AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಓಡಿ ಹೋಗಿದ್ದ ಯುವಕ, ಯುವತಿ ಪ್ರತ್ಯಕ್ಷ

ಪ್ರೀತಿಸಿದ ಯುವತಿ ಜೊತೆ ಯುವಕ ಓಡಿ ಹೋದ ಕಾರಣ ಯುವಕನ ತಾಯಿಯನ್ನ (Woman) ಬೆತ್ತಲೆಗೊಳಿಸಿ ಥಳಿಸಿ (Assault) ಮೃಗೀಯ ವರ್ತನೆ ತೋರಿದ ಘಟನೆ ಇಡೀ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇನ್ನು ಮನೆ ಬಿಟ್ಟು ಓಡಿ ಹೋಗಿದ್ದ ಜೋಡಿ ಇದೀಗ ಪ್ರತ್ಯಕ್ಷವಾಗಿದೆ.

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಓಡಿ ಹೋಗಿದ್ದ ಯುವಕ, ಯುವತಿ ಪ್ರತ್ಯಕ್ಷ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 13, 2023 | 2:25 PM

Share

ಬೆಳಗಾವಿ, (ಡಿಸೆಂಬರ್ 12): ಮನೆ ಬಿಟ್ಟು ಓಡಿಹೋಗಿದ್ದ ಬೆಳಗಾವಿಯ (Belagavi) ವಂಟಮೂರಿ ಗ್ರಾಮದ ಯುವಕ-ಯುವತಿ ಪ್ರತ್ಯಕ್ಷರಾಗಿದ್ದಾರೆ. ದುಂಡಪ್ಪ ನಾಯಕ್ ಮತ್ತು ಪ್ರಿಯಾಂಕಾ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಮದುವೆಗೆ ಕುಟುಂಬದಲ್ಲಿ ವಿರೋಧ ವ್ಯಕ್ತವಾಗಿತ್ತು. ಇದರಿಂದ ದುಂಡಪ್ಪ ಪ್ರೇಯಸಿಯನ್ನು ಕರೆದುಕೊಂಡು ಓಡಿ ಹೋಗಿದ್ದ. ಈ ಹಿನ್ನೆಲೆಯಲ್ಲಿ ಕೋಪಗೊಂಡ ಯುವತಿ ಮನೆಯವರು ದುಂಡಪ್ಪನ ತಾಯಿಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದರು. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಜೋಡಿ ಇದೀಗ ಪ್ರತ್ಯಕ್ಷವಾಗಿದ್ದು, ಬೆಳಗಾವಿಯ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದೆ. ಅಲ್ಲದೇ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ಪೊಲೀಸರು ಸಹ ಇಬ್ಬರ ವಿಚಾರಣೆ ನಡೆಸುತ್ತಿದ್ದಾರೆ.

ಬೆಳಗಾವಿಯ ವಂಟಮೂರಿ ಗ್ರಾಮದ ಯುವಕ-ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದರೂ ಸಹ ಯುವತಿ ಮನೆಯಲ್ಲಿ ಮದುವೆಗೆ ವಿರೋಧವಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಭಾನುವಾರ ರಾತ್ರಿ ಮನೆ ಬಿಟ್ಟು ಓಡಿ ಹೋಗಿದ್ದರು. ಬಳಿಕ ಯುವತಿ ಕುಟುಂಬಸ್ಥರು, ಯುವಕನ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದರು. ಕೈಗೆ ಸಿಕ್ಕ ವಸ್ತುಗಳನ್ನು ಪೀಸ್ ಪೀಸ್ ಮಾಡಿ ಮನೆಯನ್ನು ಹಾನಿಗೊಳಿಸಿದ್ದರು.ಸಾಲದಕ್ಕೆ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದರು. ಈ ಮೂಲಕ ಯುವಕನ ಮೇಲಿನ ಸಿಟ್ಟನ್ನು ತಾಯಿ ಮೇಲೆ ತೀರಿಸಿಕೊಂಡಿದ್ದರು.

ಇದನ್ನೂ ಓದಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ 4 ಮಹಿಳೆಯರು ಹಿಂಡಲಗಾ ಜೈಲಿಗೆ ಶಿಫ್ಟ್

ಇನ್ನು ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲ್ಲೆಗೊಳಗಾದ ಕುಟುಂಬವನ್ನು ಸಚಿವರು, ಶಾಸಕರು ಭೇಟಿ ಮಾಡಿ ತಪ್ಪಿತಸ್ಥರಿಗೆ ತಕ್ಷ ಶಿಕ್ಷೆಯಾಗಲಿದೆ ಎಂದು ಧೈರ್ಯ ಹೇಳಿದ್ದರು. ಘಟನೆ ಸಂಬಂಧ ಏಳು ಜನರನ್ನ ಕಾಕತಿ ಪೊಲೀಸರು ನಿನ್ನೆಯೇ ಬಂಧಿಸಿದ್ದು, ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಹಿಂಡಲಗಾ ಜೈಲಿಗೆ (Hindalaga Jail) ಶಿಫ್ಟ್ ಮಾಡಲಾಗಿದೆ.

ಘಟನೆ ಹಿನ್ನೆಲೆ

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ದುಂಡಪ್ಪ ನಾಯಕ್ ಅನ್ನೋ ಯುವಕ ಮತ್ತು ಪ್ರಿಯಾಂಕ್ ಅನ್ನೋ ಯುವತಿ ಪರಸ್ಪರ ಪ್ರೀತಿಸ್ತಿದ್ರು. ಇದಕ್ಕೆ ಯುವತಿ ಕುಟುಂಬಸ್ಥರ ವಿರೋಧವಿತ್ತು.  ಯುವತಿ ಪ್ರಿಯಾಂಕಾಗೆ ಬೇರೊಂದು ಯುವಕನ ಜೊತೆ ಮದುವೆ ಮಾಡಿಸಲು ಮುಂದಾಗಿದ್ರು. ಆದ್ರೆ, ರಾತ್ರಿಯೇ ದುಂಡಪ್ಪ ಮತ್ತು ಪ್ರಿಯಾಂಕ್ ಇಬ್ಬರೂ ಊರು ಬಿಟ್ಟು ಓಡಿ ಹೋಗಿದ್ದರು.. ಇದ್ರಿಂದ ಕೆರಳಿದ ಪ್ರಿಯಾಂಕಾ ಕುಟುಂಬಸ್ಥರು, ದುಂಡಪ್ಪನ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಕಲ್ಲು ತೂರಿ ಹೆಂಚುಗಳನ್ನ ಧ್ವಂಸ ಮಾಡಿದ್ದಾರೆ. ಅಲ್ದೆ, ದುಂಡಪ್ಪ ತಾಯಿಯ  ಬಟ್ಟೆ ಬಿಚ್ಚಿ, ಮೆರವಣಿಗೆ ನಡೆಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Tue, 12 December 23

Follow Us
TV9 Web
TV9 Web

TV9 Kannada

Read More
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ