇರೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ಆರೋಪಿ ಕೋರಿಕೆಯಂತೆ ಎಸ್ಐಟಿ ರಚಿಸಿರುವ ಕ್ರಮವೇ ಅಸಿಂಧು. ಇಂತಹ ಎಸ್ಐಟಿ ನಡೆಸಿರುವ ತನಿಖಾ ವರದಿಗೆ ಅದರ ಮುಖ್ಯಸ್ಥರಾದ ಸೌಮೇಂದು ಮುಖರ್ಜಿಯವರೇ ಸಹಿ ಹಾಕಿರಲಿಲ್ಲ. ಹೈಕೋರ್ಟ್ ಈ ಕುರಿತು ವಿಚಾರಣೆ ನಡೆಸಿದಾಗ ಮೊದಲಿಗೆ ತನಗೂ, ವರದಿಗೂ ಸಂಬಂಧವಿಲ್ಲ ಎಂಬಂತೆ ಹೇಳಿಕೆ ನೀಡಿದ್ದ ಅಧಿಕಾರಿ ನಂತರ ಅದೇ ವರದಿಯನ್ನ ಅನುಮೋದಿಸಿದ್ದಾರೆ. ಇವೆಲ್ಲವನ್ನು ಗಮನಿಸಿದರೆ ಎಸ್ಐಟಿ ತನಿಖೆ ಮೇಲೆ ಹಲವು ಅನುಮಾನಗಳು ಮೂಡುತ್ತವೆ.

ಇನ್ನು, ಎಸ್ಐಟಿ ರಚನೆಯ ಸಿಂಧುತ್ವವನ್ನೇ ಪ್ರಶ್ನೆ ಮಾಡಲಾಗಿತ್ತು. ಆದ್ದರಿಂದಲೇ ಹೈಕೋರ್ಟ್ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ತಡೆ ನೀಡಿತ್ತು. ಆದರೆ, ಇದೀಗ ಎಸ್ಐಟಿಯ ತನಿಖಾ ವರದಿಯನ್ನು ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಿದೆ. ಎಸ್ಐಟಿ ರಚನೆ ಸಿಂಧುತ್ವ ಪ್ರಶ್ನಿಸಿರುವ ಅರ್ಜಿ ಇನ್ನೂ ಬಾಕಿ ಇದೆ. ಒಂದು ವೇಳೆ ಎಸ್ಐಟಿ ರಚಿಸಿರುವ ಕ್ರಮವೇ ಅಸಿಂಧುವಾದರೆ ತನಿಖಾ ವರದಿಯೂ ಅಸಿಂಧುಗೊಳ್ಳುತ್ತದೆ. ಇಂತಹ ವರದಿ ಆಧರಿಸಿ ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸುವುದೂ ಸೂಕ್ತವಲ್ಲ. ಆದ್ದರಿಂದ, ಎಸ್ಐಟಿ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ನೀಡಿರುವ ಮಧ್ಯಂತರ ಆದೇಶಕ್ಕೆ ತಡೆ ನೀಡಬೇಕು ಎಂದು ಯುವತಿ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಹೈಕೋರ್ಟ್ 2022ರ ಫೆಬ್ರವರಿ 3ರಂದು ಸಿಡಿ ಪ್ರಕರಣದ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಎಸ್ಐಟಿಗೆ ಅನುಮತಿ ನೀಡಿತ್ತು. ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತೆ ಯುವತಿ 2021ರ ಮಾರ್ಚ್ 26 ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಮೇರೆಗೆ ದಾಖಲಿಸಿರುವ ಪ್ರಕರಣದ ತನಿಖೆ ಈಗಾಗೇ ಮುಗಿದಿದೆ.

ತನಿಖಾ ವರದಿಯನ್ನು ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಅನುಮೋದಿಸಿದ್ದಾರೆ. ವರದಿಯನ್ನು ಸಕ್ಷಮ ಅಧೀನ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ಕೋರಿ ಎಸ್‌ಟಿಸಿ ಮಧ್ಯಂತರ ಅರ್ಜಿ ಸಲ್ಲಿಸಿದೆ. ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸದಂತೆ ನಿರ್ಬಂಧಿಸಲು ನಮ್ಮ ಮುಂದೆ ಸೂಕ್ತ ಕಾರಣಗಳಿಲ್ಲ. ಆದ್ದರಿಂದ, ಎಸ್‌ಐಟಿ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬಹುದು ಎಂದು ಅನುಮತಿ ನೀಡಿ, ಹೈಕೋರ್ಟ್​ ಮಧ್ಯಂತರ ಆದೇಶ ಹೊರಡಿಸಿತ್ತು.

Published On - 9:56 am, Sat, 12 February 22