ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಸಿಪಿಐ ಅಮಾನತು

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಸ್ಥಳಕ್ಕೆ ಹೋಗಲು ತಡ ಮಾಡಿದ ಹಿನ್ನಲೆ ಕಾಕತಿ ಠಾಣೆಯ ಸಿಪಿಐ(CPI) ವಿಜಯ್ ಸಿನ್ನೂರ್ ಅವರನ್ನು ಅಮಾನತುಗೊಳಿಸಿ ಬೆಳಗಾವಿ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಆದೇಶಿಸಿದ್ದಾರೆ.

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಸಿಪಿಐ ಅಮಾನತು
ಸಿಪಿಐ ಅಮಾನತು
Edited By: ಕಿರಣ್ ಹನುಮಂತ್​ ಮಾದಾರ್

Updated on: Dec 15, 2023 | 9:49 PM

ಬೆಳಗಾವಿ, ಡಿ.15: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಸ್ಥಳಕ್ಕೆ ಹೋಗಲು ತಡ ಮಾಡಿದ ಹಿನ್ನಲೆ ಕಾಕತಿ ಠಾಣೆಯ ಸಿಪಿಐ(CPI) ವಿಜಯ್ ಸಿನ್ನೂರ್ ಅವರನ್ನು ಅಮಾನತುಗೊಳಿಸಿ ಬೆಳಗಾವಿ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಆದೇಶಿಸಿದ್ದಾರೆ. ಘಟನೆ ನಡೆದ ದಿನ ರಾತ್ರಿ ಮೂರು ಗಂಟೆಗೆ ಠಾಣೆಯ ಕಾನ್ಸ್‌ಟೇಬಲ್‌ ದೂರವಾಣಿ ಕರೆ ಮುಖಾಂತರ ಸಿಪಿಐಗೆ ಮಾಹಿತಿ ನೀಡಿದ್ದರು. ಆದರೆ, ಬೆಳಗ್ಗೆ 7 ಗಂಟೆಗೆ ಸಿಪಿಐ ವಿಜಯ್ ಸಿನ್ನೂರ್ ಘಟನಾ ಸ್ಥಳಕ್ಕೆ ತೆರಳಿದ್ದರು. ಈ ಕುರಿತು ಎಸಿಪಿ ಅವರು ಬೆಳಗಾವಿ ಪೊಲೀಸ್ ಆಯುಕ್ತರಿಗೆ ವರದಿ ನೀಡಿದ್ದರು.

ಘಟನೆ ವಿವರ

ಇದೇ ತಿಂಗಳ 11 ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಓರ್ವ ಮಹಿಳೆಯನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು.ಬಳಿಕ ಈ ಘಟನೆಗೆ ಸಂಬಂಧಪಟ್ಟಂತೆ 7 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದ ಹಿನ್ನಲೆ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು, ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯ ವರ್ತನೆ ತೋರಿದ್ದರು.  ರಾಜ್ಯವೇ ತಲೆತಗ್ಗಿಸುವಂತ ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ:ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಬೆಳಗಾವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್

ಈ ಕುರಿತು ಘಟನಾ ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಸಿದ್ದರಾಮಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ಅವರು, ಪ್ರಕರಣ ಸಂಬಂಧ ಮಹಿಳೆಯರು ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಪರಾರಿಯಾದ ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸ್ತಿದ್ದೇವೆ. ಮಹಿಳೆಯನ್ನ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ. ಮಾಹಿತಿ ಬಂದ ಕೂಡಲೇ ನಮ್ಮ ಸಿಬ್ಬಂದಿ ಬಂದು ತಕ್ಷಣ ಮಹಿಳೆ ರಕ್ಷಣೆ ಮಾಡಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 pm, Fri, 15 December 23

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us